ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ

ಬೆಂಗಳೂರು, ಜುಲೈ 22 : ಅರಣ್ಯ ಇಲಾಖೆ ಉಪ ವಲಯ ಅರಣ್ಯಾಧಿಕಾರಿ, ಅರಣ್ಯ ರಕ್ಷಕ, ಅರಣ್ಯ ವೀಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 19, 2015 ಕೊನೆಯ ದಿನವಾಗಿದೆ.

ಉಪ ವಲಯ ಅರಣ್ಯಾಧಿಕಾರಿ 50 ( 6 ಹೈ-ಕರ್ನಾಟಕ ಭಾಗ), ಅರಣ್ಯ ರಕ್ಷಕ 50 (6 ಹೈ-ಕರ್ನಾಟಕ ಭಾಗ), ಅರಣ್ಯ ವೀಕ್ಷಕ 25 ( 2 ಹೈ-ಕರ್ನಾಟಕ) ಹುದ್ದೆಗಳು ಖಾಲಿ ಇವೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 19, ಅರ್ಜಿಗಳನ್ನು ಭರ್ತಿ ಮಾಡಲು ಆಗಸ್ಟ್ 20 ಕೊನೆಯ ದಿನಾಂಕವಾಗಿದೆ. [ನೇಮಕಾತಿ ಆದೇಶ ಓದಿ]

jobs

ವಿದ್ಯಾರ್ಹತೆ : ಉಪ ವಲಯ ಅರಣ್ಯಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಶುಸಂಗೋಪನೆ, ರಸಾಯನಶಾಸ್ತ್ರ ಸೇರಿದಂತೆ ಯಾವುದಾದದರೂ ವಿಷಯದಲ್ಲಿ ಪದವಿ ಪಡೆದಿರಬೇಕು.[ಅರ್ಜಿ ಸಲ್ಲಿಸಲು ವಿಳಾಸ]

ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವವರು ದ್ವಿತೀಯ ಪಿಯುಸಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅರಣ್ಯ ವೀಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್‌ಎಸ್‌ಎಲ್‌ಸಿ ಉತ್ತೀರ್ಣಗೊಂಡಿರಬೇಕು. [ಅತಿಥಿ ಶಿಕ್ಷಕರ ನೇಮಕಾತಿ ಅಧಿಸೂಚನೆ]

ಅರ್ಜಿ ಶುಲ್ಕಗಳು : ಸಾಮಾನ್ಯ/2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಮತ್ತು 12 ರೂ. ಸೇವಾ ಶುಲ್ಕವನ್ನು ಪಾವತಿ ಮಾಡಬೇಕು. ಪ.ಜಾ/ಪ.ಪಂ/ಪ್ರವರ್ಗ -1ರ ಅಭ್ಯರ್ಥಿಗಳು 50 ರೂ. ಶುಲ್ಕ ಮತ್ತು 12 ರೂ. ಸೇವಾ ಶುಲ್ಕ ಪಾವತಿಸಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+