ರೆಪ್ರೆಸೆಂಟೇಟಿವ್ಸ್ ಹುದ್ದೆಗೆ KAPLನಲ್ಲಿ ವಾಕ್ ಇನ್ ಸಂದರ್ಶನ
ಬೆಂಗಳೂರು, ಅಕ್ಟೋಬರ್ 9 : ಫಾರ್ಮಸಿಯಲ್ಲಿ ಪದವಿ ಪೂರ್ಣಗೊಳಿಸಿದವರಿಗೆ ಕರ್ನಾಟಕ ಆಂಟಿಬಯೋಟಿಕ್ಸ್ ಅಂಡ್ ಫಾರ್ಮಸ್ಯುಟಿಕಲ್ಸ್ ಲಿಮಿಟೆಡ್' (ಕೆಎಪಿಎಲ್)ನಲ್ಲಿ ಉದ್ಯೋಗ ಅವಕಾಶಗಳಿವೆ.
ಖಾಲಿ ಇರುವ 19 ಪ್ರೊಫೆಶನಲ್ ಸರ್ವೀಸ್ ರೆಪ್ರೆಸೆಂಟೇಟಿವ್ಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ವಾಕ್ ಇನ್ ಸಂದರ್ಶನವಿದ್ದು, ಆಸಕ್ತ ಹಾಗೂ ಅರ್ಹ ಅಬ್ಯರ್ಥಿಗಳು ಇದೇ ನವೆಂಬರ್ 2 ಮತ್ತು 03ರಂದು ನಡೆಯಲಿರುವ ಸಂದರ್ಶನಕ್ಕೆ ತಮ್ಮ ಮೂಲ ದಾಖಲಾತಿಗಳೊಂದಿಗೆ ಹಾಜರಾಗತಕ್ಕದ್ದು.

ವಿದ್ಯಾರ್ಹತೆ: ಫಾರ್ಮಸಿಯಲ್ಲಿ ಪದವಿ ಪೂರ್ಣಗೊಳಿಸಿರಬೇಕು, ಹಾಗೂ ಇದಕ್ಕೆ ಸಂಬಂಧಿಸಿದ ಕಂಪನಿಗಳಲ್ಲಿ ಒಂದು ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ವಯೋಮಿತಿ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 26 ವರ್ಷ ಹಾಗೂ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಮತ್ತು ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
ವೇತನ ಶ್ರೇಣಿ: 13000 ರು. ತಿಂಗಳಿಗೆ.
ಆಯ್ಕೆ ವಿಧಾನ: ವಾಕ್ ಇನ್ ಸಂದರ್ಶನ.
ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿಇಲ್ಲಿ ಕ್ಲಿಕ್ಕಿಸಿ.












Click it and Unblock the Notifications