ಕರ್ನಾಟಕ ಬ್ಯಾಂಕ್ ನೇಮಕಾತಿ; ವೇತನ 63 ಸಾವಿರ ರೂ.

ಬೆಂಗಳೂರು, ಡಿಸೆಂಬರ್ 01; ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. Law Officer ಹುದ್ದೆಗೆ ಅರ್ಜಿಗಳನ್ನು ಕರೆಯಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿಸೆಂಬರ್ 15ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಿದೆ.

ದೇಶಾದ್ಯಂತ ಖಾಲಿ ಇರುವ Law Officer ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಬ್ಯಾಂಕ್ ಅಧಿಸೂಚನೆ ಹೊರಡಿಸಿದೆ. ಒಟ್ಟು ಎಷ್ಟು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ? ಎಂದು ಸ್ಪಷ್ಟಪಡಿಸಿಲ್ಲ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ವಿಷಯದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರಬೇಕು.

Karnataka Bank Recruitment Apply For Law Officer Post

ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 63,000 ರೂ. ಪ್ರತಿ ತಿಂಗಳ ವೇತನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.

ವಯೋಮಿತಿ ಮಾಹಿತಿ; ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಕರ್ನಾಟಕ ಬ್ಯಾಂಕ್ ನೇಮಕಾತಿ ನಿಯಮಗಳ ಪ್ರಕಾರ ಕನಿಷ್ಠ ವಯೋಮಿತಿ 30 ವರ್ಷ ನಿಗದಿ ಮಾಡಲಾಗಿದೆ (1/11/2023)ಕ್ಕೆ ಅನ್ವಯವಾಗುವಂತೆ. ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿ ಸಲ್ಲಿಕೆ ಮಾಡುವ ಎಲ್ಲಾ ವರ್ಗದ ಅಭ್ಯರ್ಥಿಗಳು 600 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಮಾತ್ರ ಪಾವತಿ ಮಾಡಬೇಕು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡುವಾಗ ಸರಿಯಾದ ಇ-ಮೇಲ್ ವಿಳಾಸ, ಮೊಬೈಲ್ ನಂಬರ್ ನಮೂದು ಮಾಡಬೇಕು.

ಆಸಕ್ತ ಮತ್ತು ಅರ್ಹರು ಅರ್ಜಿ ಸಲ್ಲಿಕೆ ಮಾಡಿದ ಮೇಲೆ ವಿದ್ಯಾರ್ಹತೆ ಪ್ರಮಾಣ ಪತ್ರ, ವಯಸ್ಸಿನ ದೃಢೀಕರಣ ಮುಂತಾದ ಅಗತ್ಯ ದಾಖಲೆಗಳನ್ನು ಸಹ ಅಪ್‌ಲೋಡ್ ಮಾಡಬೇಕು. ಅರ್ಜಿ ಸಬ್ ಮಿಟ್ ಮಾಡಿದ ಬಳಿಕ ಅದರ ಛಾಯಚಿತ್ರದ ಪ್ರತಿಯನ್ನು ಮುಂದಿನ ಅನುಕೂಲಕ್ಕಾಗಿ ತೆಗೆದಿಟ್ಟುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಕರ್ನಾಟಕ ಬ್ಯಾಂಕ್ ನೇಮಕಾತಿಯಲ್ಲಿ ಆಸಕ್ತಿ ಹೊಂದಿರುವ, ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಲು https://karnatakabank.online-ap1.com/ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ karnatakabank.com ವೆಬ್ ಸೈಟ್‌ಗೆ ಭೇಟಿ ಕೊಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+