ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೇಮಕಾತಿ: ವೇತನ 33,450 ರೂ. ಗಳು
ಬೆಂಗಳೂರು, ಜುಲೈ 08: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಭವನ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 3/9/2024ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರವಾರ ಜಿಲ್ಲಾ ರಂಗಮಂದಿರದಲ್ಲಿ ಖಾಲಿ ಇರುವ ಹಿರಿಯ ಎಲೆಕ್ಟ್ರೀಷಿಯನ್ ಕಂ ಸೌಂಡ್ ಸೂಪರ್ ವೈಜರ್ 1 ಹುದ್ದೆಯನ್ನು ಪರಿಶಿಷ್ಟ ಪಂಗಡದ ಬ್ಯಾಕ್‌ಲಾಗ್ ಅಡಿ ಸರ್ಕಾರದ ಅಧಿಸೂಚನೆ ಅನ್ವಯ ಭರ್ತಿ ಮಾಡುತ್ತಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು.
ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 3/9/2024ರ ಸಂಜೆ 5 ಗಂಟೆಯೊಳಗೆ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇಲ್ಲಿಗೆ ತಲುಪಿಸತಕ್ಕದ್ದು.
ಹುದ್ದೆಯ ವಿವರಗಳು: ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಪರಿಶಿಷ್ಟ ಪಂಗಡಕ್ಕೆ ಸೇರಿದ್ದು, ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 3/9/2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಕೆ ಮಾಡುವವರು ಕನ್ನಡವನ್ನು ಒಂದು ವಿಷಯವನ್ನಾಗಿ ತೆಗೆದುಕೊಂಡು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಇದರೊಂದಿಗೆ ಟೆಲಿಕಮ್ಯೂನಿಕೇಷನ್ (ಸೌಂಡ್ ಹಾಗೂ ಟಿ.ವಿ) ನಲ್ಲಿ ಡಿಪ್ಲೊಮಾ ಪದವಿ ಪಡೆದಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ ರೂ. 33,450 ರಿಂದ 62,600 ರೂ.ಗಳು. ವಿದ್ಯಾರ್ಹತೆ, ಜನ್ಮ ದಿನಾಂಕ ಮತ್ತು ಮೀಸಲಾತಿ ಮುಂತಾದ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ದೃಢೀಕರಿಸಿ ಸಲ್ಲಿಸಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ www.kannadasiri.karnataka.gov.in ವೆಬ್ ಸೈಟ್ ಅಥವ ದೂರವಾಣಿ ಸಂಖ್ಯೆ 080-22241325, 22213530 ಸಂಖ್ಯೆಗೆ ಕರೆ ಮಾಡಬಹುದು.
ದಕ್ಷಿಣ ಕನ್ನಡದಲ್ಲಿ ಕೆಲಸ ಖಾಲಿ ಇದೆ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಬ್ಯಾಂಕಿನಲ್ಲಿ ಪ್ರಸ್ತುತ ಖಾಲಿ ಇರುವ 123 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‌ಲೈನ್ ಮೂಲಕ ಆಹ್ವಾನಿಸಲಾಗಿದೆ. ದ್ವಿತೀಯ ದರ್ಜೆ ಗುಮಾಸ್ತ 123 ಹುದ್ದೆಗಳಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ 24,910-55,655 ರೂ. ವೇತನ ಮತ್ತು ಇತರ ಭತ್ಯೆಗಳು ದೊರೆಯುತ್ತವೆ. ಆಸಕ್ತರು ಅರ್ಜಿ, ಇತರ ವಿವರಗಳನ್ನು ಬ್ಯಾಂಕಿನ ವೆಬ್‌ಸೈಟ್ www.scdccbank.com ನಿಂದ ಪಡೆಯಬಹುದು.
ಈಗಾಗಲೇ ದಿನಾಂಕ 07/08/2023ರ ಪ್ರಕಟಣೆಯ ಮೂಲಕ ಆಹ್ವಾನಿಸಲಾಗಿರುವ ಅರ್ಜಿಗಳಲ್ಲಿ ಲಿಖಿತ ಪರೀಕ್ಷೆಗೆ ಅರ್ಹವಾಗಿರುವ ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಅರ್ಹರೇ ಅಥವಾ ಅನರ್ಹರೇ ಹಾಗೂ ಯಾವ ಕಾರಣದಿಂದ ಅನರ್ಹರೆಂದು ಬ್ಯಾಂಕಿನ ವೆಬ್ ಸೈಟ್‌ನಲ್ಲಿ ತಮ್ಮ ನೋಂದಣಿ ಸಂಖ್ಯೆ ನಮೂದಿಸಿ ಪರಿಶೀಲಿಸಬಹುದು. ಅನರ್ಹಗೊಂಡಿರುವ ಅಭ್ಯರ್ಥಿಗಳು ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ದಿನಾಂಕ 18/07/2024ರ ಮಧ್ಯಾಹ್ನ 4.30ರ ಒಳಗೆ ಸಲ್ಲಿಸಲು ಪುನಃ ಅವಕಾಶ ನೀಡಲಾಗಿದೆ.
ಈಗಾಗಲೇ ಶುಲ್ಕ ಪಾವತಿಸಿದವರು ಪುನಃ ಶುಲ್ಕ ಪಾವತಿಸುವ ಅಗತ್ಯವಿರುವುದಿಲ್ಲ. ಅರ್ಹಗೊಂಡಿರುವ ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ. ಹೊಸದಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ ಈ ಬ್ಯಾಂಕಿನ ಅಂತರ್ಜಾಲ www.scdccbank.com ದಲ್ಲಿ ಲಭ್ಯವಾಗುವ ಅರ್ಜಿ ಫಾರಂನ್ನು ಭರ್ತಿಗೊಳಿಸಿ, ಸಲ್ಲಿಸತಕ್ಕದ್ದು.
ಬಳಿಕ ಅರ್ಜಿಯ ಮುದ್ರಿತ ಪ್ರತಿಯನ್ನು ತೆಗೆದು, ಅದರಲ್ಲಿ ತಮ್ಮ ಸಹಿ ಹಾಕಿ, ಇತ್ತೀಚಿನ ಭಾವಚಿತ್ರ ಲಗತ್ತಿಸಿ, ಅರ್ಜಿಯಲ್ಲಿ ತಿಳಿಸಿರುವ ಎಲ್ಲಾ ಪ್ರಮಾಣ ಪತ್ರಗಳ ಪ್ರತಿಗಳೊಂದಿಗೆ ದಿನಾಂಕ 18/07/2024ರ ಮಧ್ಯಾಹ್ನ 4.30ರ ಒಳಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಕೊಡಿಯಾಲ್ ಬೈಲು, ಮಂಗಳೂರು 575003 ಇವರಿಗೆ ತಲುಪುವಂತೆ ಸಲ್ಲಿಸತಕ್ಕದ್ದು. ಈಗಾಗಲೇ ಸೇವೆಯಲ್ಲಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಂಬಂಧಪಟ್ಟ ಸಂಸ್ಥೆಯ ಮೂಲಕ ಸಲ್ಲಿಸತಕ್ಕದ್ದು.
ಅಪೂರ್ಣ ಅರ್ಜಿಗಳನ್ನು ಹಾಗೂ ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಶುಲ್ಕ ಹಿಂತಿರುಗಿಸಲಾಗುವುದಿಲ್ಲ. ಅಭ್ಯರ್ಥಿಗಳು ನಿಗದಿ ಪಡಿಸಿದ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸತಕ್ಕದ್ದು. ಶುಲ್ಕ ಪಾವತಿಸಿದ ನಂತರ ಯಾವುದೇ ಸಂದರ್ಭದಲ್ಲಿಯೂ ಹಿಂತಿರುಗಿಸಲಾಗುವುದಿಲ್ಲ ಹಾಗೂ ಶುಲ್ಕ ಪಾವತಿಸದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.












Click it and Unblock the Notifications