ಅರಣ್ಯ ಇಲಾಖೆ ನೇಮಕಾತಿ; 10 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಬೆಂಗಳೂರು, ಸೆಪ್ಟೆಂಬರ್ 13 : ಕರ್ನಾಟಕ ಅರಣ್ಯ ಇಲಾಖೆ 10 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು 1/10/2019 ಕೊನೆಯ ದಿನವಾಗಿದೆ.

ಅರಣ್ಯ ಇಲಾಖೆ 2 ವರ್ಷದ ಗುತ್ತಿಗೆ ಆಧಾರದ ಮೇಲೆ 10 ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಅರ್ಜಿ ಸಲ್ಲಿಸಿದವರನ್ನು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಆಯ್ಕೆಯಾದವರು ಸಾಗರ, ಚಿಕ್ಕಮಗಳೂರು, ಕಡೂರು, ಮೈಸೂರು, ಮಂಡ್ಯ, ಕೋಲಾರ, ಹಾಸನ, ರಾಯಚೂರು, ಕಲಬುರ್ಗಿ ಮತ್ತು ಧಾರವಾಡದಲ್ಲಿ ಕೆಲಸ ಮಾಡಬೇಕಾಗಿದೆ.

Karnataka Forest Department Recruitment Apply For 10 Post

ಅರ್ಜಿ ಸಲ್ಲಿಸುವವರು ಸಹಾಯಕ ಆಯುಕ್ತರು (ಕಂದಾಯ) ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರಬೇಕು. ಅರಣ್ಯ ಮೋಜಣಿ ಹಾಗೂ ಗಡಿರೇಖೆ ಗುರುತಿಸುವಿಕೆ ಮತ್ತು ನಕಾಶೆ ತಯಾರಿಕೆ, ಭೂ ವಿವಾದಗಳ ಕುರಿತಂತೆ ಸಿವಿಲ್ ನ್ಯಾಯಾಲಯದಂತೆ ಕರ್ತವ್ಯ ನಿರ್ವಹಿಸಬೇಕು.

ಥಿಯೋಡೊಲೈಟ್ ಸರ್ವೆ ಮ್ತು ಜಿಪಿಎಸ್ ಸರ್ವೆ ಕುರಿತಂತೆ ಪರಿಣಿತರಾಗಿರಬೇಕು. ಕರ್ತವ್ಯ ನಿರ್ವಹಿಸುವ ಕೇಂದ್ರ ಸ್ಥಾನದ ಜಿಲ್ಲಾ ವ್ಯಾಪ್ತಿಯ ಅರ್ಜಿದಾರರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ವಯೋಮಿತಿ ವಿವರ: ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ ಅರ್ಜಿದಾರರು 65 ವರ್ಷ ವಯಸ್ಸನ್ನು ಮೀರಿರಬಾರದು. ಆಯ್ಕೆಯಾದವರಿಗೆ ಮಾಸಿಕ ವೇತನ 50 ಸಾವಿರ ರೂ.ಗಳು (ವಾಹನ ವ್ಯವಸ್ಥೆ ಇದೆ).

ವೆಬ್ ಸೈಟ್‌ನಲ್ಲಿ ಅರ್ಜಿಗಳನ್ನು ಡೌನ್‌ ಲೋಡ್ ಮಾಡಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.

ವಿಳಾಸ: ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು (ಮುಖ್ಯಸ್ಥರು ಅರಣ್ಯ ಪಡೆ), ಅರಣ್ಯ ಭವನ, ಮಲ್ಲೇಶ್ವರಂ, ಬೆಂಗಳೂರು 560003.

ಅರ್ಜಿ ಸಲ್ಲಿಸುವವರು ಸಹಾಯಕ ಆಯುಕ್ತರು (ಕಂದಾಯ) ಈ ಹುದ್ದೆಯಲ್ಲಿ ಸೇವೆ ಸಲ್ಲಿಸಿದ ಕುರಿತು ಸೇವಾ ವಿವರಗಳ ಮಾಹಿತಿ ಹಾಗೂ ವಯೋಮಿತಿಯ ಕುರಿತು ಅಧಿಕೃತ ದಾಖಲೆಯನ್ನು ಅರ್ಜಿಯೊಂದಿಗೆ ಲಗತ್ತಿಸುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+