ಕರ್ನಾಟಕ ಬ್ಯಾಂಕ್ ನೇಮಕಾತಿ; ವೇತನ 69 ಸಾವಿರ ರೂ.ಗಳು
ಬೆಂಗಳೂರು, ಜನವರಿ 10 : ಕರ್ನಾಟಕ ಬ್ಯಾಂಕ್ ಪ್ರೊಬೆಷನರಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಜನವರಿ 18, 2020 ಕೊನೆಯ ದಿನವಾಗಿದೆ.
ಅರ್ಜಿಗಳನ್ನು ಸಲ್ಲಿಸಲು ಕರ್ನಾಟಕ ಬ್ಯಾಂಕ್ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ. ಆನ್ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ. ಅರ್ಜಿ ಶುಲ್ಕವನ್ನು ಪಾವತಿಸಲು ಸಹ ಜನವರಿ 18 ಕೊನೆಯ ದಿನವಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 69,000 ರೂ. ವೇತನವನ್ನು ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.

ವಿದ್ಯಾರ್ಹತೆಯ ವಿವರಗಳು
ಯಾವದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಯುಜಿಸಿಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಜನವರಿ 1, 2020ಕ್ಕೆ ಅನ್ವಯವಾಗುವಂತೆ. ಪರೀಕ್ಷೆ ಬರೆದು ಅಂತಿಮ ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸುವಂತಿಲ್ಲ.

ವಯೋಮಿತಿ ವಿವರಗಳು
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. 1 ಜನವರಿ 2020ಕ್ಕೆ ಅನ್ವಯವಾಗುವಂತೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಶುಲ್ಕ, ಆಯ್ಕೆ ಪ್ರಕ್ರಿಯೆ
ಆನ್ಲೈನ್ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಫೆಬ್ರವರಿ 16ರಂದು ಆನ್ಲೈನ್ ಪರೀಕ್ಷೆ ನಡೆಯಲಿದೆ.
ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 600 ರೂ., ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 500 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ.

ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಬ್ಯಾಂಕ್ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿ ಭರ್ತಿ ಮಾಡಿ ಅರ್ಜಿ ಸಲ್ಲಿಸಬಹುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
https://karnatakabank.com/
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications