Get Updates
Get notified of breaking news, exclusive insights, and must-see stories!

Government Jobs; ಕ್ರೀಡಾಪಟುಗಳಿಗೆ ಮೀಸಲಾತಿ, ಯಾವ ಯಾವ ಕ್ರೀಡೆ?

ಬೆಂಗಳೂರು, ಫೆಬ್ರವರಿ 20; ಕರ್ನಾಟಕ ಸರ್ಕಾರ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ 2ರಷ್ಟು ಮೀಸಲಾತಿ ನೀಡುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿತ್ತು. ಈಗ ಈ ಕುರಿತು ರಾಜ್ಯಪತ್ರದಲ್ಲಿ ಆದೇಶ ಪ್ರಕಟವಾಗಿದೆ. ಯಾವ, ಯಾವ ಕ್ರೀಡೆ? ಎಂದು ಮಾಹಿತಿ ನೀಡಲಾಗಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ವೀರಭದ್ರ, ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವಾ ನಿಯಮಗಳು-1) ಆದೇಶವನ್ನು ಹೊರಡಿಸಿದ್ದಾರೆ.

Karnataka Govt Jobs 2 Per Cent Reservation Sports List

ಆದೇಶದಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ 14)ರ 8ನೇ ಪ್ರಕರಣದೊಂದಿಗೆ ಓದಲಾದ, 3ನೇ ಪ್ರಕರಣದ (1)ನೇ ಉಪ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977ನ್ನು ಮತ್ತಷ್ಟು ತಿದ್ದುಪಡಿ ಮಾಡುವ ಉದ್ದೇಶದಿಂದ ನಿಯಮಗಳ ಕರಡನ್ನು ಸದರಿ ಅಧಿನಿಯಮದ 3ನೇ ಪ್ರಕರಣದ (2)ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅದರಲ್ಲಿ ಅಗತ್ಯಪಡಿಸಲಾದಂತೆ ಪ್ರಕಟಿಸಲಾಗಿದೆ ಎಂದು ಹೇಳಿದೆ.

ಸದರಿ ಕರಡು ನಿಯಮಗಳನ್ನು ಅಧಿಕೃತ ರಾಜ್ಯಪತ್ರದಲ್ಲಿ ಅವುಗಳ ಪ್ರಕಟಣೆಯ ದಿನಾಂಕದಿಂದ 15 ದಿನಗಳ ತರುವಾಯ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದೆ. ನಿರ್ದಿಷ್ಟಪಡಿಸಿದ ಅವಧಿಯು ಮುಕ್ತಾಯಗೊಳ್ಳುವುದಕ್ಕೆ ಮೊದಲು ಸದರಿ ಕರಡು ನಿಯಮಗಳಿಗೆ ಸಂಬಂಧಿಸಿದಂತೆ, ಯಾರೇ ವ್ಯಕ್ತಿಯಿಂದ ಸ್ವೀಕರಿಸುವ ಯಾವುದೇ ಆಕ್ಷೇಪಣೆ ಮತ್ತು ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ.

ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಿಧಾನ ಸೌಧ, ಬೆಂಗಳೂರು-560001 ಇವರಿಗೆ ಸಲ್ಲಿಸತಕ್ಕದ್ದು. ಈ ನಿಯಮಗಳನ್ನು ಕರ್ನಾಟಕ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳು, 2024 ಎಂದು ಕರೆಯತಕ್ಕದ್ದು. ಈ ನಿಯಮಗಳು ಅಧಿಕೃತ ರಾಜ್ಯಪತ್ರದಲ್ಲಿ ಅಂತಿಮ ಪ್ರಕಟಣೆಯ ದಿನಾಂಕದಿಂದ ಜಾರಿಗೆ ಬರತಕ್ಕದ್ದು ಎಂದು ಸ್ಪಷ್ಟಪಡಿಸಲಾಗಿದೆ.

ಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ ನೇಮಕಾತಿ) ನಿಯಮಗಳು, 1977ರಲ್ಲಿ ನಿಯಮ 9 ರ ಉಪ-ನಿಯಮ (1), ಖಂಡ (1D) ನಂತರ ಯಾವುದೇ ಸೇವೆಯ ಅಥವಾ ಹುದ್ದೆಯ ಸಂಬಂಧದಲ್ಲಿ ವಿಶೇಷವಾಗಿ ರಚಿಸಿದ ನೇಮಕಾತಿ ನಿಯಮಗಳಲ್ಲಿ ಏನೇ ಒಳಗೊಂಡಿದ್ದರೂ ಮತ್ತು ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸುವ ಸಾಮಾನ್ಯ ಸೂಚನೆಗಳಿಗೆ ಒಳಪಟ್ಟು ಅಂಥ ನೇಮಕಾತಿ ನಿಯಮಗಳಲ್ಲಿ ನೇರ ನೇಮಕಾತಿಯನ್ನು ಒಂದು ವಿಧಾನವನ್ನಾಗಿ ನಿಗದಿಪಡಿಸಿದ್ದಲ್ಲಿ ಅಂಥ ವಿಧಾನದ ಮೂಲಕ ನೇಮಕ ಮಾಡುವುದಕ್ಕಾಗಿ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗದಿಂದಲೂ ಪ್ರತಿ ಇಲಾಖೆಯ ಮಂಜೂರಾದ ವೃಂದ ಬಲದ ಶೇಕಡಾ ಶೇ 2ರಷ್ಟು ಹುದ್ದೆಗಳನ್ನು ಕ್ರೀಡಾ ಸಾಧಕ ಅಭ್ಯರ್ಥಿಗಳಿಗೆ ಮೀಸಲಿರಿಸತಕ್ಕದ್ದು.

ಪ್ರತಿ ನೇಮಕಾತಿ ಪ್ರಾಧಿಕಾರವು ಗ್ರೂಪ್-ಎ, ಬಿ, ಸಿ ಮತ್ತು ಡಿ ವೃಂದಗಳ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಯ ಅರ್ಜಿಯಲ್ಲಿ ಕ್ರೀಡಾ ಸಾಧಕ ಅಭ್ಯರ್ಥಿಗಳ ಅನುಕೂಲಕ್ಕಾಗಿ ಪ್ರತ್ಯೇಕ ಕಾಲಂ ಅನ್ನು ಒದಗಿಸಬೇಕು. ಕ್ರೀಡಾ ಸಾಧಕ ಅಭ್ಯರ್ಥಿಗಳಿಗಾಗಿ ಮೀಸಲಿರಿಸಿದ ಪ್ರತಿ ಇಲಾಖೆಯ ಮಂಜೂರಾದ ವೃಂದ ಬಲದ ಶೇಕಡಾವಾರು 2ರಷ್ಟು ಸಂಖ್ಯೆಗೆ ಸೂಕ್ತ ಅಭ್ಯರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಅಭ್ಯವಾಗದಿದ್ದಲ್ಲಿ, ಅಂಥ ರಿಕ್ತ ಸ್ಥಾನಗಳನ್ನು ಅದೇ ಪ್ರವರ್ಗಕ್ಕೆ ಸೇರಿದ ಇತರ ಅಭ್ಯರ್ಥಿಗಳಿಂದ ಭರ್ತಿ ಮಾಡತಕ್ಕದ್ದು.

ಒಬ್ಬ ಅಭ್ಯರ್ಥಿಯು ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಕ್ರೀಡೆಗಳಲ್ಲಿ ಅಥವಾ ಆಟಗಳಲ್ಲಿ ವೈಯಕ್ತಿಕವಾಗಿ ಅಥವಾ ತಂಡದ ಕ್ರೀಡೆಗಳು ಅಥವಾ ಆಟಗಳ ಸದಸ್ಯರಾಗಿ ಭಾಗವಹಿಸಿದ್ದರೆ ಮಾತ್ರ ಅವರನ್ನು ಪ್ರತಿಭಾವಂತ ಕ್ರೀಡಾಪಟು ಎಂದು ಪರಿಗಣಿಸತಕ್ಕದ್ದು ಎಂದು ಆದೇಶ ಹೇಳಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+