ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಸಿಹಿ ಸುದ್ದಿ

|
Google Oneindia Kannada News

ಬೆಂಗಳೂರು, ಮಾರ್ಚ್ 31; ಕರ್ನಾಟಕ ಸರ್ಕಾರ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿಯನ್ನು ನೀಡಿದೆ. 2021-22ನೇ ಸಾಲಿನಲ್ಲಿ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆ ಸಹಮತಿ ಪಡೆಯಲು ಇಲಾಖೆಗಳಿಗೆ ತಿಳಿಸಲಾಗಿದೆ.

ಕೋವಿಡ್ ಪರಿಸ್ಥಿತಿಯ ಕಾರಣ ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಗೆ ತರುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ 6/7/2020ರಂದು ಆದೇಶ ವೊಂದನ್ನು ಹೊರಡಿಸಿತ್ತು.

2 ಸಾವಿರ ವೈದ್ಯರು, 700ಕ್ಕೂ ಹೆಚ್ಚು ನರ್ಸಿಂಗ್ ಸಿಬ್ಬಂದಿಗಳ ನೇರ ನೇಮಕಾತಿ: ಸಚಿವ ಸುಧಾಕರ್2 ಸಾವಿರ ವೈದ್ಯರು, 700ಕ್ಕೂ ಹೆಚ್ಚು ನರ್ಸಿಂಗ್ ಸಿಬ್ಬಂದಿಗಳ ನೇರ ನೇಮಕಾತಿ: ಸಚಿವ ಸುಧಾಕರ್

2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ಎಲ್ಲಾ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವುದನ್ನು ತಡೆಹಿಡಿಯಲಾಗಿತ್ತು. ಇದರಿಂದಾಗಿ ವಿವಿಧ ಇಲಾಖೆಗಳ ನೇಮಕಾತಿ ಸ್ಥಗಿತವಾಗಿತ್ತು.

ಮೈಸೂರು; ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ ಮೈಸೂರು; ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Karnataka Government To Fill Various Post After April 1

ಆಡಳಿತ ಇಲಾಖೆಗಳು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂಬಂಧ ದಿನಾಂಕ 6/7/2020ರ ಸುತ್ತೋಲೆಯಂತೆ ವಿನಾಯಿತಿಯನ್ನು ಕೋರಿ ಪ್ರಸ್ತಾವನೆಗಳನ್ನು ಸಲ್ಲಿಸಿದ್ದವು.

ವಿವಿಧ ಹುದ್ದೆಗೆ ಅರ್ಜಿ ಕರೆದ ಕೊಡಗು ಜಿಲ್ಲಾ ಪಂಚಾಯತಿ ವಿವಿಧ ಹುದ್ದೆಗೆ ಅರ್ಜಿ ಕರೆದ ಕೊಡಗು ಜಿಲ್ಲಾ ಪಂಚಾಯತಿ

ಅಂತಹ ಪ್ರಸ್ತಾವನೆಗಳ ಪೈಕಿ ಕೆಲವು ಪ್ರಸ್ತಾವನೆಗಳಿಗೆ ಮುಂದಿನ ಆರ್ಥಿಕ ವರ್ಷ ಅಂದರೆ 2021-22ನೇ ಸಾಲಿನಲ್ಲಿ ದಿನಾಂಕ 1/4/2021ರ ನಂತರ ನೇಮಕಾತಿ ಆದೇಶ ನೀಡಲು ಸಹಮತಿ ನೀಡಲಾಗಿದೆ ಎಂದು ತಿಳಿಸಲಾಗಿತ್ತು.

ಈ ರೀತಿ ತಿಳಿಸಲಾದ ಪ್ರಸ್ತಾವನೆಗಳನ್ನು ದಿನಾಂಕ 1/4/2021ರ ನಂತರ ಆರ್ಥಿಕ ಇಲಾಖೆಯ ಪುನರ್ ಪರಿಶೀಲನೆಗೆ ಸಲ್ಲಿಸುವಂತೆ ಆಡಳಿತ ಇಲಾಖೆಗಳಿಗೆ ತಿಳಿಸಲಾಗಿದೆ.

Recommended Video

ಕೊರೊನಾ ಸಂಕಷ್ಟಕ್ಕೆ ಬೇಸತ್ತು ಕ್ಯಾಬ್‌ ಚಾಲಕ ಆತ್ಮಹತ್ಯೆ ಯತ್ನ! ಚಾಲಕನ ಸ್ಥಿತಿ ಗಂಭೀರ | Oneindia Kannada

ಅಂದರೆ 2021-22ನೇ ಸಾಲಿನಲ್ಲಿ ಆರ್ಥಿಕ ಇಲಾಖೆಯ ಸಹಮತಿ ಪಡೆದೇ ನೇಮಕಾತಿ ಆದೇಶ ನೀಡಲು ಆಡಳಿತ ಇಲಾಖೆಗಳಿಗೆ ತಿಳಿಸಲಾಗಿದೆ ಎಂದು ಆದೇಶ ಹೊರಡಿಸಲಾಗಿದೆ.

English summary
Karnataka government ordered to fill various post in departments with the approve of the finance department from 1/4/2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X