ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್
ಬೆಂಗಳೂರು, ಸೆಪ್ಟೆಂಬರ್, 7: ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಅನುಕೂಲ ಆಗುವಂತೆ ಮಹತ್ವದ ಘೋಷಣೆ ಮಾಡುತ್ತಿರುತ್ತದೆ. ಹಾಗೆಯೇ ಇದೀಗ ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಹಾಗಾದ್ರೆ, ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈ ಹಿಂದೆ, ತಡೆಹಿಡಿದಿದ್ದ ನೇಮಕಾತಿ ಪ್ರಕ್ರಿಯೆಗಳಿಗೆ ಮರುಚಾಲನೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಜೊತೆಗೆ ನೇರ ನೇಮಕಾತಿ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಯ ಕ್ರಮವಾಗಿ ಎರಡು ವರ್ಷಗಳಷ್ಟು ಸಡಿಲಿಕೆ ಮಾಡಿ ಮಹತ್ವದ ಆದೇಶವನ್ನು ಹೊರಡಿಸಿದೆ. ಈ ಮೂಲಕ ಸರ್ಕಾರಿ ನೌಕಾರಿ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ಕೊಟ್ಟಿದೆ.

ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅವರ ಆಯೋಗದಿಂದ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡಿ ಪರಿಷ್ಕರಿಸುವ ಹಿನ್ನೆಲೆ ಈ ಹಿಂದೆ 2024ರ ಅಕ್ಟೋಬರ್ 28ರಂದು ಹೊರಡಿಸಲಾಗಿದ್ದ ಆದೇಶದ ಪ್ರಕಾರ, ಎಲ್ಲಾ ನೇಮಕಾತಿ ಪ್ರಕ್ರಿಯೆಗಳನ್ನು ತಡೆಹಿಡಿಯಲಾಗಿತ್ತು. ಇದೀಗ, ಪರಿಷ್ಕೃತ ಮೀಸಲಾತಿ ನೀತಿಯನ್ನು ಅಳವಡಿಕೆ ಮೂಲಕ ನಿಲ್ಲಿಸಿದ್ದ ನೇಮಕಾತಿ ಪ್ರಕ್ರಿಯೆಗಳಿಗೆ ಶೀಘ್ರದಲ್ಲೇ ಮರುಚಾಲನೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ.
ಸೆಪ್ಟೆಂಬರ್ 6ರಂದು ಹೊರಡಿಸಿದ ಸರ್ಕಾರದ ಆದೇಶದ ಪ್ರಕಾರ, ರಾಜ್ಯ ಸಿವಿಲ್ ಸೇವೆಗಳ ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 2 ವರ್ಷಗಳ ಸಡಿಲಿಕೆ ನೀಡಲಾಗಿದೆ. ಈ ಆದೇಶವು 2025ರ ಸೆಪ್ಟೆಂಬರ್ 6ರಿಂದ 2027ರ ಡಿಸೆಂಬರ್ 31ರ ಒಳಗೆ ಹೊರಡಿಸಲಾಗುವ ನೇಮಕಾತಿ ಅಧಿಸೂಚನೆಗಳಿಗೆ ಮಾತ್ರ ಅನ್ವಯ ಆಗಲಿದೆ.
ಒಂದು ಬಾರಿಯ ವಿಶೇಷ ಕ್ರಮ ಆಗಿದ್ದು, ಕೋವಿಡ್ ಹಾಗೂ ಇತರ ಕಾರಣಗಳಿಂದ ವಯೋಮಿತಿ ಮೀರುತ್ತಿದ್ದ ಅನೇಕ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶವನ್ನು ಕಲ್ಪಿಲಾಗಿದೆ. ಅದೇ ರೀತಿಯಲ್ಲಿ ಪರಿಷ್ಕೃತ ಮೀಸಲಾತಿ ನೀತಿ ಪ್ರಕಾರ, ಪರಿಶಿಷ್ಟ ಜಾತಿಯ 101 ಜಾತಿಗಳನ್ನು ಒಳಗೊಂಡಿದ್ದು, ಪ್ರವರ್ಗ ಎ ಗೆ ಶೇಕಡ 6ರಷ್ಟು ಮೀಸಲಾತಿ, ಪ್ರವರ್ಗ ಬಿ ಗೆ ಶೇಕಡ 6ರಷ್ಟು ಮೀಸಲಾತಿ ಹಾಗೂ ಪ್ರವರ್ಗ ಸಿ ಗೆ ಶೇಕಡ 5ರಷ್ಟು ಮೀಸಲಾತಿ ನೀಡಲಾಗಿದೆ.'
ಕೋವಿಡ್ ಸಮಯದಲ್ಲಿ ಸರ್ಕಾರಿ ನೌಕರಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಎದುರಾಗಿತ್ತು. ಆ ವೇಳೆ ನೇಮಕಾತಿಯನ್ನು ತಡೆಹಿಡಿಯಲಾಗಿತ್ತು. ಇದೀಗ ನೇಮಕಾತಿ ಪ್ರಕ್ರಿಯೆಗಳಿಗೆ ಮರು ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ, ವಯೋಮಿತಿ ಸಡಿಲಿಕೆ ಮಾಡಲು ನಿರ್ಧರಿಸಲಾಗಿದ್ದು, ಇದರಿಂದ ನೌಕರಿ ನಿರೀಕ್ಷೆಯಲ್ಲಿ ಇದ್ದವರಿಗೆ ಬಾಯಿಗೆ ಸಕ್ಕರೆ ಹಾಕಿದಂತಾಗಿದೆ.












Click it and Unblock the Notifications