Excise Department Recruitment: ಕರ್ನಾಕದಲ್ಲಿ ಅಬಕಾರಿ ಇಲಾಖೆಯ 1,207 ಹುದ್ದೆಗಳ ನೇಮಕಾತಿಗೆ ಸರ್ಕಾರ ಒಪ್ಪಿಗೆ
Excise Department Recruitment 2025: ರಾಜ್ಯ ಸರ್ಕಾರವು ಆಗಾಗಾ ಉದ್ಯೋಗಾಕಾಂಶಿಗಳಿಗೆ ಗುಡ್ ನ್ಯೂಸ್ ನೀಡುತ್ತಲೇ ಇರುತ್ತದೆ. ಹಾಗೆಯೇ ಇದೀಗ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1,207 ಹುದ್ದೆಗಳ ನೇಮಕಾತಿಗೆ ಒಪ್ಪಿಗೆ ಸೂಚಿಸಿದೆ. ಹಾಗಾದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಏನೆಲ್ಲ ಅರ್ಹತೆ ಹೊಂದಿರಬೇಕು ಹಾಗೂ ಆಯ್ಕೆಯಾದವರಿಗೆ ಮಾಸಿಕ ವೇತನ ಎಷ್ಟಿರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯ ಸರ್ಕಾರವು ಅಬಕಾರಿ ಇಲಾಖೆಯಲ್ಲಿನ 1,207 ಹುದ್ದೆಗಳ ಭರ್ತಿಗೆ ಅನುಮತಿ ನೀಡಿದ್ದು, ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ. ಈ ಮೂಲಕ ಉದ್ಯೋಗ ಹುಡುಕಾಟದಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಂತಾಗಿದೆ. ಅಬಕಾರಿ ಇಲಾಖೆಯಲ್ಲಿ ಅಬಕಾರಿ ಉಪ ನಿರೀಕ್ಷಕ ಅಬಕಾರಿ ಪೇದೆಗಳ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ ನೀಡಿದೆ.

ಖಾಲಿಯಿರುವ ಹುದ್ದೆಗಳ ವಿವರ
* ಅಬಕಾರಿ ಉಪ ನಿರೀಕ್ಷಕ-265 ಹುದ್ದೆಗಳು
* ಅಬಕಾರಿ ಪೇದೆ - 942 ಹುದ್ದೆಗಳು
* ಒಟ್ಟು - 1207 ಹುದ್ದೆಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕದ ಬಗ್ಗೆ ಶೀಘ್ರವೇ ಅಧಿಸೂಚನೆ ಪ್ರಕಟವಾಗಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ 7ನೇ ವೇತನ ಆಯೋಗದ ನಿಯಮಾವಳಿಗಳ ಅನ್ವಯ ವೇತನ ನಿಗದಿಯಾಗಲಿದೆ. ಕನಿಷ್ಟ 18 ವರ್ಷ ಗರಿಷ್ಟ 27 ವರ್ಷದವರೆಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ & ವೈದ್ಯಕೀಯ ಪರೀಕ್ಷೆಯನ್ನು ಇರುತ್ತದೆ.
ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?: ರಾಜ್ಯ ಸರ್ಕಾರ ಶಿಕ್ಷಣ, ಉದ್ಯೋಗವಕಾಶಕ್ಕೆ ಸಂಬಂಧಿಸಿದಂತೆ ಆಗಾಗ ಶುಭ ಸುದ್ದಿಗಳನ್ನು ನೀಡುತ್ತಲೇ ಇರುತ್ತದೆ. ಇದೀಗ ರಾಜ್ಯದ ವಿವಿಧ ಕಾಲೇಜುಗಳಲ್ಲಿ ಖಾಲಿ ಇರುವ 1,033 ಹುದ್ದೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಗೃಹ ಕಛೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಖಾಲಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ತೆಗೆದುಕೊಂಡ ಕ್ರಮಗಳ ಬಗ್ಗೆ ಎರಡು ದಿನಗಳಲ್ಲಿ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇನ್ನು ಉನ್ನತ ಶಿಕ್ಷಣಕ್ಕೆ ಪ್ರಸಕ್ತ ಬಜೆಟ್‌ನಲ್ಲಿ 5,862 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಈವರೆಗೆ 3,713 ಕೋಟಿ ರೂಪಾಯಿ ಬಳಕೆಯಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬಜೆಟ್‌ನಲ್ಲಿ 250 ಕೋಟಿ ರೂಪಾಯಿ ನೀಡಲಾಗಿದೆ. ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.












Click it and Unblock the Notifications