Government Jobs: ಕರ್ನಾಟಕದ ಈ ಜಿಲ್ಲೆಯಲ್ಲಿ ಉದ್ಯೋಗ ಖಾಲಿ ಇದೆ
ಬೆಂಗಳೂರು, ಮೇ 09: ಕರ್ನಾಟಕದಲ್ಲಿ ರಾಜ್ಯ ಸರ್ಕಾರಿ ಉದ್ಯೋಗ ಅವಕಾಶಗಳು ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(KHPT) ತನ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ.
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(KHPT)ಯಲ್ಲಿ ಒಂದು 'ಅಡೋಲ್ಸೆಂಟ್ ಲರ್ನಿಂಗ್ ಆಫೀಸರ್' ಹುದ್ದೆ ಖಾಲಿ ಇದೆ. ಸರ್ಕಾರಿ ಉದ್ಯೋಗ ಬಯಸುವ ಆಸಕ್ತರು ನಾಳೆಯೊಳಗೆ ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಿದೆ. ಕೊನೆ ದಿನಾಂಕ ಮೇ 10 ಎಂದು ನಿಗದಿ ಮಾಡಲಾಗಿದೆ.

ಉದ್ಯೋಗ ನೇಮಕಾತಿ ಪ್ರಕ್ರಿಯೆಗೆ ಒಳಪಡುವ ಮೊದಲು ವಿದ್ಯಾರ್ಹತೆ, ಮಾಸಿಕ ವೇತನ, ಅರ್ಜಿ ಸಲ್ಲಿಕೆ ಹೇಗೆ, ವಯೋಮಿತಿ, ಶುಲ್ಕ ಇನ್ನಿತರ ಪೂರ್ಣ ಮಾಹಿತಿ ಇಲ್ಲಿ ತಿಳಿಯಿರಿ. ಯಾವುದಕ್ಕೂ ಒಮ್ಮೆ ಅಧಿಸೂಚನೆ ಓದಿಕೊಂಡರಂತೂ ಇನ್ನು ಉತ್ತಮ.
ನೇಮಕಾತಿ ಪ್ರಕ್ರಿಯೆಯ ವಿವರಗಳು
ಸಂಸ್ಥೆ ಹೆಸರು: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(KHPT)
ಹುದ್ದೆ ಹೆಸರು: ಅಡೋಲ್ಸೆಂಟ್ ಲರ್ನಿಂಗ್ ಆಫೀಸರ್
ಎಷ್ಟು ಹುದ್ದೆ: ಒಂದು
ಮಾಸಿಕ ವೇತನ: ನಿಯಮಾನುಸಾರ
ಅರ್ಜಿ ಸಲ್ಲಿಕೆ ದಿನಾಂಕ: ನಾಳೆ ಮೇ 10
ಪೋಸ್ಟಿಂಗ್: ಕೊಪ್ಪಳ ಜಿಲ್ಲೆ
ಶೈಕ್ಷಣಿಕ ಅರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇಲ್ಲವೇ ಮಂಡಳಿಯಲ್ಲಿ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಉತ್ತೀರ್ಣಗೊಳಿಸರಬೇಕು ಎಂದು ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಅಧಿಸೂಚನೆ ಮೂಲಕ ತಿಳಿಸಿದೆ.

ವಯಸ್ಸಿನ ಮಿತಿ
ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಆಯಾ ಅಭ್ಯರ್ಥಿಗಳಿಗೆ ಮೀಸಲಾತಿಗೆ ಅನುಗುಣವಾಗಿ ಒಂದಷ್ಟು ವರ್ಷಗಳು ವಯೋಮಿತಿಯಲ್ಲಿ ಸಡಿಲಿಕೆ ಸಿಗಲಿದೆ ಎಂದು ಸಂಸ್ಥೆ ಹೇಳಿದೆ.
ಅರ್ಜಿ ಶುಲ್ಕ-ವೇತನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ನಿಗದಿ ಪಡಿಸಿಲ್ಲ. ಉಚಿತವಾಗಿ ನೀವು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ವೇತನ ಸದ್ಯಕ್ಕೆ ಅಧಿಸೂಚನೆಯಲ್ಲಿ ಉಲ್ಲೇಖಿಸಿಲ್ಲ, ಮೂಲಗಳ ಪ್ರಕಾರ ನಿಯಮಾನುಸಾರ ಸಿಗಲಿದೆ.
ಆಯ್ಕೆ ಪ್ರಕ್ರಿಯೆ ಹೇಗೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ನೇರವಾಗಿ ಸಂದರ್ಶನ ಮೂಲಕವೇ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆ ಆದವರಿಗೆ ರಾಜ್ಯದ ಕೊಪ್ಪಳದಲ್ಲಿ ಪೋಸ್ಟಿಂಗ್ ನೀಡಲಾಗುವುದು.
ಆನ್‌ಲೈನ್ ಅರ್ಜಿ ಸಲ್ಲಿಕೆ ವಿಧಾನ
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಸೂಕ್ತ ದಾಖಲಾತಿಗಳ ಜೊತೆಗೆ ಇಲ್ಲಿರುವ https://www.khpt.org/work-with-us/ ಲಿಂಕ್ ಅನ್ನು ಬಳಸಿ ಅರ್ಜಿ ಸಲ್ಲಿಸಬೇಕು ಎಂದು ಸಂಸ್ಥೆ ಅಧಿಸೂಚನೆಯಲ್ಲಿ ತಿಳಿಸಿದೆ.












Click it and Unblock the Notifications