ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

1203 ಸರ್ಕಾರಿ ಪಿಯು ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಿನಾಂಕ 8-5-2015 ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೆ, ಮೀಸಲಾತಿಗೊಂದಲಗಳಿಂದ 2 ಬಾರಿ ನೇಮಕಾತಿಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಸರ್ಕಾರ ನೇಮಕಾತಿಗೆ ಒಪ್ಪಿಗೆ ಸೂಚಿಸಿದೆ.

|
Google Oneindia Kannada News

ಬೆಂಗಳೂರು, ಮಾರ್ಚ್. 08 : ಮಿಸಲಾತಿ ಗೊಂದಲಗಳಿಂದ ಸ್ಥಗಿತಗೊಂಡಿದ್ದ 1203 ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕ ಪ್ರಕ್ರಿಯೆ ಪುನಃ ಸರ್ಕಾರ ಒಪ್ಪಿಗೆ ನೀಡಿದೆ.

ಈಗಾಗಲೇ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ನಿಗದಿತ ಶುಲ್ಕವನ್ನು ಪಾವತಿಸಿದ ಅಭ್ಯರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. [ಅಬಕಾರಿ ಇಲಾಖೆಯಲ್ಲಿ 1180 ಹುದ್ದೆ, ಅರ್ಜಿ ಸಲ್ಲಿಕೆಗೆ ಮಾರ್ಚ್ 30 ಕೊನೆ ದಿನ]

ಈ ಹಿನ್ನಲೆಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ ಲೈನ್‌ ಮೂಲಕ ದಿನಾಂಕ 6-4-2017ರೊಳಗೆ ಅರ್ಜಿ ಸಲ್ಲಿಸಬೇಕು ಹಾಗೂ ನಿಗದಿತ ಶುಲ್ಕವನ್ನು 10-4-2017ರೊಳಗೆ ಪಾವತಿಸಬೇಕು.

Karnataka government has given its permission recruitment of post of 1203 lecturers for 20 subjects

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 20 ವಿಷಯಗಳಿಗೆ ಸಂಬಂಧಿಸಿದಂತೆ ಒಟ್ಟು 1,203 ಹುದ್ದೆಗಳ ನೇಮಕಾತಿ ಮಾಡಲಿದೆ. ಈ ಸಂಬಂಧ ಕೆಇಎ ಅಧಿಕೃತ ವೆಬ್‌ ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ : ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಟ 21 ವರ್ಷ ತುಂಬಿರ ತಕ್ಕದ್ದು, ಪ.ಜಾ/ಪ.ಪಂ/ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 45 ವರ್ಷ, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 43 ವರ್ಷ, ಇತರೆ ಅಭ್ಯರ್ಥಿಗಳಿಗೆ 40 ವರ್ಷದ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಇತರ ವರ್ಗದ ಅಭ್ಯರ್ಥಿಗಳಿಗೆ 2,500, ಪ.ಜಾ/ಪ.ಪಂಗಡದ ವಿದ್ಯಾರ್ಥಿಗಳಿಗೆ 2000 ರೂ., ವಿಕಲಚೇತನರಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಶುಲ್ಕವನ್ನು ಕಂಪ್ಯೂಟರೈಸ್ಡ್‌ ಅಂಚೆ ಕಚೇರಿಗಳಲ್ಲಿ ಮಾತ್ರ ಪಾವತಿ ಮಾಡಬೇಕು.

ವಿದ್ಯಾರ್ಹತೆ : ಅಭ್ಯರ್ಥಿಯು ಸಂಬಂಧಿಸಿದ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ದ್ವಿತೀಯ ದರ್ಜೆಯಲ್ಲಿ ಶೇ 55 ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣನಾಗಿರಬೇಕು. ಅಭ್ಯರ್ಥಿಯು ಬಿ.ಇಡಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಪರೀಕ್ಷೆಯ ವೇಳಾಪಟ್ಟಿಯನ್ನು http://kea.kar.nic.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.

ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಇದರಲ್ಲಿ ವಿನಾಯ್ತಿ ನೀಡದೆ ಮೀಸಲಾತಿ ವಂಚಿಸಲಾಗಿದೆ ಎಂದು ಹೋರಾಟ ನಡೆದಿದ್ದರಿಂದ ಎರಡು ಬಾರಿ ನೇಮಕಾತಿ ಮುಂದೂಡಲಾಗಿತ್ತು. [ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ]

English summary
Further,Director,Department of Pre-University Education in their letter dated 16-12-2016 and 25-2-2017 has conveyed that the government has given its permission and requested KEA to proceed with the recruitment of post of 1203 lecturers for 20 subjects.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X