ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ಮೇ 12 : ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 1,130 ಹುದ್ದೆಗಳಿದ್ದು ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜೂನ್ 15, 20015.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವೂ ಸ್ಮರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮೇ 16ರಿಂದ ಆರಂಭವಾಗಲಿದೆ.[ಕನ್ನಡದಲ್ಲಿ ನೇಮಕಾತಿ ಆದೇಶ ಓದಿ]

Jobs

ಕನ್ನಡ, ಇಂಗ್ಲಿಶ್, ಹಿಂದಿ, ತೆಲಗು, ಮರಾಠಿ, ಉರ್ದು, ಸಂಸ್ಕೃತ, ಇತಿಹಾಸ, ಅರ್ಥಶಾಸ್ತ್ರ, ತರ್ಕಶಾಸ್ತ್ರ, ಭೂಗೋಳಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ವ್ಯವಹಾರ ಅಧ್ಯಯನ, ಸಮಾಜಶಾಸ್ತ್ರ, ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಜೀವಶಾಸ್ತ್ರ, ಗಣಕವಿಜ್ಞಾನ ವಿಷಯಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.

ವೇತನ ಶ್ರೇಣಿ 22,800 ರಿಂದ 43, 200. ಖಾಲಿ ಇರುವ ಪ್ರವರ್ಗವಾರು ಮತ್ತು ವಿಷಯವಾರು ಹುದ್ದೆಗಳ ವಿವರಗಳನ್ನು http://kea.kar.nic.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. [ವೆಬ್ ಸೈಟ್ ವಿಳಾಸ]

ವಯೋಮಿತಿ : ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಟ 21 ವರ್ಷ ತುಂಬಿರ ತಕ್ಕದ್ದು, ಪ.ಜಾ/ಪ.ಪಂ/ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 45 ವರ್ಷ, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 43 ವರ್ಷ, ಇತರೆ ಅಭ್ಯರ್ಥಿಗಳಿಗೆ 40 ವರ್ಷದ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ : ಅಭ್ಯರ್ಥಿಯು ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ದ್ವಿತೀಯ ದರ್ಜೆಯಲ್ಲಿ ಶೇ 55 ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣನಾಗಿರಬೇಕು. ಅಭ್ಯರ್ಥಿಯು ಬಿ.ಇಡಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಇತರ ವರ್ಗದ ಅಭ್ಯರ್ಥಿಗಳಿಗೆ 2,500, ಪ.ಜಾ/ಪ.ಪಂಗಡದ ವಿದ್ಯಾರ್ಥಿಗಳಿಗೆ 2000 ರೂ., ವಿಕಲಚೇತನರಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಶುಲ್ಕವನ್ನು ಕಂಪ್ಯೂಟರೈಸ್ಡ್‌ ಅಂಚೆ ಕಚೇರಿಗಳಲ್ಲಿ ಮಾತ್ರ ಪಾವತಿ ಮಾಡಬೇಕು. ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ ಜೂನ್ 17, 2015

ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಪರೀಕ್ಷೆಯ ವೇಳಾಪಟ್ಟಿಯನ್ನು http://kea.kar.nic.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+