ಕರ್ನಾಟಕದ ಬ್ಯಾಂಕ್ ನೇಮಕಾತಿ: ಕ್ಲರ್ಕ್ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ಮೇ 14: ಕರ್ನಾಟಕ ಬ್ಯಾಂಕ್ 2022ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಮೇ 21, 2022ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: ಕರ್ನಾಟಕ ಬ್ಯಾಂಕ್
ಹುದ್ದೆ ಹೆಸರು: ಕ್ಲರ್ಕ್
ಹುದ್ದೆ ಸಂಖ್ಯೆ: ವಿವಿಧ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಮೇ 21, 2022
ವಿದ್ಯಾರ್ಹತೆ:
ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಶೇ 60(ಫಸ್ಟ್ ಕ್ಲಾಸ್) ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಅಥವಾ ಯುಜಿಸಿ ಮಾನ್ಯತೆ ಯಾವುದೇ ವಿಶ್ವ ವಿದ್ಯಾಲಯದಿಂದ ತತ್ಸಮಾನ ಕೋರ್ಸ್ ಮುಗಿಸಿ ಕನಿಷ್ಠ ಶೇ 60ರಷ್ಟು ಅಂಕ ಗಳಿಸಿರಬೇಕು. ಮೇ 1, 2022ರೊಳಗೆ ಪದವಿ ಪಡೆದಿರ ತಕ್ಕದ್ದು. ಅಂತಿಮ ವರ್ಷದ ಪದವಿ ಪರೀಕ್ಷೆ ಬರೆದು, ಫಲಿತಾಂಶಕ್ಕಾಗಿ ಕಾಯುತ್ತಿರುವವರು ಅರ್ಜಿ ಸಲ್ಲಿಸಬೇಕಾಗಿಲ್ಲ.
ನೇಮಕಾತಿ ವಿವರ:
ಅಭ್ಯರ್ಥಿಗಳು ಆನ್ ಲೈನ್ ಪರೀಕ್ಷೆ ಎದುರಿಸಬೇಕಾಗುತ್ತದೆ. ಪರೀಕ್ಷೆಗಳನ್ನು ಜೂನ್ 2022ರಲ್ಲಿ ನಡೆಸುವ ಸಾಧ್ಯತೆಯಿದ್ದು, ದಿನಾಂಕವನ್ನು ನಂತರ ಪ್ರಕಟಿಸಲಾಗುತ್ತದೆ. ಬೆಂಗಳೂರು, ಧಾರವಾಡ, ಹುಬ್ಬಳ್ಳಿ, ಮಂಗಳೂರು, ಮುಂಬೈ, ಮೈಸೂರು, ನವದೆಹಲಿ, ಶಿವಮೊಗ್ಗ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ.
ವಯೋಮಿತಿ:
ಗರಿಷ್ಠ 26ವರ್ಷ(ಮೇ 1, 2022ರಂತೆ)
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿ: 700 ರು ಶುಲ್ಕ
ಎಸ್ ಸಿ, ಎಸ್ಟಿ ಅಭ್ಯರ್ಥಿ: 600 ರು ಶುಲ್ಕ
ಪ್ರಮುಖ ದಿನಾಂಕ:
ಆನ್ ಲೈನ್ ನೋಂದಣಿ ಹಾಗೂ ಅರ್ಜಿ ಶುಲ್ಕ ಪಾವತಿ ಆರಂಭ ದಿನಾಂಕ: ಮೇ 10
ಆನ್ ಲೈನ್ ಅರ್ಜಿ ಸಲ್ಲಿಕೆ ಹಾಗೂ ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ: ಮೇ 21
ಅರ್ಜಿ ಸಲ್ಲಿಸುವ ವಿಧಾನ
* ಕರ್ನಾಟಕ ಬ್ಯಾಂಕ್ ಅಧಿಕೃತ ವೆಬ್ ತಾಣ(karnatakabank.com)ಕ್ಕೆ ಭೇಟಿ ಕೊಡಿ
* ಕೆರಿಯರ್ ವಿಭಾಗಕ್ಕೆ ತೆರಳಿ ನೋಂದಾಯಿಸಿಕೊಳ್ಳಿ
* ಹುದ್ದೆಗೆ ಸಂಬಂಧಪಟ್ಟ ಅರ್ಜಿಯನ್ನು ಭರ್ತಿ ಮಾಡಿ
* ಅರ್ಜಿಗೆ ಅಗತ್ಯವಿರುವ ದಾಖಲೆಗಳನ್ನು ಒದಗಿಸಿ
* ಅರ್ಜಿ ಶುಲ್ಕವನ್ನು ಪಾವತಿಸಿ
* ಭರ್ತಿಯಾಗಿ ಅರ್ಜಿಯಲ್ಲಿ ಸಲ್ಲಿಸಿ
* ಸಲ್ಲಿಸಿದ ಅರ್ಜಿಯ ಪ್ರಿಂಟ್ ಔಟ್ ತೆಗೆದಿರಿಸಿಕೊಳ್ಳಿ
ಹೆಚ್ಚಿನ ವಿವರಗಳನ್ನು ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ (https://ibpsonline.ibps.in/kblcapr22/)