Karnataka Bank Recruitment 2023: ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಜನವರಿ 02: ಕರ್ನಾಟಕ ಬ್ಯಾಂಕ್ ಖಾಲಿ ಇರುವ ಪ್ರೊಬೇಷನರಿ ಆಫೀಸರ್ (PO) ಹುದ್ದೆಗಳ ನೇಮಕಾತಿ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶ ಇಲ್ಲಿದೆ.
ನೇಮಕಾತಿ ಸಂಬಂಧ ಕರ್ನಾಟಕ ಬ್ಯಾಂಕ್ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಬ್ಯಾಂಕ್ನ ಅಧಿಕೃತ ವೆಬ್ಸೈಟ್ karnatakabank.com ಭೇಟಿ ನೀಡಬೇಕು. ಆನ್‌ಲೈನ್ ಮೂಲಕ ಜನವರಿ 10ರೊಳಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಅರ್ಹತೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆಯ ಸ್ಥಳ
ಕರ್ನಾಟಕ ಬ್ಯಾಂಕ್ ದೇಶದಾದ್ಯಂತ ಇರುವ ವಿವಿಧ ಶಾಖೆಗಳು/ಕಚೇರಿಗಳಲ್ಲಿ ಆಫೀಸರ್ ಸ್ಕೇಲ್-I ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತದೆ. ಆಯ್ಕೆ ಯಾಗುವವರು ಯಾವುದೇ ಶಾಖೆಯಲ್ಲಿ ಕೆಲಸ ಮಾಡಲು ಸಿದ್ಧರಿಬೇಕು.

ಅಭ್ಯರ್ಥಿಗಳ ಅರ್ಹತೆ
ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಯಾವುದೇ ವಿಭಾಗದಲ್ಲಿ ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಬಹುದು. ಅಂದರೆ ಭಾರತ ಸರ್ಕಾರ/ಯುಜಿಸಿ/ಇತರ ಸರ್ಕಾರಿ ನಿಯಂತ್ರಕ ಸಂಸ್ಥೆಗಳಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಮಂಡಳಿಯಿಂದ ಪದವಿ ಪಡೆದವರಿಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ವಯೋಮಿತಿ: ಅರ್ಜಿ ಶುಲ್ಕ
ಅರ್ಜಿ ಸಲ್ಲಿಸಬಯಸುವರು ಗರಿಷ್ಠ ವಯೋಮಿತಿ 28 ವರ್ಷ ನಿಗದಿಪಡಿಸಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳ ಅರ್ಜಿ ಸಲ್ಲಿಕೆಗೆ 800 ರೂ. ಹಾಗೂ ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 700 ರೂ. ನಿಗದಿ ಮಾಡಲಾಗಿದೆ.

ವೇತನ: ಆಯ್ಕೆ ಹೇಗೆ?
ಆಹ್ವಾನಿಸಲಾದ ಹುದ್ದೆಗಳಿಗೆ ಮೊದಲು ಆನ್‌ಲೈನ್ ಪರೀಕ್ಷೆ ಜರುಗಲಿದೆ. ನಂತರ ಆನ್‌ಲೈನ್ ಮೂಲಕವೇ ಸಂದರ್ಶನ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಕರ್ನಾಟಕ ಬ್ಯಾಂಕ್ ತಿಳಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 84 ಸಾವಿರ ರೂ. ವೇತನ ನೀಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ https://ibpsonline.ibps.in/kabodec22/ ಲಿಂಕ್ ಮೂಲಕ ವೆಬ್‌ಸೈಟ್‌ಗೆ ಭೇಟಿ ಮಾಡಿ ಅಲ್ಲಿಂದಲೇ ಅರ್ಜಿ ಸಲ್ಲಿಸಬಹುದಾಗಿದೆ.












Click it and Unblock the Notifications