ಕರ್ನಾಟಕ ಬ್ಯಾಂಕ್‌ನಲ್ಲಿ ಕ್ಲರ್ಕ್ ಹುದ್ದೆಗೆ ಅರ್ಜಿ ಹಾಕಿ

ಬೆಂಗಳೂರು, ಜುಲೈ 10 : ಕರ್ನಾಟಕ ಬ್ಯಾಂಕ್ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 20ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಸುಮಾರು 60 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 10 ರಿಂದ 20ರೊಳಗೆ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಬೇಕಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯುಜಿಸಿಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು. 1/7/2019ರೊಳಗೆ ಪದವಿಯನ್ನು ಪೂರ್ಣಗೊಳಿಸಿರಬೇಕು. ಫಲಿತಾಂಶಕ್ಕಾಗಿ ಕಾಯುತ್ತಿರುವವರು ಅರ್ಜಿ ಸಲ್ಲಿಸಲು ಅವಕಾಶವಿಲ್ಲ.

Karnataka Bank recruitment 2019 : Apply for clerk post

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 26 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1/7/2019ಕ್ಕೆ ಅನ್ವಯವಾಗುವಂತೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಿನಾಯಿತಿಯನ್ನು ನೀಡಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 500 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.

ಲಿಖಿತ ಪರೀಕ್ಷೆ : ಆಗಸ್ಟ್‌ 8, 2019ರಂದು ಆನ್‌ಲೈನ್‌ನಲ್ಲಿ ಪರೀಕ್ಷೆ ನಡೆಯಲಿದೆ. ಬೆಂಗಳೂರು, ದೆಹಲಿ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಮುಂಬೈನಲ್ಲಿ ಪರೀಕ್ಷೆ ನಡೆಯಲಿದೆ.

ಆಯ್ಕೆಯಾಗುವ ಅಭ್ಯರ್ಥಿಗಳಿಗೆ 37 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+