ನವೆಂಬರ್ 18ರಂದು ಜಾಯ್ ಅಲುಕಾಸ್‌ನಿಂದ ನೇರ ಸಂದರ್ಶನ

ಕಲಬುರಗಿ, ನವೆಂಬರ್ 15; ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜಾಯ್ ಅಲುಕಾಸ್‌ ನವೆಂಬರ್ 18ರಂದು ನೇರ ಸಂದರ್ಶನ ಆಯೋಜನೆ ಮಾಡಿದೆ. ಪಾಲ್ಗೊಳ್ಳಲು ವಯೋಮಿತಿ 18 ರಿಂದ 28 ವರ್ಷಗಳು.

ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂಭಾಗದಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರ ತನಕ ನೇರ ಸಂದರ್ಶನ ಆಯೋಜಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಹೇಳಿದ್ದಾರೆ.

ಜಾಯ್ ಅಲುಕಾಸ್ ಜ್ಯುವೆಲ್ಸರಿ ಕಂಪನಿಯವರು ಶೋರೂಂ ಸೇಲ್ಸ್ ಎಕ್ಸಿಕ್ಯೂಟಿವ್ 60 ಹುದ್ದೆಗಳಿಗೆ ಸಂದರ್ಶನ ನಡೆಸುತ್ತಿದ್ದಾರೆ. ನೇರ ಸಂದರ್ಶನದಲ್ಲಿ 18 ರಿಂದ 28 ವರ್ಷದೊಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.

Joyalukkas Walk In Interview At Kalaburagi On November 18

ಅರ್ಹ ಮತ್ತು ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ತಮ್ಮ ರೆಸ್ಯೂಮ್, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಆಧಾರ್ ಕಾರ್ಡ್‌ ದಾಖಲಾತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬೇಕು.

ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 08472-274846.

ಅಗ್ನಿಪಥ್ ಯೋಜನೆಯಡಿ ಅರ್ಜಿ ಆಹ್ವಾನ; ಭಾರತೀಯ ವಾಯುಪಡೆ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಗಳನ್ನು ಭರ್ತಿಮಾಡಲು ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿಗಳನ್ನು ಸಲ್ಲಿಸುವವರು ದ್ವಿತೀಯ ಪಿಯುಸಿಯಲ್ಲಿ ಶೇ 50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. 27 ಜೂನ್ 2002ರಿಂದ 27 ಡಿಸೆಂಬರ್ 2005ರ ನಡುವೆ ಜನಿಸಿರಬೇಕು. ಆನ್‍ಲೈನ್‍ ಮೂಲಕ ನೋಂದಣಿ ಮಾಡಿಕೊಳ್ಳಲು ನವೆಂಬರ್ 23 ಕೊನೆಯ ದಿನ.

ನೋಂದಣಿಗಾಗಿ https://agnipathvayu.cdac.in ವೆಬ್‌ಸೈಟ್‌ಗೆ ಭೇಟಿ ನೀಡಿ. ಆನ್‍ಲೈನ್ ಮೂಲಕವೇ ಪರೀಕ್ಷೆ 2023ನೇ ಜನವರಿಯಲ್ಲಿ ನಡೆಯಲಿವೆ.

ಆಸಕ್ತರು ಹೆಚ್ಚಿನ ವಿವರಗಳಿಗೆ https://careerindianairforce.cdac.in ವೆಬ್‌ಸೈಟ್‌ ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 08392-273988.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+