ಶಿವಮೊಗ್ಗ; ಕೆಲಸ ಖಾಲಿ ಇದೆ, ಹುದ್ದೆಗಳ ವಿವರಗಳು

ಶಿವಮೊಗ್ಗ, ನವೆಂಬರ್ 14; ಶಿವಮೊಗ್ಗದಲ್ಲಿ ವಿ. ಆರ್. ಡಬ್ಲ್ಯೂ, ಜಿಲ್ಲಾ ಕಾರ್ಯಕ್ರಮ ಸಂಯೋಜಕ, ಜಿಲ್ಲಾ ಎಪಿಡೆಮಿಯಲಾಜಿಸ್ಟ್ ಹಾಗೂ ಬ್ಲಾಕ್ ಎಪಿಡೆಮಿಯಲಾಜಿಸ್ಟ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ನೇಮಕಾತಿಯ ವಿವರಗಳು ಇಲ್ಲಿವೆ.

ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಗ್ರಾಮೀಣ ಪುನರ್ವಸತಿ ಯೋಜನೆಯಡಿ ಶಿಕಾರಿಪುರ ತಾಲ್ಲೂಕಿನ ಬಿಳಿಕಿ ಗ್ರಾಮ ಪಂಚಾಯಿತಿಯಲ್ಲಿ ವಿ. ಆರ್. ಡಬ್ಲ್ಯೂ ಹುದ್ದೆಗೆ ಅರ್ಜಿ ಕರೆದಿದೆ.

jobs-in-shivamogga (1)

ಅರ್ಜಿ ಸಲ್ಲಿಸುವವರು 18 ರಿಂದ 45 ವರ್ಷದೊಳಗಿನವರಾಗಿದ್ದು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಾಸವಿರುವ ಅರ್ಹ ವಿಕಲಚೇತನ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಶಿಕಾರಿಪುರ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಎಂ.ಆರ್.ಡಬ್ಲ್ಯೂ ಆಗಿ ಕಾರ್ಯನಿರ್ವಹಿಸುತ್ತಿರುವ ಹುಚ್ಚರಾಯಪ್ಪ ಅವರನ್ನು ದೂರವಾಣಿ ಸಂಖ್ಯೆ 9741161346 ಇವರಿಂದ ಅರ್ಜಿ ಪಡೆಯಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಯೊಂದಿಗೆ ವಿ. ಆರ್. ಡಬ್ಲ್ಯೂ ಹುದ್ದೆಗೆ ಅಗತ್ಯವಾದ ದಾಖಲಾತಿಗಳಾದ 10ನೇ ತರಗತಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ತಹಶೀಲ್ದಾರ್‌ರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಯು.ಡಿ.ಐ.ಡಿ ಕಾರ್ಡ್‍ನೊಂದಿಗೆ ಅರ್ಜಿ ಸಲ್ಲಿಸಬೇಕು.

ಆಸಕ್ತ, ಅರ್ಹರು ಅರ್ಜಿಗಳನ್ನು ನವೆಂಬರ್ 21ರೊಳಗೆ ಸಲ್ಲಿಸಬೇಕು ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಜಿಲ್ಲಾ ಸಂಯೋಜಕ ಹುದ್ದೆ; ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಜಿಲ್ಲಾ ಬಾಲಭವನದಲ್ಲಿ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕರು ಹಾಗೂ ಕಚೇರಿ ಸಹಾಯಕರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ನೇಮಕ ಮಾಡಲಾಗುತ್ತಿದೆ, ಆಸಕ್ತರು ಅರ್ಜಿ ಸಲ್ಲಿಕೆ ಮಾಡಬಹುದು.

ಅರ್ಜಿ ನಮೂನೆಯನ್ನು ಉಪನಿರ್ದೇಶಕರ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಪಡೆದು ನವೆಂಬರ್ 29ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಗೆ ಖುದ್ದಾಗಿ ಅಥವಾ ಕಚೇರಿ ದೂರವಾಣಿ ಸಂಖ್ಯೆ 08182-295514 ಯನ್ನು ಸಂಪರ್ಕಿಸಬಹುದು.

ಎಪಿಡೆಮಿಯಲಾಜಿಸ್ಟ್ ಹುದ್ದೆ; ಶಿವಮೊಗ್ಗ ಜಿಲ್ಲಾ ಸಾಂಕ್ರಾಮಿಕ ರೋಗಗಳ ಕಣ್ಗಾವಲು ಘಟಕದಲ್ಲಿ ಖಾಲಿಯಿರುವ 1 ಜಿಲ್ಲಾ ಎಪಿಡೆಮಿಯಲಾಜಿಸ್ಟ್ ಹಾಗೂ ಭದ್ರಾವತಿ, ಶಿಕಾರಿಪುರ ಮತ್ತು ಸಾಗರ ತಾಲೂಕುಗಳಲ್ಲಿ 3 ಬ್ಲಾಕ್ ಎಪಿಡೆಮಿಯಲಾಜಿಸ್ಟ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಆಸಕ್ತರು ನವೆಂಬರ್ 20 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯ ತನಕ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ಆವರಣ, ಶಿವಮೊಗ್ಗ ಇಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಅರ್ಹ ಆಸಕ್ತ ಅಭ್ಯರ್ಥಿಗಳು ನಿಗದಿತ ಸಮಯದಲ್ಲಿ ಸೂಕ್ತ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವಂತೆ ಐ.ಡಿ.ಎಸ್.ಪಿ. ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+