Karnataka Anganwadi Jobs: ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳ ನೇಮಕಾತಿ: ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು, ಫೆಬ್ರವರಿ 10: ರಾಜ್ಯ ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರ ನೇಮಕಾತಿ ನಡೆಯುತ್ತಿದ್ದು ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿದೆ.
ಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಒಟ್ಟು 152 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 15, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಒಟ್ಟು 6 ಜಿಲ್ಲೆಗಳಲ್ಲಿ ನೇಮಕಾತಿ ಮಾಡಲಾಗುತ್ತಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತುಮಾಹಿತಿ ಇಲ್ಲಿದೆ ನೋಡಿ.
ಯಾವ್ಯಾವ ಜಿಲ್ಲೆಯಲ್ಲಿ ಹುದ್ದೆಗಳ ನೇಮಕಾತಿ
ಬೆಂಗಳೂರು ಗ್ರಾಮೀಣ ಜಿಲ್ಲೆ
ಬೆಂಗಳೂರು ನಗರ ಜಿಲ್ಲೆ
ಬೆಳಗಾವಿ
ಬೀದರ್
ಹಾವೇರಿ
ತುಮಕೂರು
ಹುದ್ದೆಯ ಮಾಹಿತಿ
1. ಅಂಗನವಾಡಿ ಕಾರ್ಯಕರ್ತೆ -39 ಹುದ್ದೆ
2. ಅಂಗನವಾಡಿ ಸಹಾಯಕಿ - 113 ಹುದ್ದೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಆಫ್‌ಲೈನ್ ಅಪ್ಲಿಕೇಷನ್‌ಗೆ ಕೊನೆಯ ದಿನಾಂಕ : 15-02-2024
ವಯಸ್ಸಿನ ಮಿತಿ
ಕನಿಷ್ಠ ವಯಸ್ಸಿನ ಮಿತಿ: 19 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು
ಶೈಕ್ಷಣಿಕ ವಿದ್ಯಾರ್ಹತೆ ಮಾಹಿತಿ
ಅಂಗನವಾಡಿ ಕಾರ್ಯಕರ್ತೆ ಹುದ್ದೆ: ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗೆ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿರಬೇಕು ಹಾಗೂ ಎಸ್‌ಎಸ್‌ಎಲ್‌ಸಿ ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ಇನ್ನೂ ಸರ್ಕಾರದ ಅಂಗೀಕೃತ ಸಂಸ್ಥೆಯಿಂದ ಡಿಎಸ್ಇಆರ್‌ಟಿ ಯಿಂದ ಇಸಿಸಿಇ ಡಿಪ್ಲೊಮಾ ಕೋರ್ಸ್, ಜೆಒಸಿ ಕೋರ್ಸ್, ಎನ್‌ಟಿಟಿ ಕೋರ್ಸ್‌ಗಳನ್ನು ಹಾಗೂ ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಡಿಪ್ಲೊಮಾ ನ್ಯೂಟ್ರಿಷಿಯನ್ , ಹೋಂ ಸೈನ್ಸ್ ಸರ್ಟಿಫಿಕೆಟ್ ಕೋರ್ಸ್ ಒಂದು ವರ್ಷದ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ನೀಡುವುದು ಹಾಗೂ ಬೋನಸ್ +5 ಅಂಕಗಳನ್ನು ನೀಡಲಾಗುತ್ತದೆ.
ಅಂಗನವಾಡಿ ಸಹಾಯಕಿ ಹುದ್ದೆ
ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಬೋನಸ್ ಅಂಕಗಳ ಮಾಹಿತಿ ಇಲ್ಲಿದೆ.
ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಿದವರಲ್ಲಿ ಆಸಿಡ್ ದಾಳಿಗೆ ತುತ್ತಾದವರು, ವಿಧವೆ, ಇಲಾಖೆಯ ಸಂಸ್ಥೆಗಳ ನಿವಾಸಿಗಳು, ಅಂಗವಿಲಕರು, ಮಾಜಿ ದೇವದಾಸಿಯರ ಮಗಳು, ಯೋಜನಾ ನಿರಾಶ್ರಿತ ಮಹಿಳೆಯರಿಗೆ + 5 ಬೋನಸ್ ಅಂಕಗಳನ್ನು ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ: https://anganwadirecruit.kar.nic.in/
-
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
Government Employees: ಸರ್ಕಾರಿ ನೌಕರರ ವರ್ಗಾವಣೆ ಕುರಿತು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ












Click it and Unblock the Notifications