Karnataka Bank Recruitment; ಆ. 26ರ ತನಕ ಅರ್ಜಿ ಹಾಕಿ
ಬೆಂಗಳೂರು, ಆಗಸ್ಟ್ 16: ಕರ್ನಾಟಕ ಬ್ಯಾಂಕ್ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ಆಗಸ್ಟ್ 26 ಕೊನೆಯ ದಿನವಾಗಿದೆ.
ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು ಎಷ್ಟು ಹುದ್ದೆಗಳಿವೆ? ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಿಲ್ಲ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ಬ್ರಾಂಚ್‌ನಲ್ಲಿ ಕೆಲಸ ಮಾಡಬೇಕಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಕೆ ಮಾಡಬೇಕಿದೆ.

ಕರ್ನಾಟಕ ಬ್ಯಾಂಕ್ ನೇಮಕಾತಿ ನಿಯಮಗಳ ಅನ್ವಯ ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಎಂಬಿಎ, ಪದವಿ, ಎಲ್‌ಎಲ್‌ಬಿ ಅಥವ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ 1 ಆಗಸ್ಟ್ 2023ಕ್ಕೆ ಅನ್ವಯವಾಗುವಂತೆ 28 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಕೆ ಮಾಡುವವರು ಆನ್‌ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 700 ರೂ. ಮತ್ತು ಇತರ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 800 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡುವಾಗ ಸರಿಯಾದ ಇ-ಮೇಲ್ ವಿಳಾಸ ಮತ್ತು ಮೊಬೈಲ್ ನಂಬರ್ ದಾಖಲು ಮಾಡಬೇಕಿದೆ. ಅರ್ಜಿ ಸಲ್ಲಿಕೆ ಮಾಡಿದ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 2023ರಲ್ಲಿ ಆನ್‌ಲೈನ್ ಮೂಲಕ ಲಿಖಿತ ಪರೀಕ್ಷೆ ನಡೆಯುವ ನಿರೀಕ್ಷೆ ಇದೆ.
ಅರ್ಜಿ ಸಲ್ಲಿಕೆ ಮಾಡಲು, ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಿ karnatakabank.com












Click it and Unblock the Notifications