ಅರಣ್ಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ, ಅರ್ಜಿ ಹಾಕಿ

ಬೆಂಗಳೂರು, ಜೂ. 18 : ಹೈದರಾಬಾದ್-ಕರ್ನಾಟಕ ಪ್ರದೇಶ ವ್ಯಾಪ್ತಿಗೊಳಪಡುವ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ವಿಭಾಗಗಳ ಒಟ್ಟು 17 ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಹೈ-ಕರ್ನಾಟಕ ಪ್ರದೇಶದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 14, 2015.

ಅರ್ಜಿಯನ್ನು ಆನ್‍ಲೈನ್ ಮೂಲಕ ಮಾತ್ರ ಸಲ್ಲಿಸಬಹುದಾಗಿದೆ. ಅಧಿಸೂಚನೆಗಳನ್ನು ಇಲಾಖೆಯ ವೆಬ್‍ಸೈಟ್ http://kfdrecruitment.in/ ನಿಂದ ಪಡೆಯಬಹುದಾಗಿದ್ದು, ಅರ್ಜಿಯನ್ನು ತುಂಬಲು ಸಹಾಯಕವಾಗುವ ಸೂಚನೆಗಳನ್ನೂ ನೀಡಲಾಗಿದೆ. [ನೇಮಕಾತಿ ಆದೇಶ ಓದಿ]

 forest department

ವಿದ್ಯಾರ್ಹತೆ : ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10 ನೇ ತರಗತಿ ತೇರ್ಗಡೆ ಹೊಂದಿರಬೇಕು. ಅಭ್ಯರ್ಥಿಯು 2015 ರ ಜೂ.8ಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು. ಗರಿಷ್ಟ ವಯೋಮಿತಿ ಸಾಮಾನ್ಯ ವರ್ಗಕ್ಕೆ 30 ವರ್ಷ, ಪ್ರವರ್ಗ 2ಎ/2ಬಿ/3ಎ/3ಬಿ 32 ವರ್ಷಗಳು, ಪ.ಜಾ/ಪ.ಪಂ/ಪ್ರವರ್ಗ 1ರ ಅಭ್ಯರ್ಥಿಗಳಿಗೆ 33 ವರ್ಷಗಳು. [ಐಡಿಬಿಐ ಬ್ಯಾಂಕ್ ನಲ್ಲಿ ಕೆಲಸ ಖಾಲಿ ಇದೆ]

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20015ರ ಜುಲೈ 14 ರ ಮಧ್ಯಾಹ್ನ 2.30. ಹೆಚ್ಚಿನ ಮಾಹಿತಿಗಾಗಿ http://www.aranya.gov.in/Home.aspx ಭೇಟಿ ನೀಡಬಹುದು ಎಂದು ಬಳ್ಳಾರಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+