ಕಲಬುರಗಿ ಕೋರ್ಟ್ ನಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ

Written By: Ramesh
Subscribe to Oneindia Kannada

ಕಲಬುರಗಿ, ಅಕ್ಟೋಬರ್. 17 : ಕಲಬುರಗಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಆದೇಶ ಜಾರಿಕಾರರ ಮತ್ತು ಬೆರಳಚ್ಚಗಾರ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 31ರೊಳಗೆ ಅರ್ಜಿ ಸಲಿಸಬಹುದಾಗಿದೆ.

ಆದೇಶ ಜಾರಿಕಾರರ ಹುದ್ದೆಗಳು 08 ಮತ್ತು 03 ಬೆರಳಚ್ಚುಗಾರ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುವುದು. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದ್ದು ಅಂಚೆ ಮೂಲಕ ಅಥವ ಖುದ್ದಾಗಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ. [544 ಸಬ್ ಇನ್​ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ]

Jobs

ಆದೇಶ ಜಾರಿಕಾರರ ವೇತನ ಶ್ರೇಣಿ- 11000 -200-12000-250 -13000 -300 -14200 - 350- 15600-400-17200- 450-19000 ಮತ್ತು ಇತರೆ ಭತ್ಯೆಗಳು.

ಆದೇಶ ಜಾರಿಕಾರರ-ವಿದ್ಯಾರ್ಹತೆ: 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದರುವ ಕೊನೆ ದಿನಾಂಕದೊಳಗೆ ಉತ್ತಿರ್ಣರಾಗಿರಬೇಕು. ವಾಹನ ಚಾಲನಾ (ಡ್ರೈವಿಂಗ್ ಲೈಸನ್ಸ್) ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆಧ್ಯತೆ ನೀಡಲಾಗುವುದು.

ಆದೇಶ ಜಾರಿಕಾರರ ಹುದ್ದೆಗೆ ಅರ್ಜಿ ಶುಲ್ಕ: ಸಾಮಾನ್ಯ ವರ್ಗ, 2ಎ, 2ಬಿ, 3ಎ,3ಬಿ ಅಭ್ಯರ್ಥಿಗಳಿಗೆ 200 ರುಗಳನ್ನು ನಿಗದಿಪಡಿಸಲಾಗಿದೆ. ಇನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ -1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ನಿಗದಿತ ದಿನಾಂಕದೊಳಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಶುಲ್ಕ ಪಾವತಿಸಬೇಕು

ಹೆಚ್ಚಿನ ಮಾಹಿತಿಗಾಗಿ http://ecourts.gov.in/kalaburagi/online-recruitment ವೆಬ್ ಸೈಟ್ ಸಂಪರ್ಕಿಸಿ.

ಬೆರಳಚ್ಚುಗಾರರ ಹುದ್ದೆಗಳ ಮಾಹಿತಿ:

ವೇತನ ಶ್ರೇಣಿ: 11600-200-12000-250 -13000-300-14200-350-15600-400-17200 -450-19000-500-21000 ಮತ್ತು ಇತರೆ ಭತ್ಯೆಗಳು.

ವಯೋಮಿತಿ : ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕೆಳಕಂಡ ವಯೋಮಿತಿಯನ್ನು ಹೊಂದಿರತಕ್ಕದ್ದು. ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗದವರಿಗೆ 35 ವರ್ಷ/ಪ್ರವರ್ಗ 2ಎ/2ಬಿ/3ಎ/3ಬಿ 38 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

ವಿದ್ಯಾರ್ಹತೆ: 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆ ಮತ್ತು ಕರ್ನಾಟಕ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡು ಭಾಷೆಗಳಲ್ಲೂ ಹಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿ ಪಡಿಸಿರುವ ಕೊನೆಯ ದಿನಾಂಕದೊಳಗೆ ಉತ್ತಿರ್ಣರಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ http://ecourts.gov.in/kalaburagi/online-recruitment ವೆಬ್ ಸೈಟ್ ಸಂಪರ್ಕಿಸಿ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Kalaburagi district court invited applications for the post of Stenographer and other post. October 31, 2016 last date for submit application.
Please Wait while comments are loading...