ಕರ್ನಾಟಕ ಬ್ಯಾಂಕ್ ನೇಮಕಾತಿ; ಮಂಗಳೂರಿನಲ್ಲಿ ಮ್ಯಾನೇಜರ್ ಹುದ್ದೆ
ಮಂಗಳೂರು, ಜನವರಿ 09; ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 20/1/2022 ಕೊನೆಯ ದಿನವಾಗಿದೆ.
ಮಂಗಳೂರಿನಲ್ಲಿ ಮ್ಯಾನೇಜರ್ (Scale-II) ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸುವವರು ಯಾವುದೇ ಮಾನ್ಯತೆ ಪಡೆದ ಮಂಡಳಿ/ ವಿಶ್ವವಿದ್ಯಾಲಯದಿಂದ ಚಾರ್ಟರ್ಡ್ ಅಕೌಂಟೆಂಟ್ ವ್ಯಾಸಂಗ ಮಾಡಿರಬೇಕು.
3000 ಭೂ ಮಾಪಕರ ನೇಮಕಾತಿ; ಜನವರಿ 21ರ ತನಕ ಅರ್ಜಿ ಹಾಕಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ (ಡಿಸೆಂಬರ್ 31, 2021ಕ್ಕೆ ಅನ್ವಯವಾಗುವಂತೆ). ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 1,00,500 ನಿಗಿದಿ ಮಾಡಲಾಗಿದೆ.
2,52,902 ಲಕ್ಷ ಹುದ್ದೆಗಳು ಖಾಲಿ; ನೇಮಕಾತಿ ಬಗ್ಗೆ ಸರ್ಕಾರದ ಮಾಹಿತಿ
ಕರ್ನಾಟಕ ಬ್ಯಾಂಕ್ ನೇಮಕಾತಿ ನಿಯಮಗಳ ಅನ್ವಯ ಅಧಿಸೂಚನೆ ಪ್ರಕಾರ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷದ ವಯೋಮತಿ ಸಡಿಲಿಕೆ ಇರುತ್ತದೆ.
ಶಿಕ್ಷಕರ ನೇಮಕಾತಿ; ಸಿಹಿ ಸುದ್ದಿ ಕೊಟ್ಟ ಸಚಿವ ಬಿ. ಸಿ. ನಾಗೇಶ್
ಅರ್ಜಿಗಳನ್ನು ಸಲ್ಲಿಸುವ ಎಸ್ಸಿ/ಎಸ್ಟಿ ಅಭ್ಯರ್ಥಿಗಳು 400 ರೂ. ಮತ್ತು ಇತರ ಎಲ್ಲಾ ಅಭ್ಯರ್ಥಿಗಳು 600 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿ ಮಾಡಬೇಕು. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿಗಳನ್ನು ಭರ್ತಿ ಮಾಡಲು ವಿಳಾಸ; ಸಹಾಯಕ ಪ್ರಧಾನ ವ್ಯವಸ್ಥಾಪಕರು, ಕರ್ನಾಟಕ ಬ್ಯಾಂಕ್ ಲಿಮಿಟೆಡ್, ಪ್ರಧಾನ ಕಚೇರಿ, ಮಹಾವೀರ ಸರ್ಕಲ್, ಕಂಕನಾಡಿ, ಮಂಗಳೂರು 575002.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಗ್ರಾಮ ಸಹಾಯಕ ಹುದ್ದೆಗೆ ಅರ್ಜಿ ಹಾಕಿ; ದಾವಣಗೆರೆ ತಾಲ್ಲೂಕು ಕಸಬಾ ಹೋಬಳಿ ನಿಟುವಳ್ಳಿ ಫಿರ್ಕಾ ಗ್ರಾಮ ಸಹಾಯಕರ ಖಾಲಿ ಹುದ್ದೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಅರ್ಜಿಗಳನ್ನು ಸಲ್ಲಿಸುವವರು ಖಾಲಿ ಇರುವ ಗ್ರಾಮ ಸಹಾಯಕ ಹುದ್ದೆಯ ವೃತ್ತದ ನಿವಾಸಿಯಾಗಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮತಿ 25 ವರ್ಷಗಳು. ಅಭ್ಯರ್ಥಿಗಳಿಗೆ ಕೇಂದ್ರ ಸ್ಥಾನದಲ್ಲಿಯೇ ವಾಸವಾಗಿರಬೇಕು. ವಿದ್ಯಾವಂತರಾಗಿರಬೇಕು, ಓದಲು ಹಾಗೂ ಬರೆಯಲು ಚೆನ್ನಾಗಿ ಬಲ್ಲವರಾಗಿರಬೇಕು. ಗ್ರಾಮಸಹಾಯಕ, ತಳವಾರರು, ತೋಟಿಗಳು, ನೀರುಗಂಟಿಗಳು, ವಾಲಿಕರ್ಸ್, ಮಹರ್ಸ್, ಬಾರಿಕರ್ಸ್, ನೀರಾಡಿಗಳು, ಬಲೂತಿದಾರ್ಸ್, ತಳಯಾರಿಸ್, ವೆಟಿಸ್, ಕುಲವಡಿಸ್, ಉರ್ಗಾನಿಸ್ ಕುಟುಂಬದವರಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಯೊಂದಿಗೆ ಜನ್ಮ ದಿನಾಂಕ ದೃಢೀಕರಿಸಲು ಶಾಲಾ ವರ್ಗಾವಣೆ ಪತ್ರ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಲಗತ್ತಿಸಬೇಕು. ವಾಸಸ್ಥಳ ದೃಢೀಕರಣ ಪತ್ರ, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ವ್ಯಾಸಂಗ ಪೂರೈಸಿದ ಬಗ್ಗೆ ದಾಖಲೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, 20 ರೂ. ಸ್ಟಾಂಪ್ ಪೇಪರ್ ನಲ್ಲಿ ಸ್ವಯಂ ಘೋಷಣಾ ಪ್ರಮಾಣ ಪತ್ರ, ವಂಶವೃಕ್ಷ, ಒಪ್ಪಿಗೆ ಪ್ರಮಾಣಪತ್ರ (ಒಂದೇ ಕುಟುಂಬದವರಾಗಿದ್ದರೆ), ಚಾರಿತ್ರ್ಯದ ಬಗ್ಗೆ ಪೊಲೀಸ್ ವರದಿ ಸಲ್ಲಿಸಬೇಕು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ವಿವರಗಳನ್ನು ಜನವರಿ 20ರ ಸಂಜೆ 5.30 ರೊಳಗೆ ದಾವಣಗೆರೆ ತಾಲ್ಲೂಕು ಕಛೇರಿಗೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.
ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ಚನ್ನಗಿರಿ ಪುರಸಭೆ ವತಿಯಿಂದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ(ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.
ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ತಾತ್ಕಾಲಿಕ ಅವಧಿಗೆ ಭರ್ತಿ ಮಾಡಲಾಗುತ್ತಿದೆ. ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನಗರಸಭೆ ವ್ಯಾಪ್ತಿಯಲ್ಲಿ ನೋಂದಾಯಿತ ಅರ್ಹ ಸ್ವ-ಸಹಾಯ ಸಂಘಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಿಂದ ಆಯ್ಕೆ ಮಾಡಲಾಗುತ್ತದೆ.
ಒಟ್ಟು ಹುದ್ದೆಗಳ ಸಂಖ್ಯೆ 2. ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆಗೆ ಆದ್ಯತೆ ನೀಡಲಾಗುವುದು. ಮಾಸಿಕ ಗೌರವಧನ 8000 ರೂ. ಮತ್ತು ಪ್ರಯಾಣ ಭತ್ಯೆ 2000 ರೂ. ನೀಡಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ವಯೋಮಿತಿ 18 ರಿಂದ 45 ವರ್ಷಗಳು.
ಆಸಕ್ತ ಮಹಿಳಾ ಅಭ್ಯರ್ಥಿಗಳು ನಗರಸಭೆ ಕಚೇರಿ ಅವಧಿಯಲ್ಲಿ ಕಚೇರಿ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದು. ಅರ್ಜಿಯನ್ನು ಸಲ್ಲಿಕೆ ಮಾಡಲು ಜನವರಿ 18 ರ ಸಂಜೆ 5.30 ಕೊನೆಯ ದಿನವಾಗಿದೆ.