ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

1242 ಸಹಾಯಕ ಪ್ರಾಧ್ಯಾಪಕರು ಹಾಗೂ 310 ಪ್ರಾಂಶುಪಾಲ ಹುದ್ದೆ ಭರ್ತಿಗೆ ಅನುಮತಿ

|
Google Oneindia Kannada News

ಬೆಂಗಳೂರು, ಜೂನ್ 30: ರಾಜ್ಯದ ಪದವಿ ಕಾಲೇಜುಗಳಿಗೆ 1242 ಸಹಾಯಕ ಪ್ರಾಧ್ಯಾಪಕರು ಮತ್ತು 310 ಪ್ರಾಂಶುಪಾಲ ಹುದ್ದೆಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ.

ಈ ಹುದ್ದೆಗಳ ನೇರ ನೇಮಕಾತಿಗೆ ಸರ್ಕಾರ ಸೂಚನೆ ನೀಡಿದ್ದು, ಶೀಘ್ರವೇ ಈ ಕುರಿತು ನೋಟಿಫಿಕೇಷನ್ ಬಿಡುಗಡೆ ಸಾಧ್ಯತೆ ಇರುವುದಾಗಿ ತಿಳಿದುಬಂದಿದೆ.

ಬೆಂಗಳೂರು ವಿವಿ ಬೋಧಕ ಹುದ್ದೆ ನೇಮಕಾತಿ; ವಿವರಗಳುಬೆಂಗಳೂರು ವಿವಿ ಬೋಧಕ ಹುದ್ದೆ ನೇಮಕಾತಿ; ವಿವರಗಳು

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಈ ನೇಮಕಾತಿ ಸಂಬಂಧ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.

Karnataka Govt Approves Appointment of 1242 Assistant Professor And 310 Principals in UG Colleges

Recommended Video

ದಶಮುಖ ರಾವಣನ ಗುಣಗಳನ್ನು ಮೆಚ್ಚಿ ಶ್ರೀರಾಮ ಕೂಡ ಹೊಗಳಿದ್ದ!!| Interesting Facts About Ravan |Oneindia Kannada

ನೇಮಕಾತಿಗೆ ಸಂಬಂಧಿಸಿದಂತೆ ಕೆಲವೇ ದಿನಗಳಲ್ಲಿ ಸರ್ಕಾರ ವಿಸ್ತೃತ ಪ್ರಕಟಣೆ ಹೊರಡಿಸುವ ನಿರೀಕ್ಷೆಯಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ತಗ್ಗುತ್ತಿದ್ದಂತೆ ಹಂತಹಂತವಾಗಿ ಲಾಕ್‌ಡೌನ್ ಮಾಡಲಾಗುತ್ತಿದೆ. ಶಿಕ್ಷಣ ಸಂಸ್ಥೆಗಳನ್ನು ತೆರೆಯುವ ಸಿದ್ಧತೆಗಳೂ ನಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ನೀಡುವ ಕಾರ್ಯ ಮುಂದುವರೆದಿದೆ.

ಕೆಲವೇ ದಿನಗಳಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳು ತೆರೆಯುವ ನಿರೀಕ್ಷೆಯಿದ್ದು, ಬೋಧಕ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಗಳಿಗೆ ಚಾಲನೆ ದೊರೆಯಲಿದೆ.

English summary
Karnataka Govt approved for Appointment of 1242 assistant professor and 310 principals in UG colleges
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X