ಅರಣ್ಯ ಇಲಾಖೆ ನೇಮಕಾತಿ; 10 ಹುದ್ದೆಗಳಿಗೆ ಅರ್ಜಿ ಹಾಕಿ
ಬೆಂಗಳೂರು, ಅಕ್ಟೋಬರ್ 30; ಕರ್ನಾಟಕದ ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ 19ರ ತನಕ ಅರ್ಜಿ ಸಲ್ಲಿಸಬಹುದಾಗಿದೆ.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಖಾಲಿ ಇರುವ 10 ವಲಯ ಅರಣ್ಯಾಧಿಕಾರಿಗಳ ಹುದ್ದೆ ಭರ್ತಿ ಮಾಡಲಾಗುತ್ತಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.

ಬಿಎಸ್‌ಸಿ (ಅರಣ್ಯಶಾಸ್ತ್ರ) ಪದವೀಧರರಿಗೆ 5, ಬಿಎಸ್‌ಸಿ (ವಿಜ್ಞಾನ) ಅಥವ ಇಂಜಿನಿಯರಿಂಗ್ ಪದವೀಧರರಿಗೆ 5 ಹುದ್ದೆಗಳನ್ನು ಮೀಸಲಾಗಿ ಇಡಲಾಗಿದೆ. ಅರ್ಜಿ ಸಲ್ಲಿಕೆಗೆ ನವೆಂಬರ್ 19ರ ಸಂಜೆ 5.30, ಅರ್ಜಿ ಶುಲ್ಕ ಪಾವತಿ ಮಾಡಲು ನವೆಂಬರ್ 23 ಕೊನೆಯ ದಿನವಾಗಿದೆ.
ವಯೋಮಿತಿ; ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಕನಷ್ಠ ವಯೋಮಿತಿ 18 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ -1ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 33. ಪ್ರವರ್ಗ 2ಎ/ 2ಬಿ/ 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 31 ವರ್ಷಗಳು. ಸಾಮಾನ್ಯ ವರ್ಗದವರಿಗೆ 28 ವರ್ಷಗಳು.
ವಿದ್ಯಾರ್ಹತೆಯ ವಿವಿರ; ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅರಣ್ಯ ಶಾಸ್ತ್ರದಲ್ಲಿ ಪದವಿ ಪಡೆದಿರಬೇಕು.
ಕೃಷಿ, ಅರಣ್ಯ ಶಾಸ್ತ್ರ, ತೋಟಗಾರಿಕೆ, ಪಶುವೈದ್ಯಕೀಯ ಮತ್ತು ಪಶುಸಂಗೋಪನಾ ವಿಜ್ಞಾನ, ಮೀನುಗಾರಿಕೆ, ವನ್ಯಜೀವಿ, ಪರಿಸರ ವಿಜ್ಞಾನ, ರಸಾಯನಶಾಸ್ತ್ರ, ಭೂ ವಿಜ್ಞಾನ, ಗಣಿತ ಶಾಸ್ತ್ರ, ಭೌತಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಸಂಖ್ಯಾಶಾಸ್ತ್ರ ಅಥವ ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿರಬೇಕು.
ಕೃಷಿ, ಕೆಮಿಕಲ್, ಸಿವಿಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಮೆಕಾನಿಕಲ್, ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗರಿಷ್ಠ ಅಂಕಗಳಿಗೆ ಕನಿಷ್ಠ ಶೇ 50ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರುವುದು ಕಡ್ಡಾಯ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ https://aranya.gov.in/ ವೆಬ್‌ಸೈಟ್‌ಗೆ ಭೇಟಿ ನೀಡಿ.
ದೈಹಿಕ ಅರ್ಹತೆ; ಅರ್ಜಿಗಳನ್ನು ಸಲ್ಲಿಕೆ ಮಾಡುವ ಪುರುಷ ಅಭ್ಯರ್ಥಿಗಳು ಕನಿಷ್ಠ 163 ಸೆಂ. ಮೀ. ಎತ್ತರವಿರಬೇಕು. ಸಾಮಾನ್ಯ ಸ್ಥಿತಿಯಲ್ಲಿ 79 ಸೆಂ. ಮೀ. ಎದೆ ಸುತ್ತಳತೆ ಹೊಂದಿರಬೇಕು. ಎದೆಯ ಕನಿಷ್ಠ ಹಿಗ್ಗುವಿಕೆ 5 ಸೆಂ. ಮೀ. ಇರಬೇಕು. ಮಹಿಳಾ ಅಭ್ಯರ್ಥಿಗಳು ಕನಿಷ್ಠ 150 ಸೆಂ. ಮೀ. ಎತ್ತರವಿರಬೇಕು. ಕನಿಷ್ಠ ತೂಕ 40 ಕೆಜಿ.












Click it and Unblock the Notifications