1242 ಸಹಾಯಕ ಪ್ರಾಧ್ಯಾಪಕರು ಹಾಗೂ 310 ಪ್ರಾಂಶುಪಾಲ ಹುದ್ದೆ ಭರ್ತಿಗೆ ಅನುಮತಿ
ಬೆಂಗಳೂರು, ಜೂನ್ 30: ರಾಜ್ಯದ ಪದವಿ ಕಾಲೇಜುಗಳಿಗೆ 1242 ಸಹಾಯಕ ಪ್ರಾಧ್ಯಾಪಕರು ಮತ್ತು 310 ಪ್ರಾಂಶುಪಾಲ ಹುದ್ದೆಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ.
ಈ ಹುದ್ದೆಗಳ ನೇರ ನೇಮಕಾತಿಗೆ ಸರ್ಕಾರ ಸೂಚನೆ ನೀಡಿದ್ದು, ಶೀಘ್ರವೇ ಈ ಕುರಿತು ನೋಟಿಫಿಕೇಷನ್ ಬಿಡುಗಡೆ ಸಾಧ್ಯತೆ ಇರುವುದಾಗಿ ತಿಳಿದುಬಂದಿದೆ.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಈ ನೇಮಕಾತಿ ಸಂಬಂಧ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.

ನೇಮಕಾತಿಗೆ ಸಂಬಂಧಿಸಿದಂತೆ ಕೆಲವೇ ದಿನಗಳಲ್ಲಿ ಸರ್ಕಾರ ವಿಸ್ತೃತ ಪ್ರಕಟಣೆ ಹೊರಡಿಸುವ ನಿರೀಕ್ಷೆಯಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ತಗ್ಗುತ್ತಿದ್ದಂತೆ ಹಂತಹಂತವಾಗಿ ಲಾಕ್‌ಡೌನ್ ಮಾಡಲಾಗುತ್ತಿದೆ. ಶಿಕ್ಷಣ ಸಂಸ್ಥೆಗಳನ್ನು ತೆರೆಯುವ ಸಿದ್ಧತೆಗಳೂ ನಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡುವ ಕಾರ್ಯ ಮುಂದುವರೆದಿದೆ.
Recommended Video
ದಶಮುಖ ರಾವಣನ ಗುಣಗಳನ್ನು ಮೆಚ್ಚಿ ಶ್ರೀರಾಮ ಕೂಡ ಹೊಗಳಿದ್ದ!!| Interesting Facts About Ravan |Oneindia Kannada
ಕೆಲವೇ ದಿನಗಳಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳು ತೆರೆಯುವ ನಿರೀಕ್ಷೆಯಿದ್ದು, ಬೋಧಕ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಗಳಿಗೆ ಚಾಲನೆ ದೊರೆಯಲಿದೆ.












Click it and Unblock the Notifications