ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

10 ಸಾವಿರ ಹುದ್ದೆಗಳ ಭರ್ತಿಗೆ ಕರ್ನಾಟಕ ಸರ್ಕಾರದ ಸುತ್ತೋಲೆ

|
Google Oneindia Kannada News

ಬೆಂಗಳೂರು, ಜೂನ್ 10 : ಕರ್ನಾಟಕ ಸರ್ಕಾರ 10 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ನೇರ ನೇಮಕಾತಿ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ.

ವಿವಿಧ ಇಲಾಖೆಗಳಲ್ಲಿ ಸಾವಿರಾರು ಹುದ್ದೆಗಳು ಖಾಲಿ ಇವೆ. ಇದರಿಂದಾಗಿ ಆಡಳಿತಾತ್ಮಕ ಸಮಸ್ಯೆಗಳು ಎದುರಾಗುತ್ತಿವೆ. ಆದ್ದರಿಂದ, ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲು ಸರ್ಕಾರ ತೀರ್ಮಾನವನ್ನು ಕೈಗೊಂಡಿದೆ.

ಅರಣ್ಯ ಇಲಾಖೆಯಲ್ಲಿ 3085 ಹುದ್ದೆಗಳ ಭರ್ತಿಗೆ ಒಪ್ಪಿಗೆಅರಣ್ಯ ಇಲಾಖೆಯಲ್ಲಿ 3085 ಹುದ್ದೆಗಳ ಭರ್ತಿಗೆ ಒಪ್ಪಿಗೆ

ಸಂವಿಧಾನದ ಅನುಚ್ಛೇದ 371ಜೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸ್ಥಳೀಯ ವೃಂದ ರಚಿಸಿ, ಅಧಿಸೂಚನೆ ಹೊರಡಿಸಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 877 ಹುದ್ದೆಗಳ ಭರ್ತಿಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 877 ಹುದ್ದೆಗಳ ಭರ್ತಿ

ಈಗಾಗಲೇ ನೇಮಕಾತಿ ಪ್ರಕ್ರಿಯೆಯು ಜಾರಿಯಲ್ಲಿರುವ ಪ್ರಕರಣಗಳನ್ನು ಆದಷ್ಟು ಶೀಘ್ರವೇ ಪೂರ್ಣಗೊಳಿಸಬೇಕು. ಅನುಚ್ಚೇದ 371ಜೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸ್ಥಳೀಯ ವೃಂದ ರಚಿಸಿ, ಅಧಿಸೂಚಿಸಿ ಖಾಲಿ ಹುದ್ದೆಗಳನ್ನು ತುಂಬುವಲ್ಲಿ ಅನುಸರಿಸಬೇಕಾದ ನಿಯಮಗಳನ್ನು ಪಾಲಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕ ಪೊಲೀಸ್ ನೇಮಕಾತಿ : 23 ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಹಾಕಿಕರ್ನಾಟಕ ಪೊಲೀಸ್ ನೇಮಕಾತಿ : 23 ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಹಾಕಿ

ಸುತ್ತೋಲೆಯಲ್ಲಿ ಏನಿದೆ?

ಸುತ್ತೋಲೆಯಲ್ಲಿ ಏನಿದೆ?

ಆಡಳಿತ ಇಲಾಖೆಗಳ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಹಾಗೂ ಕ್ಷೇತ್ರ, ಇಲಾಖೆ, ನಿಗಮ, ಮಂಡಳಿ ಹಾಗೂ ಸ್ವಾಯತ್ತ ಸಂಸ್ಥೆಗಳ ಮುಖ್ಯಸ್ಥರು ಆದಷ್ಟು ಬೇಗ ಸ್ಥಳೀಯ ವೃಂದದ ನೇರ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಕರ್ನಾಟಕ ಸಾರ್ವಜನಿಕ ಉದ್ಯೋಗ ಆದೇಶದಂತೆ ಹಾಗೂ ಜಾರಿಯಲ್ಲಿರುವ ನೇರ ನೇಮಕಾತಿ ನಿಯಮಗಳ ಪ್ರಕಾರ ಭರ್ತಿ ಮಾಡಬೇಕು.

2008ರ ಆದೇಶ ಪಾಲಿಸಿ

2008ರ ಆದೇಶ ಪಾಲಿಸಿ

ಗ್ರೂಪ್ ಡಿ ಹಾಗೂ ವಾಹನ ಚಾಲಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ನಿಟ್ಟಿನಲ್ಲಿ 2008ರ ಆದೇಶದಲ್ಲಿ ನೀಡಲಾದ ಸೂಚನೆಗಳನ್ನು ಪಾಲಿಸುವಂತೆ ಮುಖ್ಯ ಕಾರ್ಯದರ್ಶಿಗಳು ಹೊರಡಿಸಿರುವ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಯಾವ-ಯಾವ ಇಲಾಖೆಗಳು?

ಯಾವ-ಯಾವ ಇಲಾಖೆಗಳು?

ಕೃಷಿ ಇಲಾಖೆ 419, ಪಶುಸಂಗೋಪನೆ ಮತ್ತು ಮೀನುಗಾರಿಕೆ 291, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ 386, ವಾಣಿಜ್ಯ ಮತ್ತು ಕೈಗಾರಿಕೆ 162, ಸಹಕಾರ ಇಲಾಖೆ 164, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ 12, ಇಂಧನ ಇಲಾಖೆ 784, ಆರ್ಥಿಕ ಇಲಾಖೆ 159, ಆಹಾರ ಮತ್ತು ನಾಗರಿಕ ಸರಬರಾಜು 36 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಒಟ್ಟು 10 ಸಾವಿರ ಹುದ್ದೆಗಳು

ಒಟ್ಟು 10 ಸಾವಿರ ಹುದ್ದೆಗಳು

ಅರಣ್ಯ ಇಲಾಖೆ 38, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 47, ಉನ್ನತ ಶಿಕ್ಷಣ ಇಲಾಖೆ 1345, ಒಳಾಡಳಿತ ಇಲಾಖೆ 187, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ 6, ವಸತಿ 5, ಕನ್ನಡ ಮತ್ತು ಸಂಸ್ಕೃತಿ ಇಲಾಖೆ 61, ಕಾನೂನು ಇಲಾಖೆ 4, ವೈದ್ಯಕೀಯ ಶಿಕ್ಷಣ ಇಲಾಖೆ 823, ಅಲ್ಪಸಂಖ್ಯಾತರ ಕಲ್ಯಾಣ, ಹಜ್ 361, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ 29, ಲೋಕೋಪಯೋಗಿ ಇಲಾಖೆ 29 ಹುದ್ದೆಗಳು.

ಎಷ್ಟು ಹುದ್ದೆಗಳ ಭರ್ತಿ?

ಎಷ್ಟು ಹುದ್ದೆಗಳ ಭರ್ತಿ?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ 41, ಕಂದಾಯ ಇಲಾಖೆ 12, ಕೌಶಲ್ಯಾಭಿವೃದ್ಧಿ 143, ಸಮಾಜ ಕಲ್ಯಾಣ 326, ಪ್ರವಾಸೋದ್ಯಮ 29, ಸಾರಿಗೆ ಇಲಾಖೆ 29, ನಗರಾಭಿವೃದ್ಧಿ ಇಲಾಖೆ 3467, ಜಲಸಂಪನ್ಮೂಲ ಇಲಾಖೆ 583, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 79.

English summary
Karnataka government will fill 10,000 post in various departments. Chief Secretary issued notification for the recruitment. Department will announced notification soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X