ಮೀನುಗಾರಿಕೆ ಇಲಾಖೆ: 8 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು, ಸೆಪ್ಟಂಬರ್ 14: ಕರ್ನಾಟಕ ಲೋಕಸೇವಾ ಆಯೋಗವು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಹುದ್ದೆಗಳಾದ ಗ್ರೂಪ್ ಬಿ ನೇಮಕಾತಿಗಾಗಿ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟಂಬರ್ 20ರಿಂದ ಅಕ್ಟೋಬರ್ 19ರವರೆಗೆ ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ಬಹುದಿನದಿಂದ ಮೀನುಗಾರಿಕೆ ಇಲಾಖೆಯಡಿ ಸೇವೆ ಸಲ್ಲಿಸಲು ಬಯಸುತ್ತಿದ್ದ ಅರ್ಹ ನಿರುದ್ಯೋಗಿಗಳ ಆಸೆ ಈಡೇರಿಲಿದೆ. ಇಲಾಖೆಯಲ್ಲಿ ಮೀನುಗಾರಿಕೆ ಸಹಾಯಕ ನಿರ್ದೇಶಕ ಗ್ರೂಪ್ ಬಿ ವೃಂದದ ಒಟ್ಟು ಎಂಟು ಹುದ್ದೆಗಳ ಖಾಲಿ ಇವೆ.

ಅರ್ಜಿ ಸಲ್ಲಿಕೆಗೆ ಯಾರು ಅರ್ಹ

ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ವಿವಿಧ ವರ್ಗದ ಆಧಾರದಲ್ಲಿ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಠ 35 ವರ್ಷ ಹೊಂದಿರಬೇಕು. ಇತತೆ ಹಿಂದುಳಿದ ವರ್ಗ (ಒಬಿಸಿ) ಅಭ್ಯರ್ಥಿಗಳಿಗೆ ಕನಿಷ್ಠ 18 ಮತ್ತು ಗರಿಷ್ಠ 38 ವರ್ಷ ನಿಗದಿಪಡಿಸಲಾಗಿದೆ.

ಅದೇ ರೀತಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (ಎಸ್‌ಸಿ, ಎಸ್‌ಟಿ) ಅಥವಾ ಪ್ರವರ್ಗ-1ರ ಅಭ್ಯರ್ಥಿಗಳಲ್ಲಿ ಕನಿಷ್ಠ 18 ಹಾಗೂ ಗರಿಷ್ಠ 40 ವರ್ಷ ವಯೋಮಾನದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಇಲಾಖೆ ತಿಳಿಸಿದೆ.

Jobs: Karnataka Fisheries Department Application invited for filling 8 posts

ವಿದ್ಯಾರ್ಹತೆ ಏನು:

ಅಭ್ಯರ್ಥಿಯು ವಿಶ್ವವಿದ್ಯಾಲಯದಿಂದ ಮೀನುಗಾರಿಕೆ ವಿಜ್ಞಾನದಲ್ಲಿ ಪದವಿ (ಬಿ.ಎಫ್‌.ಎಸ್‌ಸಿ) ವಿದ್ಯಾರ್ಹತೆ ಹೊಂದಿರುವುದು ಕಡ್ಡಾಯಗೊಳಿಸಿ ಉದ್ಯೋಗಕ್ಕೆ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಬಳಿಕ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 49,900ರೂ.ನಿಂದ 78,200 ರೂ.ವರೆಗೆ ಮಾಸಿಕ ವೇತನ ಇರಲಿದೆ.

ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದರೆ ಮಾತ್ರ ಆಯ್ಕೆಗೆ ಅರ್ಹರಾಗುತ್ತಾರೆ. ಈ ಪರೀಕ್ಷೆಯನ್ನು ಗರಿಷ್ಠ 150 ಅಂಕಗಳಿಗೆ ನಡೆಸಲಿದ್ದು, ಅಭ್ಯರ್ಥಿಯು ಅರ್ಹತೆ ಹೊಂದಲು ಕನಿಷ್ಠ 50 ಅಂಕ ಪಡೆಯಬೇಕು. ಎಸ್‌ಎಸ್‌ಎಲ್‌ಸಿ ಹಂತದಲ್ಲಿ ಪ್ರಥಮ ಭಾಷೆ ಕನ್ನಡ ಮಾನದಂಡವಾಗಿಟ್ಟುಕೊಂಡು ಈ ಪ್ರಶ್ನೆ ಪ್ರತ್ರಿಕೆ ರೂಪಿಸಲಾಗಿರುತ್ತದೆ.

ಅರ್ಜಿ ಸಲ್ಲಿಕೆಯ ಆನ್‌ಲೈನ್ ಲಿಂಕ್ ಅನ್ನು ಸೆಪ್ಟಂಬರ್ 20ಕ್ಕೆ ಬಿಡುಗಡೆ ಮಾಡಲಾಗುವುದು. ಹುದ್ದೆ ಸಂಪೂರ್ಣ ವಿವರ, ಉದ್ಯೋಗದ ಸ್ಥಳ ಹಾಗೂ ಅರ್ಜಿ ಸಲ್ಲಿಸುವ ವಿಧಾನ ಸೇರಿದಂತೆ ಅಗತ್ಯ ಮಾಹಿತಿಗಾಗಿ ಲೋಕಸೇವಾ ಆಯೋಗ ಅಧಿಕೃತ ವೆಬ್‌ಸೈಟ್ https://www.kpsc.kar.nic.in/index.html ಭೇಟಿ ನೀಡುವಂತೆ ಪ್ರಕಟಣೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+