• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

44 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಕಲಬುರಗಿ ಜಿ.ಪಂಚಾಯಿತಿ

|

ಬೆಂಗಳೂರು, ಫೆಬ್ರವರಿ 21 : ಕಲಬುರಗಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 2, 2019 ಕೊನೆಯ ದಿನವಾಗಿದೆ.

ತೆರಿಗೆ ವಸೂಲಿಗಾರ, ಲೆಕ್ಕಿಗ, ಗುಮಾಸ್ತ, ಬೆರಳಚ್ಚುಗಾರ ವೃಂದದ ಕೋಟಾದಡಿ ಸ್ಥಳೀಯ ವೃಂದದಲ್ಲಿ, ಸ್ಥಳೀಯೇತರ ಖಾಲಿ ಇರುವ ಗ್ರೇಡ್ -2 ಪಂಚಾಯತ್ ಕಾರ್ಯದರ್ಶಿ ಹುದ್ದೆಗಳು ಮತ್ತು ಸ್ಥಳೀಯೇತರ ವೃಂದದಲ್ಲಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

1.5 ಲಕ್ಷ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಆರ್‌ಆರ್‌ಬಿ

ಒಟ್ಟು 44 ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಅರ್ಜಿಗಳನ್ನು ಪಡೆಯಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 2 ಕೊನೆಯ ದಿನವಾಗಿದೆ. ನೇಮಕಾತಿ ಅಧಿಸೂಚನೆ ಜಿಲ್ಲಾ ಪಂಚಾಯಿತಿ ವೆಬ್‌ಸೈಟ್‌ನಲ್ಲಿ ನೀಡಲಾಗಿದೆ.

235 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕುವೆಂಪು ವಿಶ್ವವಿದ್ಯಾಲಯ

ವಿದ್ಯಾರ್ಹತೆ : ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. (ದೃಡಿಕೃತ ಅಂಕಪಟ್ಟಿ ಲಗತ್ತಿಸಬೇಕು). ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಮಾನ್ಯ ನ್ಯಾಯಾಲಯ ಹೊರಡಿಸಿರುವ ಆದೇಶಕ್ಕೆ ಒಳಪಟ್ಟು ಒಪ್ಪಿ ಅರ್ಜಿಗಳನ್ನು ಸಲ್ಲಿಸುವುದು.

131 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ

ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 250 ರೂ., ಇತರ ವರ್ಗದ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ. ಜಿಲ್ಲಾ ಪಂಚಾಯಿತಿ ಕಲಬುರಗಿ ಇವರ ಹೆಸರಿನಲ್ಲಿ ಪೋಸ್ಟಲ್ ಆರ್ಡರ್ ಸಲ್ಲಿಸಿ ಜಿಲ್ಲಾ ಪಂಚಾಯಿತಿ ಕಚೇರಿಯ ಸಮಯದಲ್ಲಿ ಶುಲ್ಕ ಪಾವತಿಸಿ, ಅರ್ಜಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Zilla Panchayat Kalaburagi invited applications for 44 posts. Candidates can apply before March 2, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X