ಪೊಲೀಸ್ ಇಲಾಖೆಯಿಂದ 5,311 ಹುದ್ದೆಗಳಿಗೆ ಅರ್ಜಿ ಆಹ್ವಾನ

Posted By:
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 20: ಪೊಲೀಸ್ ಕಾನ್ಸ್ ಟೇಬಲ್ (ನಾಗರಿಕ) (ಪುರುಷ ಹಾಗೂ ಮಹಿಳೆ), ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಪುರುಷ) (ಸಿಎಆರ್/ಡಿಎಆರ್) ಹುದ್ದೆಗಳಿಗೆ ಪೊಲೀಸ್ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟಾರೆ 5,311 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಸೆ.21ರಿಂದ ಅಕ್ಟೋಬರ್ 17ರ ಮಧ್ಯೆ ಅರ್ಜಿ ಸಲ್ಲಿಸಬಹುದಾಗಿದೆ.

ಪೊಲೀಸ್ ಕಾನ್ಸ್ ಟೇಬಲ್ (ನಾಗರಿಕ) (ಪುರುಷ ಹಾಗೂ ಮಹಿಳೆ) ಹುದ್ದೆಗಳಿಗೆ ಕನಿಷ್ಠ 19 ವರ್ಷ, ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಪುರುಷ) (ಸಿಎಆರ್/ಡಿಎಆರ್) ಹುದ್ದೆಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಯಾಗಿದ್ದು, ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 25 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗಕ್ಕೆ ಗರಿಷ್ಠ 27 ವರ್ಷ, ಬುಡಕಟ್ಟು ಜನಾಂಗದ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.[544 ಪಿಎಸ್‌ಐಗಳ ನೇಮಕಾತಿ ಅಧಿಸೂಚನೆ ಪ್ರಕಟ]

Jobs

ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 250 ಶುಲ್ಕ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಗಳು 100 ಶುಲ್ಕ ಪಾವತಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ 080-22943346 ಸಂಪರ್ಕಿಸಬಹುದು. ವೆಬ್ ಸೈಟ್ http://www.ksp.gov.in/Page.aspx?page=Current%20Recruitment ನೋಡಬಹುದು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka police department released notification for the 5,311 police constable recruitment. Candidates can apply form September 21, 2016.
Please Wait while comments are loading...