ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಬ್ಯಾಂಕ್
ಬೆಂಗಳೂರು, ಡಿಸೆಂಬರ್ 26 : ಕರ್ನಾಟಕ ಬ್ಯಾಂಕ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 9/01/2019 ಕೊನೆಯ ದಿನವಾಗಿದೆ.
ಕರ್ನಾಟಕ ಬ್ಯಾಂಕ್ ದೇಶದ ವಿವಿಧ ನಗರದಲ್ಲಿ ಖಾಲಿ ಇರುವ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆದರೆ, ಎಷ್ಟು ಹುದ್ದೆಗಳಿವೆ? ಎಂಬುದನ್ನು ಸ್ಪಷ್ಟಪಡಿಸಿಲ್ಲ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಪಡೆದಿರಬೇಕು. ಪಿಜಿ ಡಿಪ್ಲೊಮಾ ಮಾಡಿದವರು ಸಹ ಅರ್ಜಿಗಳನ್ನು ಸಲ್ಲಿಸಬಹುದು. ಅಗ್ರಿಕಲ್ಚರ್ ಸೈನ್ಸ್ ಅಥವ ಕಾನೂನು ವಿಷಯದಲ್ಲಿ ಪದವಿ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿ ಪಡಿಸಿರುವ ಕನಿಷ್ಠ ವಯೋಮಿತಿ 21 ವರ್ಷಗಳು, ಗರಿಷ್ಠ 28 ವರ್ಷ (1 ಡಿಸೆಂಬರ್ 2018ಕ್ಕೆ ಅನ್ವಯವಾಗುವಂತೆ). ಎಸ್‌ಸಿ/ಎಸ್‌ಟಿ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 5, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಸುವ ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 600 ರೂ., ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳು 500 ರೂ. ಶುಲ್ಕವನ್ನು ಪಾವತಿ ಮಾಡಬೇಕು.
ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications