ಕಲಬುರಗಿ ಸಂಪುಟ ಸಭೆ: ಉದ್ಯೋಗ ಕ್ಷೇತ್ರದ ಬಗ್ಗೆ ಕೈಗೊಂಡ ತೀರ್ಮಾನಗಳು
ಕಲಬುರಗಿ, ಸೆಪ್ಟೆಂಬರ್ 18: ಕಲಬುರಗಿಯಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಗಳವಾರ ಸಚಿವ ಸಂಪುಟ ಸಭೆ ನಡೆಯಿತು. ಕಲ್ಯಾಣ ಕರ್ನಾಟಕ ಭಾಗದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ಹಲವು ಯೋಜನೆಗಳಿಗೆ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಈ ಸಭೆಯಲ್ಲಿ ಉದ್ಯೋಗ ಕ್ಷೇತ್ರದ ಕುರಿತಾಗಿ ಕೈಗೊಂಡ ತೀರ್ಮಾನಗಳು ಯಾವುದು? ಎಂಬ ಮಾಹಿತಿ ಇಲ್ಲಿದೆ.
ಸಚಿವ ಸಂಪು ಸಭೆಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವಿವಿಧ ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಇವುಗಳಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಕಲಬುರಗಿ ವಿಶ್ವವಿದ್ಯಾಲಯದ ಆವರಣದಲ್ಲಿ ಜಿಟಿಟಿಸಿ ಬಹುಕೌಶಲ್ಯಾಭಿವೃದ್ಧಿ ಕೇಂದ್ರ ನಿರ್ಮಾಣವೂ ಸೇರಿದೆ.

ಸಂಪುಟ ಸಭೆಗೆ ಕಲಬುರಗಿ ಜಿಲ್ಲೆಯಲ್ಲಿ ಕಲಬುರಗಿ ವಿಶ್ವವಿದ್ಯಾಲಯದ ಆವರಣದಲ್ಲಿ GTTC ಬಹುಕೌಶಲ್ಯಾಭಿವೃದ್ಧಿ ಕೇಂದ್ರ (MSDC)ಯನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಿಂದ ಮೊದಲನೇ ಹಂತದಲ್ಲಿ 53.25 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ಎಂದು ಪ್ರಸ್ತಾವನೆ ಸಿದ್ಧಪಡಿಸಲಾಗಿತ್ತು.
ಬಹುಕೌಶಲ್ಯಾಭಿವೃದ್ಧಿ ಕೇಂದ್ರವು ವಿವಿಧ ವಲಯಗಳು ಮತ್ತು ಕೈಗಾರಿಕೆಗಳಲ್ಲಿ ವೃತ್ತಿಪರ ಕೌಶಲ್ಯ ತರಬೇತಿಯ ಅಗತ್ಯಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ. ವೈವಿದ್ಯಮಯ ಕೌಶಲ್ಯ ಸೆಟ್‌ಗಳಲ್ಲಿ ಉದ್ಯಮ ಸಂಬಂಧಿತ ತರಬೇತಿಯನ್ನು ನೀಡಲು ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಲು ಪ್ರಸ್ತಾಪಿಸಲಾಗಿದೆ ಎಂದು ಹೇಳಿತ್ತು. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಗಳು (ಜಿಟಿಟಿಸಿ) ಕೌಶಲ್ಯ ತರಬೇತಿ ಕಾರ್ಯಕ್ರಮ ಒದಗಿಸುವಲ್ಲಿ ಜಾಗತಿಕ ಮೆಚ್ಚುಗೆ ಪಡೆದಿವೆ.
ಈ ಯೋನೆಯ ಒಟ್ಟು ಯೋಜನಾ ವೆಚ್ಚ 53.25 ಕೋಟಿಗಳು. ಕಲಬುರಗಿ ವಿಶ್ವವಿದ್ಯಾಲಯ ಆವರಣದಲ್ಲಿ ಜಿಟಿಟಿಸಿ ಪ್ರಾರಂಭಿಸಲಾಗುವುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಕುರಿತು ಸಂಪುಟ ಸಭೆಯಲ್ಲಿ ವಿವರವಾಗಿ ಚರ್ಚಿಸಿ, ಅನುಮೋದನೆ ನೀಡಲಾಗಿದೆ.
ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು 1977ರ ಮೊದಲನೇ ಅನುಸೂಚಿಯ ಅಂಶ ಸಂಖ್ಯೆ 15 (1)ರ ಅನ್ವಯ ಕಲಬುರಗಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ಜಿಟಿಟಿಸಿ ಬಹುಕೌಶಲ್ಯಾಭಿವೃದ್ಧಿ ಕೇಂದ್ರವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ (ಕೆ.ಕೆ.ಆರ್.ಡಿ.ಬಿ) ಅನುದಾನದಿಂದ ಮೊದಲನೇ ಹಂತದಲ್ಲಿ ರೂ. 53.25 ಕೋಟಿಗಳ ವೆಚ್ಚದಲ್ಲಿ ಸ್ಥಾಪಿಸಲು ಸಚಿವ ಸಂಪುಟ ನಿರ್ಧರಿಸಿದೆ.
ಕೊಪ್ಪಳದಲ್ಲೂ ಕೇಂದ್ರ ಸ್ಥಾಪನೆ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಕೊಪ್ಪಳ ಜಿಲ್ಲೆಯ ತಳಕಲ್‌ನಲ್ಲಿ (ಕುಕನೂರು ತಾಲೂಕಿನ ತಳಬಾಳು ಗ್ರಾಮದಲ್ಲಿ) GTTC ಬಹುಕೌಶಲ್ಯಾಭಿವೃದ್ಧಿ ಕೇಂದ್ರ (MSDC) ವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಿಂದ ರೂ. 53.25 ಕೋಟಿಗಳ ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಪ್ರಸ್ತಾಪಿಸಲಾಗಿದೆ ಎಂದು ಸಭೆಗೆ ಟಿಪ್ಪಣಿ ಮಂಡಿಸಲಾಗಿತ್ತು.
ಕೊಪ್ಪಳ ಜಿಲ್ಲೆಯ ತಳಕಲ್‌ನಲ್ಲಿ GTTC ಬಹುಕೌಶಲ್ಯಾಭಿವೃದ್ಧಿ ಕೇಂದ್ರ (MSDC) ವನ್ನು ವೈವಿದ್ಯಮಯ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಿಂದ ರೂ. 53.25 ಕೋಟಿಗಳ ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಪ್ರಸ್ತಾಪಿಸಲಾಗಿದೆ. ವೈವಿದ್ಯಮಯ ಕೌಶಲ್ಯ ಸೆಟ್‌ಗಳಲ್ಲಿ ಉದ್ಯಮ ಸಂಬಂಧಿತ ತರಬೇತಿಯನ್ನು ನೀಡಲು ಮತ್ತು ಉದ್ಯೋಗಾವಕಾಶಗಳನ್ನು ಒದಗಿಸಲು ಪ್ರಸ್ತಾಪಿಸಲಾಗಿದೆ. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಗಳು (ಜಿಟಿಟಿಸಿ) ಕೌಶಲ್ಯ ತರಬೇತಿ ಕಾರ್ಯಕ್ರಮ ಒದಗಿಸುವಲ್ಲಿ ಜಾಗತಿಕ ಮೆಚ್ಚುಗೆ ಪಡೆದಿವೆ ಎಂದು ತಿಳಿಸಿತ್ತು.
ಸಚಿವ ಸಂಪುಟ ಸಭೆಯಲ್ಲಿ 53.25 ಕೋಟಿಗಳ ವೆಚ್ಚದಲ್ಲಿ ಕೊಪ್ಪಳ ಜಿಲ್ಲೆಯ ತಳಕಲ್‌ನಲ್ಲಿ GTTC ಬಹುಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪಿಸಲು ಒಪ್ಪಿಗೆ ನೀಡಲಾಗಿದೆ












Click it and Unblock the Notifications