ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ವೇತನ ವಿವರ

ಶಿವಮೊಗ್ಗ, ಜನವರಿ 03: ಶಿವಮೊಗ್ಗದಲ್ಲಿ ಯುವ ಪರಿವರ್ತಕರು, ಯುವ ಸಮಾಲೋಚಕ ಮತ್ತು ವರದಿಗಾರರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹರು ವಿವರಗಳನ್ನು ನೋಡಿಕೊಂಡು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.

ಜನ ಆರೋಗ್ಯ ಕೇಂದ್ರ, ಎಪಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್-ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅನುಷ್ಠಾನಗೊಂಡಿರುವ ಯುವ ಸ್ಪಂದನ ಕಾರ್ಯಕ್ರಮದಡಿಯಲ್ಲಿ ಕಾರ್ಯನಿರ್ವಹಿಸಲು ಹೊಸದಾಗಿ ಯುವ ಪರಿವರ್ತಕರು ಹಾಗೂ ಯುವ ಸಮಾಲೋಚಕರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

Jobs In Shivamogga Post And Salary Details

ಪ್ರತಿ ಜಿಲ್ಲೆಗೆ 3 ಪುರುಷ ಹಾಗೂ 2 ಮಹಿಳೆಯರು ಸೇರಿ 5 ಜನ ಯುವ ಪರಿವರ್ತಕರನ್ನು ಅಯ್ಕೆ ಮಾಡಲಾಗುವುದು. ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಮತ್ತು ಉತ್ತಮ ಸಂವಹನ ಕೌಶಲ್ಯ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಸ್ಪಷ್ಟವಾದ ಕನ್ನಡ ಉಚ್ಛಾರಣೆ ಹೊಂದಿರಬೇಕು. ವಯೋಮಿತಿ 21 ರಿಂದ 35 ವರ್ಷಗಳು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಗೌರವಧನವಾಗಿ ರೂ. 7,000ಗಳನ್ನು ನೀಡಲಾಗುವುದು.

ಪ್ರತಿ ಜಿಲ್ಲೆಗೆ ಓರ್ವ ಯುವ ಸಮಾಲೋಚಕರನ್ನು ಆಯ್ಕೆ ಮಾಡಲಾಗುತ್ತದೆ. ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಆಪ್ತ ಸಮಾಲೋಚನೆಯನ್ನು ಒದಗಿಸುವ ಕೌಶಲ್ಯ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಮತ್ತು ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ ಉಚ್ಛಾರಣೆ ಹಾಗೂ ವಯೋಮಿತಿ 21 ರಿಂದ 35 ವರ್ಷದೊಳಗಿನ ಅಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದವರಿಗೆ ಪ್ರತಿ ತಿಂಗಳು ಗೌರವಧನವಾಗಿ ರೂ. 9,000ಗಳನ್ನು ನೀಡಲಾಗುತ್ತದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 08182-223328 ಅನ್ನು ಸಂಪರ್ಕಿಸುವುದು.

ವರದಿಗಾರರ ಹುದ್ದೆ; ಆಕಾಶವಾಣಿ ಬೆಂಗಳೂರು ನಿಲಯದ ಪ್ರಾದೇಶಿಕ ಸುದ್ದಿ ವಿಭಾಗವು ಶಿವಮೊಗ್ಗ ಜಿಲ್ಲೆಗೆ ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಪಿ.ಜಿ. ಡಿಪ್ಲೊಮಾ/ ಪತ್ರಿಕೋದ್ಯಮ/ ಸಮೂಹ ಮಾಧ್ಯಮದಲ್ಲಿ ಪದವಿ ಹೊಂದಿದವರು ಕನಿಷ್ಠ ಎರಡು ವರ್ಷಗಳ ಮಾಧ್ಯಮ ಅನುಭವ ಉಳ್ಳವರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ವಯೋಮಿತಿ 24 ರಿಂದ 45 ವರ್ಷಗಳು.

ಆಸಕ್ತಿ ಉಳ್ಳವರು ತಮ್ಮ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಅಂಚೆ ವಿಳಾಸ ಸುದ್ದಿ ವಿಭಾಗದ ಮುಖ್ಯಸ್ಥರು, ಆಕಾಶವಾಣಿ ನಿಲಯ, ರಾಜಭವನ ರಸ್ತೆ, ಬೆಂಗಳೂರು ಇಲ್ಲಿಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-22356344.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+