ಕಲಬುರಗಿ : ಜೆಸ್ಕಾಂನಲ್ಲಿ 71 ಹುದ್ದೆಗಳಿಗೆ ಅರ್ಜಿ ಹಾಕಿ
ಕಲಬುರಗಿ, ಏ.20 : ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 71 ಹುದ್ದೆಗಳಿದ್ದು, ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮೇ 15, 2015.
ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಿಕಲ್) 50, ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್) 6, ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್) 1, ಅಸಿಸ್ಟೆಂಟ್ ಅಕೌಂಟ್ ಆಫೀಸರ್ 3, ಜೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್) 5 ಸೇರಿದಂತೆ 71 ಹುದ್ದೆಗಳು ಖಾಲಿ ಇವೆ. [ನೇಮಕಾತಿ ಆದೇಶ ಇಲ್ಲಿದೆ]

ವಯೋಮಿತಿ : ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು 35, 2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ 40 ವರ್ಷಗಳು. [ಅರ್ಜಿ ಸಲ್ಲಿಸಲು ವಿಳಾಸ]
ಅರ್ಜಿ ಶುಲ್ಕ : ಸಾಮಾನ್ಯ ವರ್ಗ ಮತ್ತು ಪ್ರವರ್ಗ 1/2ಎ/2ಬಿ//3ಎ/3ಬಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 2000 ರೂ.ಗಳು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 1000 ರೂ.ಗಳು. ಅರ್ಜಿಯನ್ನು http://gescom.meta-secure.com/
ವೆಬ್‌ಸೈಟ್ ಮೂಲಕ ಸಲ್ಲಿಸಬಹುದಾಗಿದೆ.












Click it and Unblock the Notifications