ಧಾರವಾಡ, ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ವಿವರಗಳು
ಶಿವಮೊಗ್ಗ, ಜನವರಿ 04: ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಶಿವಮೊಗ್ಗ ಮತ್ತು ಧಾರವಾಡದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹರು ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆಗಳು, ಅರ್ಹತೆಯ ವಿವರಗಳು ಇಲ್ಲಿವೆ.
ಶಿವಮೊಗ್ಗದಲ್ಲಿ ಸಹಾಯಕ ಪ್ರಾಧ್ಯಾಪಕರು, ಧಾರವಾಡದಲ್ಲಿ ಸಮಾಲೋಚಕ, ಬೋಧಕ ಹುದ್ದೆಗಳ ನೇಮಕಾತಿ ನಡೆಯಲಿದೆ. ಆಸಕ್ತರು, ಅರ್ಹರು ಅರ್ಜಿ ಸಲ್ಲಿಸಬಹುದು. ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಹಾಯಕ ಪ್ರಾಧ್ಯಾಪಕರ ನೇಮಕಾತಿ: ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಜನವರಿ 11ರಂದು ನೇರ ಸಂದರ್ಶನ ಆಯೋಜಿಸಲಾಗಿದೆ.
ಪಶುವೈದ್ಯಕೀಯ ಔಷಧ ಹಾಗೂ ವಿಷಶಾಸ್ತ್ರ ವಿಭಾಗ, ಜಾನುವಾರು ಸಾಕಾಣಿಕಾ ಸಂಕೀರ್ಣ ವಿಭಾಗ, ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ ಮತ್ತು ಪಶು ವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿ ನೇಮಕಾರಿ ಮಾಡಿಕೊಳ್ಳಲಾಗುತ್ತಿದೆ.
ಅಭ್ಯರ್ಥಿಗಳು ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಿ ಉಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.
ಈ ನೇರ ಸಂದರ್ಶನವು ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇಲ್ಲಿ ಜನವರಿ 11ರ ಬೆಳಗ್ಗೆ 11 ಗಂಟೆಯಿಂದ ನಡೆಯಲಿದೆ. ಆಯ್ಕೆಯಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ. 56,700 ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆಯ (ಎನ್‌ಇಟಿ) ಪ್ರಮಾಣ ಪತ್ರ ಹೊಂದಿರದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000 ವೇತನ ನೀಡಲಾಗುತ್ತದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-200872 ಹಾಗೂ ವಿಶ್ವವಿದ್ಯಾಲಯದ ವೆಬ್‌ಸೈಟ್ www.kvafsu.edu.in ಗೆ ಭೇಟಿ ನೀಡಬಹುದು.
ಸಮಾಲೋಚಕ, ಬೋಧಕ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧೀನದ, ಹುಬ್ಬಳ್ಳಿರುವ ರಾಜ್ಯ ಮಹಿಳಾ ನಿಲಯ ಸಂಸ್ಥೆಯಲ್ಲಿ ಅಗತ್ಯವಿರುವ ಸಮಾಲೋಚಕ (1) ಮತ್ತು ಬೋಧಕರ(1) ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಜನವರಿ 10ರೊಳಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಧಾರವಾಡ ಇಲ್ಲಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 0836-2447850 ಸಂಪರ್ಕಿಸಬಹುದು.
ಚಿತ್ರದುರ್ಗದಲ್ಲಿ ಕೆಲಸ ಖಾಲಿ ಇದೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ 4 ತಾಲ್ಲೂಕುಗಳ 6 ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ 1 ತಾಲ್ಲೂಕಿನ ಪುರಸಭೆಯಲ್ಲಿ ಖಾಲಿ ಇರುವ ವಿಕಲಚೇತನರ ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಹ ವಿಕಲಚೇತನರಿಂದ ಅರ್ಜಿ ಕರೆಯಲಾಗಿದೆ.
ಅರ್ಜಿ ಸಲ್ಲಿಕೆ ಮಾಡಲು ಜನವರಿ 17 ಕೊನೆಯ ದಿನವಾಗಿದೆ. ಚಿತ್ರದುರ್ಗ ತಾಲ್ಲೂಕಿನ ತುರುವನೂರು, ಅನ್ನೇಹಾಳ್, ಮಠದ ಕುರುಬರಹಟ್ಟಿ ಗ್ರಾಮ ಪಂಚಾಯಿತಿ, ಚಳ್ಳಕೆರೆ ತಾಲ್ಲೂಕಿನ ಗೌರಸಮುದ್ರ ಗ್ರಾಮ ಪಂಚಾಯಿತಿ, ಹಿರಿಯೂರು ತಾಲ್ಲೂಕಿನ ಸೂರಗೊಂಡನಹಳ್ಳಿ ಗ್ರಾಮ ಪಂಚಾಯಿತಿ, ಹೊಸದುರ್ಗ ತಾಲ್ಲೂಕಿನ ಜಾನಕಲ್ಲು ಗ್ರಾಮ ಪಂಚಾಯಿತಿಯಲ್ಲಿ ಗಾಮೀಣ ಪುನರ್ವಸತಿ ಕಾರ್ಯಕರ್ತರು ಹುದ್ದೆಗೆ ಹಾಗೂ ಹೊಳಲ್ಕೆರೆ ಪುರಸಭೆ (ವಾರ್ಡ್ ನಂ.01 ರಿಂದ 17 )ಯಲ್ಲಿ ಖಾಲಿ ಇರುವ ನಗರ ಪುನರ್ವಸತಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳನ್ನು ಮಾಸಿಕ ರೂ. 9000ಗಳ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಆಯಾ ಗ್ರಾಮ ಪಂಚಾಯಿತಿ, ಆಯಾ ನಗರ ವ್ಯಾಪ್ತಿಯ 18 ರಿಂದ 45 ವರ್ಷ ವಯೋಮಾನದವರಾಗಿರಬೇಕು. ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08194-235284. ಆಯಾ ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಿ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅವರಿಗೆ ಸಲ್ಲಿಸಬೇಕು.












Click it and Unblock the Notifications