Teacher Recruitment: ರಾಜ್ಯದಲ್ಲಿ ಶಿಕ್ಷಕರ ಹುದ್ದೆಗಳ ಭರ್ತಿ ಕುರಿತು ಮಹತ್ವದ ಅಪ್ಡೇಟ್ ಕೊಟ್ಟ ಸಚಿವ ಮಧು ಬಂಗಾರಪ್ಪ
Teacher recruitment: ರಾಜ್ಯದಲ್ಲಿ ಶಿಕ್ಷಕರ ಹುದ್ದೆಗಳ ಭರ್ತಿ ಕುರಿತು ಶಿಕ್ಷಣ ಇಲಾಖೆ ಆಗಾಗ ಮಾಹಿತಿ ನೀಡುತ್ತಲಿರುತ್ತದೆ. ಹಾಗೆಯೇ ಇದೀಗ ಶಿಕ್ಷಕರ ನೇಮಕಾತಿ ಕುರಿತು ಸಚಿವ ಮಹತ್ವದ ಅಪ್ಡೇಟ್‌ವೊಂದನ್ನು ನೀಡಿದ್ದಾರೆ. ಹಾಗಾದ್ರೆ, ಅವರು ಏನು ಹೇಳಿದ್ದಾರೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಶಿಕ್ಷಕರ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಇಲಾಖೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ. ಹೌದು.. ರಾಜ್ಯಾದ್ಯಂತ 26,000 ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧಾರ ಮಾಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗದಲ್ಲಿ ತಿಳಿಸಿದ್ದಾರೆ.

ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23ರಿಂದ ನವೆಂಬರ್ 9ರ ವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಎಂದು ತಿಳಿಸಿದರು.
ಇನ್ನೂ ಶೀಘ್ರದಲ್ಲೇ ಅನುದಾನಿತ ಶಾಲೆಯ ಶಿಕ್ಷಕರ ನೇಮಕಾತಿಗೂ ಸರ್ಕಾರ ಆದೇಶ ಹೊರಡಿಸಲಿದೆ. ರಾಜ್ಯದಲ್ಲಿ 800 ಕೆಪಿಎಸ್ ಶಾಲೆಯನ್ನು ಪ್ರಾರಂಭ ಮಾಡಲಾಗುವುದು. 6ನೇ ತರಗತಿಯಿಂದ ಕನ್ನಡದ ಜೊತೆ ಇಂಗ್ಲಿಷ್ ಕಲಿಕೆಗೂ ಅವಕಾಶ ಇರಲಿದೆ. ಕರ್ನಾಟಕ ಪಬ್ಲಿಕ್ ಶಾಲೆಗೆ 3,000 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಹೇಳಿದರು.
ನವೆಂಬರ್ ಎರಡನೇ ವಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುದ್ದಲಿ ಪೂಜೆ ಮಾಡಲಿದ್ದಾರೆ. ಎಐ ಆಧಾರಿತ ಶಿಕ್ಷಣ ನೀಡಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈಗ 1ನೇ ತರಗತಿಯಿಂದಲೇ ಕಂಪ್ಯೂಟರ್ ಕಲಿಸಲಾಗುವುದು. 6ನೇ ತರಗತಿಯಿಂದಲೇ ಸ್ಕಿಲ್ ಸ್ಕೂಲ್ ಪ್ರಾರಂಭ ಮಾಡಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಅವರು ಹೇಳಿದರು.
ಟಿಇಟಿ ಪರೀಕ್ಷೆಗೆ ದಿನಾಂಕ ನಿಗದಿ: ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಗೆ ಮುಹೂರ್ತ ಫಿಕ್ಸ್ ಆಗಿದೆ. ಡಿಸೆಂಬರ್ 7ರಂದು ಪರೀಕ್ಷೆ ನಡೆಸಲು ಶಾಲಾ ಶಿಕ್ಷಣ ಇಲಾಖೆ ಘೋಷಣೆ ಮಾಡಿದೆ. ಇಲಾಖಾಯು ಈ ಬಗ್ಗೆ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಪರೀಕ್ಷೆಯ ಫಲಿತಾಂಶವನ್ನು ಡಿಸೆಂಬರ್ 31ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದೆ.
ಅಭ್ಯರ್ಥಿಗಳು ಅಕ್ಟೋಬರ್ 23ರಿಂದ ನವೆಂಬರ್ 9ರ ವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಅದೇ ವೇಳೆ ಕಲ್ಯಾಣ ಕರ್ನಾಟಕ ಪ್ರದೇಶ ಹಾಗೂ ಉಳಿದ ಶಿಕ್ಷಕರ ಹುದ್ದೆಗಳ ಭರ್ತಿಗೂ ಸಿಇಟಿ ಪರೀಕ್ಷೆಯ ಮೂಲಕ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದೆ.
ಪರೀಕ್ಷೆ ಹಾಗೂ ಫಲಿತಾಂಶ ದಿನಾಂಕಗಳ ವಿವರ
* ಪರೀಕ್ಷೆ - ಡಿಸೆಂಬರ್ 7
* ಅರ್ಜಿ ಸಲ್ಲಿಕೆ - ಅಕ್ಟೋಬರ್ 23ರಿಂದ ನವೆಂಬರ್ 9ರ ವರೆಗೆ
* ಫಲಿತಾಂಶ - ಡಿಸೆಂಬರ್ 31
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ಕ್ಕೆ ಅರ್ಜಿ ಸಲ್ಲಿಸಬಯಸುವ ಅರ್ಹ ಅಭ್ಯರ್ಥಿಗಳು ಶಿಕ್ಷಣ ಇಲಾಖೆಯ https://schooleducation.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಅರ್ಜಿಯಲ್ಲಿ ಅಗತ್ಯ ಇರುವ ಎಲ್ಲಾ ಮಾಹಿತಿಗಳನ್ನು ಪೂರ್ಣವಾಗಿ ಭರ್ತಿ ಮಾಡಿದ ಬಳಿಕ ಅಭ್ಯರ್ಥಿಗಳು ತಮ್ಮ ನೊಂದಣಿ ಸಂಖ್ಯೆ ಹಾಗೂ ಪೂರ್ಣ ವಿವರಗಳನ್ನು ಒಳಗೊಂಡ ಅರ್ಜಿಯ ಕಂಪ್ಯೂಟರ್ ಜನರೇಟೆಡ್ ಪ್ರತಿಯ ಪ್ರಿಂಟ್‌ಔಟ್ ಪಡೆದುಕೊಳ್ಳಬೇಕು.
ಪರೀಕ್ಷೆ ದಿನಾಂಕಗಳ ವಿವರ
ಪತ್ರಿಕೆ-1: - 07/12/2025, ಭಾನುವಾರ
ಸಮಯ: - ಬೆಳಗ್ಗೆ 9.30 ರಿಂದ 12.00 ಗಂಟೆವರೆಗೆ
ಪತ್ರಿಕೆ-2: ದಿನಾಂಕ-07/12/2025, ಭಾನುವಾರ
ಸಮಯ : ಮಧ್ಯಾಹ್ನ 2ರಿಂದ 4.30 ಗಂಟೆವರೆಗೆ
ವರ್ಗವಾರು ಪರೀಕ್ಷಾ ಶುಲ್ಕಗಳ ವಿವರ
ಸಾಮಾನ್ಯ ವರ್ಗ, 2ಎ, 2ಬಿ, 3ಎ ಮತ್ತು 3ಬಿ: ಪತ್ರಿಕೆ-1 ಅಥವಾ ಪತ್ರಿಕೆ-2 ಮಾತ್ರ-700 ರೂಪಾಯಿ, ಪತ್ರಿಕೆ-1 ಹಾಗೂ ಪತ್ರಿಕೆ-2- 1000 ರೂಪಾಯಿ ಪಾವತಿ ಮಾಡಬೇಕು.
ಪ.ಜಾತಿ/ಪ.ವರ್ಗ/ಪ್ರವರ್ಗ-1: ಪತ್ರಿಕೆ-1 ಅಥವಾ ಪತ್ರಿಕೆ-2 ಮಾತ್ರ- 350 ರೂಪಾಯಿ, ಪತ್ರಿಕೆ-1 ಹಾಗೂ ಪತ್ರಿಕೆ 2- 500 ರೂಪಾಯಿ, (ವಿಶೇಷ ಚೇತನ/ದಿವ್ಯಾಂಗ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ಇರುತ್ತದೆ.)
ಅಭ್ಯರ್ಥಿಗಳು KARTET-2025 ಪರೀಕ್ಷೆಯ ಪ್ರವೇಶ ಪತ್ರವನ್ನು ಡಿಸೆಂಬರ್ 1 ರಿಂದ ಡಿಸೆಂಬರ್ 7ರ ವರೆಗೆ ಇಲಾಖಾ ವೆಬ್‌ಸೈಟ್‌ನಲ್ಲಿ ಲಾಗ್ ಇನ್ ಆಗಿ ಪಡೆದುಕೊಳ್ಳಬಹುದು. ಅಭ್ಯರ್ಥಿಗಳ ಮಾಹಿತಿ, ಭಾವಚಿತ್ರ ಹಾಗೂ ಅವರ ಸಹಿಗೆ ಸಂಬಂಧಿಸಿದಂತೆ ವ್ಯತ್ಯಾಸ ಇದ್ದರೆ, ಸರಿಪಡಿಸಿಕೊಳ್ಳಲು ಅವಕಾಶ ಇರುವುದಿಲ್ಲ.
ರಾಷ್ಟ್ರೀಯ ಶಿಕ್ಷಣ ಶಿಕ್ಷಕರ ಪರಿಷತ್ 1ರಿಂದ 8ನೇ ತರಗತಿಗಳ ಶಿಕ್ಷಕರಾಗಿ ನೇಮಕಾತಿಗೆ ಅರ್ಹರಾಗಲು ಕನಿಷ್ಠ ಅರ್ಹತೆಗಳನ್ನು ನಿಗದಿಪಡಿಸಿದೆ. ಅದರಂತೆಯೇ ಯಾವುದೇ ಶಾಲೆಗಳಲ್ಲಿ ಶಿಕ್ಷಕರಾಗಿ ನೇಮಕಾತಿಗೆ ಅರ್ಹತೆ ಪಡೆಯಲು NCTEಯಿಂದ ರೂಪಿಸಲಾದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಸರ್ಕಾರದ ಮೂಲಕ ನಡೆಸಲಾಗುವ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕಾಗುತ್ತದೆ.












Click it and Unblock the Notifications