ಸರ್ಕಾರಿ ಪ್ರಾಥಮಿಕ ಶಾಲೆ ಅತಿಥಿ ಶಿಕ್ಷಕರ ನೇಮಕಾತಿ: 2ನೇ ಹಂತದ ಹಂಚಿಕೆ ವಿವರ

ಬೆಂಗಳೂರು, ಅಕ್ಟೋಬರ್ 05: ಕರ್ನಾಟಕದ ಶಾಲಾ ಶಿಕ್ಷಣ ಇಲಾಖೆ ಆಯುಕ್ತ ಕಛೇರಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅತಿಥಿ ಶಿಕ್ಷಕರ ಹಂಚಿಕೆ ಮಾಡಿ ಆದೇಶಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರುಗಳನ್ನು ನೇಮಕ ಮಾಡಿಕೊಳ್ಳುವ ಕುರಿತು 2ನೇ ಹಂತದ ಹೆಚ್ಚುವರಿ ಅತಿಥಿ ಶಿಕ್ಷಕರ ಹಂಚಿಕೆ ಬಗ್ಗೆ ಆದೇಶಿಸಲಾಗಿದೆ. ಯಾವ ತಾಲೂಕಿಗೆ ಎಷ್ಟು ಹುದ್ದೆಗಳು? ಎಂದು ಸಹ ವಿವರಗಳನ್ನು ನೀಡಲಾಗಿದೆ.

ಈ ಕುರಿತು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಜ್ಞಾಪನಾ ಪತ್ರವನ್ನು ಹೊರಡಿಸಿದ್ದಾರೆ. ಈ ಪತ್ರ 2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರುಗಳನ್ನು ನೇಮಕ ಮಾಡಿಕೊಳ್ಳುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ.

Karnataka Government Primary Schools Hiring Guest Teachers

ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಒಟ್ಟು ಒಟ್ಟು ಹಂಚಿಕೆಯಾದ ಅತಿಥಿ ಶಿಕ್ಷಕರ ಸಂಖ್ಯೆ 34,192. ಸದ್ಯ 1,766 ಅತಿಥಿ ಶಿಕ್ಷಕರ ನೇಮಕಕ್ಕೆ ತಾಲೂಕುವಾರು ಹಂಚಿಕೆಯನ್ನು ಮಾಡಲಾಗಿದೆ. ಜಿಲ್ಲಾ ಉಪನಿರ್ದೇಶಕರುಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳಂತೆ ಈ ಹಂಚಿಕೆಯನ್ನು ಮಾಡಲಾಗಿದೆ ಎಂದು ಹೇಳಿದೆ.

ವಿವರಗಳು: ಈ ವಿಷಯಕ್ಕೆ ಸಂಬಂಧಿಸಿದಂತೆ, 2024-25ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೂ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ಒಟ್ಟು 35,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಸರ್ಕಾರದ ದಿನಾಂಕ 01.06.2023ರ ಆದೇಶದಲ್ಲಿ ಅನುಮತಿ ನೀಡಿದೆ ಎಂದು ತಿಳಿಸಿದೆ.

ಅದರಂತೆ, ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲಾ ಶಿಕ್ಷಕರು (1 ರಿಂದ 5ನೇ ತರಗತಿ) ಹಾಗೂ ಪದವೀಧರ ಪ್ರಾಥಮಿಕ ಶಿಕ್ಷಕರು (6 ರಿಂದ 8 ನೇ ತರಗತಿ) ವೃಂದದ ಹುದ್ಯಗಳಿಗೆ ಎದುರಾಗಿ ಅತಿಥಿ ಶಿಕ್ಷಕರನ್ನು ಷರತ್ತಿಗೊಳಪಟ್ಟು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಿ ಆದೇಶಿಸಲಾಗಿತ್ತು.

ವರ್ಗಾವಣೆ ನಂತರ ಕೆಲವೊಂದು ತಾಲ್ಲೂಕುಗಳಲ್ಲಿ ಹುದ್ದೆಗಳು ಭರ್ತಿಯಾಗಿದ್ದು ಹಾಗೂ ಕೆಲವೊಂದು ತಾಲ್ಲೂಕುಗಳಲ್ಲಿ ಹುದ್ದೆಗಳು ತೆರವಾಗಿದ್ದು, ಜಿಲ್ಲೆಗೆ ಮಂಜೂರಾದ/ ಹಂಚಿಕೆಯಾದ ಸಂಖ್ಯೆ ಮಿತಿಯೊಳಗೆ ಜಿಲ್ಲೆಯೊಳಗೆ ಮರು ಹೊಂದಾಣಿಕೆ ಮಾಡಿಕೊಳ್ಳಲು ಜಿಲ್ಲಾ ಉಪನಿರ್ದೇಶಕರಿಗೆ ಅನುಮತಿ ನೀಡಲಾಗಿತ್ತು ಎಂದು ವಿವರಿಸಿದೆ.

ಮರು ಹೊಂದಾಣಿಕೆ ನಂತರ ಕೆಲವೊಂದು ಜಿಲ್ಲೆಗಳಲ್ಲಿ ಅಗತ್ಯ/ ಅವಶ್ಯಕತೆ ಇಲ್ಲದ ಅತಿಥಿ ಶಿಕ್ಷಕರ ಹುದ್ದೆಗಳನ್ನು ಈ ಕಛೇರಿಗೆ ಅಧ್ಯಾರ್ಪಿಸಿರುತ್ತಾರೆ ಹಾಗೂ ಕೆಲವೊಂದು ಜಿಲ್ಲೆಗಳಲ್ಲಿ ವರ್ಗಾವಣೆ ಪ್ರಕ್ರಿಯೆ ನಂತರ ಹುದ್ದೆಗಳು ತೆರವಾಗಿದ್ದು, ಹೆಚ್ಚುವರಿ ಅತಿಥಿ ಹುದ್ದೆಗಳನ್ನು ಹಂಚಿಕೆ ಮಾಡಲು ಸ್ವೀಕೃತವಾಗಿರುವ ಕೋರಿಕೆ ಪರಿಗಣಿಸಿ ಅಧ್ಯಾರ್ಪಿಸಿರುವ ಹುದ್ದೆಗಳು ಹಾಗೂ ಈ ಕಛೇರಿಯಲ್ಲಿ ಉಳಿಕೆ ಇದ್ದ ಹುದ್ದೆಗಳು ಸೇರಿದಂತೆ 2ನೇ ಹಂತದಲ್ಲಿ ಷರತ್ತುಗಳಿಗೆ ಒಳಪಡಿಸಿ ಮರು ಹಂಚಿಕೆ ಮಾಡಿ ಹಂಚಿಕೆ ಮಾಡಿ ಆದೇಶಿಸಿದೆ.

ಈ ಕಚೇರಿಗೆ ಅಧ್ಯಾರ್ಪಿಸಿರುವ ಹುದಗಳಿಗೆ ಅತಿಥಿ ಶಿಕ್ಷಕರ ನೇಮಕಾತಿಯಾಗದಂತೆ ನೀವು ಎಚ್ಚರಿಕ ವಹಿಸಲು ಸಂಬಂಧಪಟ್ಟ ಜಿಲ್ಲಾ ಉಪನಿರ್ದೇಶಕರು ಹಾಗೂ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದೆ. ಸರ್ಕಾರದ ಆದೇಶ ದಿನಾಂಕ 23.09.2024ರ ಪ್ರಕಾರ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಪಾವತಿಸಲು ಬಿಡುಗಡೆ ಮಾಡಿರುವ ಅನುದಾನವನ್ನು ನಿಯಮಾನುಸಾರ ಬಳಕೆ ಮಾಡುವುದು ಕೊರತೆಯಾಗುವ ಅನುದಾನ ಹಾಗೂ ಪ್ರಸ್ತುತ 2ನೇ ಹಂತದಲ್ಲಿ ಹಂಚಿಕೆ ಮಾಡಿರುವ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಬೇಕಾಗುವ ಅನುದಾನದ ವಿವರಗಳನ್ನು ನಿಖರವಾಗಿ ಲೆಕ್ಕಚಾರ ಮಾಡಿದ ವಿವರಗಳನ್ನು ಕಛೇರಿಗೆ ಕಡ್ಡಾಯವಾಗಿ ಸಲ್ಲಿಸತಕ್ಕದ್ದು ಎಂದು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+