ಕಲಬುರಗಿ: ಖಾಲಿಯಿರುವ ವಿವಿಧ ಐಟಿಐ ವೃತ್ತಿಗಳಿಗೆ ಪ್ರವೇಶ
ಕಲಬುರಗಿ. ಜನವರಿ 9: ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2020-21ನೇ ಸಾಲಿನಲ್ಲಿ ಭರ್ತಿಯಾಗದೇ ಉಳಿದಿರುವ ವಿವಿಧ ವೃತ್ತಿಗಳಾದ ಫಿಟ್ಟರ್, ಟರ್ನರ್, ಮಷಿನಿಸ್ಟ್, ಡಿಎಂಸಿ, ಡಿ.ಎಂ.ಎಂ, ಐಸಿಟಿಎಸ್‍ಎಂ, ವೆಲ್ಡರ್, ಕೋಪಾ ಹಾಗೂ ಕಾರ್ಪೇಂಟರ್ ವೃತ್ತಿಗಳಿಗೆ ಮೆರಿಟ್-ಕಮ್-ರಿಸರ್ವೇಶನ್ ಆಧಾರದ ಮೇಲೆ ಆಫ್‍ಲೈನ್ ಮೂಲಕ ಅರ್ಹ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ ಎಂದು ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಹಾಗೂ 8ನೇ ತರಗತಿಯಲ್ಲಿ ಪಾಸಾದ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮಾತ್ರ ವೆಲ್ಡರ್ ಹಾಗೂ ಕಾರ್ಪೆಂಟರ್ ವೃತ್ತಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ದೂರವಾಣಿ ಸಂಖ್ಯೆ 08472-295121ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿನ ಅನುಪಯುಕ್ತ (ವಿವಿಧ ವೃತ್ತಿಗಳ ಸಣ್ಣ ಉಪಕರಣ, ಯಂತ್ರೋಪಕರಣ ಮತ್ತು ಪೀಠೋಪಕರಣ) ಸಾಮಗ್ರಿಗಳನ್ನು ಬಹಿರಂಗ ಹರಾಜಿನ ಮೂಲಕ ವಿಲೇವಾರಿ ಮಾಡಲಾಗುತ್ತಿದೆ ಎಂದು ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

ಹರಾಜಿನಲ್ಲಿ ಭಾಗವಹಿಸುವರು 2500 ರೂ.ಗಳ ಡಿ.ಡಿ ಅಥವಾ ನಗದು ಪಾವತಿಸಬೇಕು. ಡಿ.ಡಿಯನ್ನು ಆಡಳಿತ ಅಧಿಕಾರಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಲಬುರಗಿ ಇವರ ಹೆಸರಿನಲ್ಲಿ ಪಡೆಯಬೇಕು. ಟೆಂಡರ್ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ 2021ರ ಫೆಬ್ರವರಿ 3 ರೊಳಗಾಗಿ ಸಲ್ಲಿಸಬೇಕು. ಅರ್ಜಿ ಭರ್ತಿ ಮಾಡಿದ ಬಿಡ್ಡುದಾರರು 2021ರ ಫೆಬ್ರವರಿ 5 ರಂದು ಬೆಳಿಗ್ಗೆ 11 ಗಂಟೆಗೆ ಸಂಸ್ಥೆಯಲ್ಲಿ ನಡೆಯುವ ಹರಾಜಿನಲ್ಲಿ ಖುದ್ದಾಗಿ ಹಾಜರಾಗಬೇಕು.
ಅನುಪಯುಕ್ತ ಸಾಮಗ್ರಿಗಳನ್ನು ಸಂಸ್ಥೆಯಲ್ಲಿ ಫೆಬ್ರವರಿ 4ರವರೆಗೆ ಕಚೇರಿ ಸಮಯದಲ್ಲಿ ವೀಕ್ಷಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ದೂರವಾಣಿ ಸಂಖ್ಯೆ 08472-295121ಗೆ ಸಂಪರ್ಕಿಸಲು ಕೋರಲಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications