Karnataka Government Jobs: ಸಿವಿಲ್ ಸೇವೆಗಳ ನೇಮಕಾತಿ ಹೊಸ ಅಧಿಸೂಚನೆಗೆ ತಡೆ

ಬೆಂಗಳೂರು, ಮಾರ್ಚ್‌ 30: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೂರಾರು ಹುದ್ದೆಗಳು ಖಾಲಿ ಇದೆ. ರಾಜ್ಯದಲ್ಲಿ 2.50 ಲಕ್ಷಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ ನಡೆಯಬೇಕಿದೆ. ಆದರೆ ಕರ್ನಾಟಕದಲ್ಲಿ ಸರ್ಕಾರಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ನಿರಾಸೆ ಮೂಡಿಸುವ ಸುದ್ದಿಯೊಂದಿದೆ. ಕರ್ನಾಟಕ ಸರ್ಕಾರ ರಾಜ್ಯ ಸಿವಿಲ್ ಸೇವೆಗಳಲ್ಲಿನ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯುವ ಕುರಿತು ಸುತ್ತೋಲೆಯೊಂದನ್ನು ಹೊರಡಿಸಿದೆ.

ಈ ಕುರಿತು ಉಮಾ ವರದಯ್ಯ ಸರ್ಕಾರದ ಉಪ ಕಾರ್ಯದರ್ಶಿ-1 ಸಿಆಸು ಇಲಾಖೆ (ಸೇವಾ ನಿಯಮಗಳು) ಸುತ್ತೋಲೆಯನ್ನು ಹೊರಡಿಸಿದ್ದಾರೆ. ಈ ಸುತ್ತೋಲೆಯು ರಾಜ್ಯ ಸಿವಿಲ್ ಸೇವೆಗಳಲ್ಲಿನ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ. ಸುತ್ತೋಲೆ ದಿನಾಂಕ 25.11.2024 ಉಲ್ಲೇಖ ಮಾಡಲಾಗಿದೆ.

Karnataka Government Circular Stay For New Recruitment Notification

ಸುತ್ತೋಲೆಯ ವಿವರಗಳು: ದಿನಾಂಕ 25.11.2024 ಸುತ್ತೋಲೆಯಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಸೂಚಿಸಲಾಗಿದೆ.

ಆದಾಗ್ಯೂ, ಕೆಲವು ನೇಮಕಾತಿ ಪ್ರಾಧಿಕಾರಗಳು ಈ ಸೂಚನೆಗಳನ್ನು ಉಲ್ಲಂಘಿಸಿ ನೇರ ನೇಮಕಾತಿ ಮಾಡಲು ಹೊಸ ಅಧಿಸೂಚನೆಗಳನ್ನು ಹೊರಡಿಸಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ದಿನಾಂಕ 25.11.2024ರ ನಂತರ ನೇರ ನೇಮಕಾತಿಗಾಗಿ ಯಾವುದೇ ಹೊಸ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾಯ ನೇಮಕಾತಿ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಿದೆ ಎಂದು ಸುತ್ತೋಲೆ ಹೇಳಿದೆ.

Karnataka Government Circular Stay For New Recruitment Notification

ಮುಂದುವರೆದು ದಿನಾಂಕ 25.11.2024ರ ಸುತ್ತೋಲೆಯನ್ನು ಉಲ್ಲಂಘಿಸುವ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಆಯಾಯ ಆಡಳಿತ ಇಲಾಖೆಯ ಕಾರ್ಯದರ್ಶಿಗಳಿಗೆ ಈ ಮೂಲಕ ಸೂಚಿಸಲಾಗಿದೆ. ಈ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಮಧ್ಯಂತರ ವರದಿ ಸಲ್ಲಿಕೆ: ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಘೋಷಣೆ ಮಾಡಿತ್ತು. ಈ ಕುರಿತು ವರದಿ ಸಲ್ಲಿಕೆ ಮಾಡಲು ನಿವೃತ್ತ ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಏಕಸದಸ್ಯ ಆಯೋಗ ಮಾರ್ಚ್‌ 27ರಂದು ಮಧ್ಯಂತರ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಲ್ಲಿಕೆ ಮಾಡಿದೆ. ಸಚಿವ ಸಂಪುಟ ಸಭೆಯು ಈ ವರದಿಯನ್ನು ಅಂಗೀಕರಿಸಿದೆ.

ಆಯೋಗ ಮಧ್ಯಂತರ ವರದಿಯಲ್ಲಿ 4 ಪ್ರಮುಖ ಶಿಫಾರಸ್ಸುಗಳನ್ನು ಮಾಡಿದೆ.

* ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕು.

* ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಸಾಧನಗಳನ್ನು ಬಳಸಿ 30 ರಿಂದ 40 ದಿವಸಗಳೊಳಗೆ ಹೊಸ ಸಮೀಕ್ಷೆಯನ್ನು ನಡೆಸಬಹುದೆಂದು ತಜ್ಞರು ಅಭಿಪ್ರಾಯ ಪಡುತ್ತಾರೆ.

* ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿಯನ್ನು ಸಿದ್ಧಪಡಿಸಬೇಕು. ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು, ಸಮೀಕ್ಷೆಗೆ ಅಗತ್ಯವಿರುವ ತರಬೇತಿ, ಸಂಪನ್ಮೂಲ ಕ್ರೋಢೀಕರಣಗಳ ಉಸ್ತುವಾರಿಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದು ಸೂಕ್ತ.

* ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ ಆಧಾರದ ಮೇಲೆ ಈ ವರದಿಯಲ್ಲಿ ತಿಳಿಯಪಡಿಸಿರುವ ಮಾನದಂಡಗಳಂತೆ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವರ್ಗೀಕರಣಗೊಳಿಸಿ ಲಭ್ಯವಿರುವ ಮೀಸಲಾತಿ ಪ್ರಮಾಣವನ್ನು ಆದ್ಯತೆ ಮೇಲೆ ಹಂಚಿಕೆ ಮಾಡಬೇಕು.

ಆಯೋಗದವರ ಮಧ್ಯಂತರ ವರದಿಯನ್ನು ಸಚಿವ ಸಂಪುಟವು ಅಂಗೀಕರಿಸಿದೆ. ಒಳಮೀಸಲಾತಿ ವರ್ಗೀಕರಣವನ್ನು ಶೀಘ್ರಗತಿಯಲ್ಲಿ ಕೈಗೊಳ್ಳುವ ಸಂಬಂಧ, ಹೊಸ ಸಮೀಕ್ಷೆ ನಡೆಸುವ ಕಾರ್ಯವನ್ನು ನಾಗಮೋಹನ್ ದಾಸ್ ಸಮಿತಿಗೆ ವಹಿಸಲು ಅನುಮೋದನೆ ನೀಡಲಾಗಿದೆ. ಸಮೀಕ್ಷಾ ಕಾರ್ಯವನ್ನು 60 ದಿನದೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ಅನುಕೂಲವಾಗುವಂತೆ ಸಮಿತಿಯ ಅವಧಿಯನ್ನು ಎರಡು ತಿಂಗಳವೆರೆಗೆ ವಿಸ್ತರಿಸಲಾಗಿದೆ.

ಆಯೋಗ ತನ್ನ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿ ಸರ್ಕಾರ ಒಳ ಮೀಸಲಾತಿ ಕುರಿತು ತೀರ್ಮಾನ ಕೈಗೊಳ್ಳುವ ತನಕ ರಾಜ್ಯ ಸಿವಿಲ್ ಸೇವೆಗಳಲ್ಲಿನ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯಲಾಗಿದೆ. ಆದ್ದರಿಂದ ಸದ್ಯಕ್ಕೆ ಕರ್ನಾಟಕಲ್ಲಿ ಹೊಸ ನೇಮಕಾತಿಗಳು ನಡೆಯುವುದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+