ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲಬುರಗಿ: ಖಾಲಿಯಿರುವ ವಿವಿಧ ಐಟಿಐ ವೃತ್ತಿಗಳಿಗೆ ಪ್ರವೇಶ

|
Google Oneindia Kannada News

ಕಲಬುರಗಿ. ಜನವರಿ 9: ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2020-21ನೇ ಸಾಲಿನಲ್ಲಿ ಭರ್ತಿಯಾಗದೇ ಉಳಿದಿರುವ ವಿವಿಧ ವೃತ್ತಿಗಳಾದ ಫಿಟ್ಟರ್, ಟರ್ನರ್, ಮಷಿನಿಸ್ಟ್, ಡಿಎಂಸಿ, ಡಿ.ಎಂ.ಎಂ, ಐಸಿಟಿಎಸ್‍ಎಂ, ವೆಲ್ಡರ್, ಕೋಪಾ ಹಾಗೂ ಕಾರ್ಪೇಂಟರ್ ವೃತ್ತಿಗಳಿಗೆ ಮೆರಿಟ್-ಕಮ್-ರಿಸರ್ವೇಶನ್ ಆಧಾರದ ಮೇಲೆ ಆಫ್‍ಲೈನ್ ಮೂಲಕ ಅರ್ಹ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ ಎಂದು ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಹಾಗೂ 8ನೇ ತರಗತಿಯಲ್ಲಿ ಪಾಸಾದ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮಾತ್ರ ವೆಲ್ಡರ್ ಹಾಗೂ ಕಾರ್ಪೆಂಟರ್ ವೃತ್ತಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ದೂರವಾಣಿ ಸಂಖ್ಯೆ 08472-295121ಗೆ ಸಂಪರ್ಕಿಸಲು ಕೋರಲಾಗಿದೆ.

ಕೊಪ್ಪಳ; ಸಹ ಶಿಕ್ಷಕರ ಹುದ್ದೆಗೆ ಅರ್ಜಿಗಳ ಆಹ್ವಾನ ಕೊಪ್ಪಳ; ಸಹ ಶಿಕ್ಷಕರ ಹುದ್ದೆಗೆ ಅರ್ಜಿಗಳ ಆಹ್ವಾನ

ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿನ ಅನುಪಯುಕ್ತ (ವಿವಿಧ ವೃತ್ತಿಗಳ ಸಣ್ಣ ಉಪಕರಣ, ಯಂತ್ರೋಪಕರಣ ಮತ್ತು ಪೀಠೋಪಕರಣ) ಸಾಮಗ್ರಿಗಳನ್ನು ಬಹಿರಂಗ ಹರಾಜಿನ ಮೂಲಕ ವಿಲೇವಾರಿ ಮಾಡಲಾಗುತ್ತಿದೆ ಎಂದು ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

Kalaburagi: Access To Various Vacant ITI Professions

ಹರಾಜಿನಲ್ಲಿ ಭಾಗವಹಿಸುವರು 2500 ರೂ.ಗಳ ಡಿ.ಡಿ ಅಥವಾ ನಗದು ಪಾವತಿಸಬೇಕು. ಡಿ.ಡಿಯನ್ನು ಆಡಳಿತ ಅಧಿಕಾರಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಲಬುರಗಿ ಇವರ ಹೆಸರಿನಲ್ಲಿ ಪಡೆಯಬೇಕು. ಟೆಂಡರ್ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ 2021ರ ಫೆಬ್ರವರಿ 3 ರೊಳಗಾಗಿ ಸಲ್ಲಿಸಬೇಕು. ಅರ್ಜಿ ಭರ್ತಿ ಮಾಡಿದ ಬಿಡ್ಡುದಾರರು 2021ರ ಫೆಬ್ರವರಿ 5 ರಂದು ಬೆಳಿಗ್ಗೆ 11 ಗಂಟೆಗೆ ಸಂಸ್ಥೆಯಲ್ಲಿ ನಡೆಯುವ ಹರಾಜಿನಲ್ಲಿ ಖುದ್ದಾಗಿ ಹಾಜರಾಗಬೇಕು.

ಅನುಪಯುಕ್ತ ಸಾಮಗ್ರಿಗಳನ್ನು ಸಂಸ್ಥೆಯಲ್ಲಿ ಫೆಬ್ರವರಿ 4ರವರೆಗೆ ಕಚೇರಿ ಸಮಯದಲ್ಲಿ ವೀಕ್ಷಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ದೂರವಾಣಿ ಸಂಖ್ಯೆ 08472-295121ಗೆ ಸಂಪರ್ಕಿಸಲು ಕೋರಲಾಗಿದೆ.

English summary
Only students who have passed the SSLC Supplementary Examination and passed the 8th class and SSLC examinations failed can apply for the Welder and Carpenter professions.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X