KPSC: ಕೆಎಎಸ್ ನೇಮಕಾತಿ, ಕನ್ನಡ ಮರು ಪರೀಕ್ಷೆ ಇಲ್ಲ

ಬೆಂಗಳೂರು, ಜನವರಿ 15: ಗೆಜೆಟೆಡ್ ಪ್ರೊಬೇಷನರ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ನೇಮಕಾತಿ ಪರೀಕ್ಷೆಯ ಕನ್ನಡ ಪ್ರಶ್ನೆ ಪತ್ರಿಕೆ ದೋಷದ ಕುರಿತು ಚರ್ಚೆಗಳು ನಡೆಯುತ್ತಿವೆ. ಕೆಎಎಸ್ ಹುದ್ದೆಗಳ ನೇಮಕಾತಿಗೆ ಮರು ಪರೀಕ್ಷೆಯನ್ನು ನಡೆಸದೇ ಕೀ ಉತ್ತರವನ್ನು ಪ್ರಕಟಿಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮುಂದಾಗಿದೆ. 2024 ಆಗಸ್ಟ್‌ ಮತ್ತು ಡಿಸೆಂಬರ್ 29ರಂದು ಎರಡು ಬಾರಿ ಈ ಪರೀಕ್ಷೆಗಳನ್ನು ನಡೆಸಲಾಗಿದೆ.

ಡಿಸೆಂಬರ್ 29ರಂದು ಗೆಜೆಟೆಡ್ ಪ್ರೊಬೇಷನರ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಮರು ಪರೀಕ್ಷೆಗಳನ್ನು ಕೆಪಿಎಸ್‌ಸಿ ನಡೆಸಿದೆ. ಆಗಸ್ಟ್​ 27ರಂದು ನಡೆದ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿನ ಕನ್ನಡ ದೋಷದ ಕಾರಣಕ್ಕೆ ಮರು ಪರೀಕ್ಷೆಯನ್ನು ನಡೆಸಲಾಗಿತ್ತು. ಆದರೆ ಮರು ಪರೀಕ್ಷೆಯ ಕನ್ನಡ ಪ್ರಶ್ನೆ ಪತ್ರಿಕೆಯಲ್ಲೂ ದೋಷಗಳಿವೆ ಎಂದು ಆರೋಪಿಸಲಾಗಿದ್ದು, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಲಾಗಿತ್ತು.

Kannada Error KPSC May Not Conduct Re Exam For Gazetted Probationers Preliminary Recruitment

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಹಿರಿಯ ಸಾಹಿತಿ ಗೊ. ರು. ಚನ್ನಬಸಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರವನ್ನು ಬರೆದಿದ್ದರು. ಕನ್ನಡ ಪತ್ರಿಕೆಯಲ್ಲಿನ ತಪ್ಪುಗಳ ಕುರಿತು ಗಮನ ಸೆಳೆದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ‌ ಕೈಗೊಳ್ಳಬೇಕು. ಮರು ಪರೀಕ್ಷೆಯನ್ನು ನಡೆಸಬೇಕು ಎಂದು ಒತ್ತಾಯಿಸಿದ್ದರು.

ಮರು ಪರೀಕ್ಷೆ ಇಲ್ಲ: ಮರು ಪರೀಕ್ಷೆ ನಡೆಸಬೇಕು ಎಂದು ಅಭ್ಯರ್ಥಿಗಳು, ಸಂಘ ಸಂಸ್ಥೆಗಳು ಹೋರಾಟ ನಡೆಸಲು ಮುಂದಾಗಿವೆ. ಮರು ಪರೀಕ್ಷೆ ಪ್ರಶ್ನೆ ಪತ್ರಿಕೆ ದೋಷದ ಕಾರಣ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಆದ್ದರಿಂದ ಪರೀಕ್ಷೆ ರದ್ದುಗೊಳಿಸಿ ಮರು ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಲಾಗುತ್ತಿದೆ. ಆದರೆ ಕೆಪಿಎಸ್‌ಸಿ ಮರು ಪರೀಕ್ಷೆಯನ್ನು ನಡೆದೇ ಕೀ ಉತ್ತರ ಬಿಡುಗಡೆ ಮಾಡಲು ಮುಂದಾಗಿದೆ.

ಅಭ್ಯರ್ಥಿಗಳ ಹೋರಾಟಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಸಾಹಿತ್ಯ ಪರಿಷತ್, ಸಾಹಿತಿ ಗೊ. ರು. ಚನ್ನಬಸಪ್ಪ, ಅನೇಕ ಸಾಹಿತಿಗಳು ಬೆಂಬಲ ಸೂಚಿಸಿದ್ದಾರೆ. ಗುರುವಾರ ಮರು ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿ ಫ್ರೀಡಂಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಆದರೆ ಕೆಪಿಎಸ್‌ಸಿ ಮಾಹಿತಿ ಪ್ರಕಾರ ಈಗಾಗಲೇ ಒಎಂಆರ್‌ ಶೀಟ್‌ಗಳ ಮೌಲ್ಯ ಮಾಪನ ಸ್ಕ್ಯಾನಿಂಗ್ ಕಾರ್ಯವನ್ನು ಆರಂಭಿಸಿದೆ. ಇನ್ನೊಂದು ವಾರದಲ್ಲಿ ಕೀ ಉತ್ತರಗಳನ್ನು ಪ್ರಕಟಿಸಿ, ಆಕ್ಷೇಪಣೆಗಳನ್ನು ಆಹ್ವಾನಿಸಲಾಗುತ್ತದೆ.

ಕೆಪಿಎಸ್‌ಸಿ ಆಗಸ್ಟ್ 2024ರಲ್ಲಿ ನಡೆಸಿದ ಪರೀಕ್ಷೆಯ ಪತ್ರಿಕೆಯಲ್ಲಿಯೂ ಕನ್ನಡ ದೋಷ ಕಾಣಿಸಿಕೊಂಡಿತ್ತು. ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ಕೂಡಲೆ ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ' ಎಂದು ಹೇಳಿದ್ದರು.

'ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ನಾವು ನೇಮಕಾತಿ ಪ್ರಕ್ರಿಯೆಯ ಸಮಗ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ' ಎಂದು ತಿಳಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+