• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗ್ರಾಮ ಪಂಚಾಯಿತಿ ನೇರ ನೇಮಕಾತಿಗೆ ಸರ್ಕಾರದ ತಾತ್ಕಾಲಿಕ ತಡೆ

|
Google Oneindia Kannada News

ಬೆಂಗಳೂರು, ಆಗಸ್ಟ್ 18; ಕರ್ನಾಟಕ ಸರ್ಕಾರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ನೇರ ನೇಮಕಾತಿಗೆ ತಾತ್ಕಾಲಿಕ ತಡೆ ನೀಡಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಈ ಕುರಿತು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಮತ್ತು ಉಪ ಕಾರ್ಯದರ್ಶಿಗಳು (ಅಭಿವೃದ್ಧಿ) ಇವರಿಗೆ ಈ ಕುರಿತು ಪತ್ರ ಬರೆದಿದ್ದಾರೆ.

ಬೆಳಗಾವಿ ಜಿಲ್ಲಾ ಪಂಚಾಯಿತಿಯಲ್ಲಿ ಸಹಾಯಕ ಹುದ್ದೆಗಳ ನೇಮಕಾತಿಬೆಳಗಾವಿ ಜಿಲ್ಲಾ ಪಂಚಾಯಿತಿಯಲ್ಲಿ ಸಹಾಯಕ ಹುದ್ದೆಗಳ ನೇಮಕಾತಿ

ಸರ್ಕಾರದ ಪತ್ರ ಸಂಖ್ಯೆ RDPR/630/GPS/2020 (ಭಾಗ-1) ದಿನಾಂಕ 2/6/2020ರ ಉಲ್ಲೇಖದ ಮೇಲೆ ಈ ಆದೇಶ ಹೊರಡಿಸಲಾಗಿದೆ. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ನೇರ ನೇಮಕಾತಿ ಮಾಡುವುದನ್ನು ತಾತ್ಕಾಲಿಕ ತಡೆ ಹಿಡಿಯಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

LIC ನೇಮಕಾತಿ 2022: 80 ಹುದ್ದೆಗಳಿಗೆ ಅರ್ಜಿ ಆಹ್ವಾನ LIC ನೇಮಕಾತಿ 2022: 80 ಹುದ್ದೆಗಳಿಗೆ ಅರ್ಜಿ ಆಹ್ವಾನ

ನೇಮಕಾತಿಗೆ ತಡೆ ಏಕೆ?; ಉಲ್ಲೇಖಿತ ಸರ್ಕಾರದ ಪತ್ರದಲ್ಲಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯಿತಿ, ಚಿಕ್ಕಬಳ್ಳಾಪುರ ರವರು ತಿಳಿಸಿರುವ ಪದ್ಧತಿಯನ್ನು ಅನುಸರಿಸಿಕೊಂಡು ನೇರ ನೇಮಕಾತಿಗಾಗಿ 100 ರೋಸ್ಟರ್ ಬಿಂದುಗಳು ಮತ್ತು 20 ಬಿಂದುಗಳ ಸಮತಲ ಮೀಸಲಾಯಿತಿಯನ್ನು ಹೊಸದಾಗಿ ಪ್ರಾರಂಭಿಸಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ, (ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವೃಂದದ ಸೇವೆಯೊಳಗಿನ ನೇರ ನೇಮಕಾತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ನೇಮಕಾತಿ ಮಾಡಲು ಕ್ರಮ ವಹಿಸುವಂತೆ ತಮಗೆ ತಿಳಿಸಲಾಗಿತ್ತು.

SSC ನೇಮಕಾತಿ 2020: 4300 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ SSC ನೇಮಕಾತಿ 2020: 4300 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಸಂಘ (ರಿ.) (ಸಿಐಟಿಯು ಸಂಯೋಜಿತ) ರವರು ದಿನಾಂಕ 10/8/2022ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರವರನ್ನು ಭೇಟಿ ಮಾಡಿರುತ್ತಾರೆ.

ಜಿಲ್ಲಾ ಪಂಚಾಯಿತಿಗಳಲ್ಲಿ ವಿವಿಧ ರೀತಿಯ ನೇಮಕಾತಿ ಆದೇಶಗಳನ್ನು ಹೊರಡಿಸುತ್ತಿರುವುದರಿಂದ ಅರ್ಹ ನೌಕರರಿಗೆ ಅನ್ಯಾಯವಾಗುವುದರಿಂದ ಸಿಬ್ಭಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಅಭಿಪ್ರಾಯ ಬರುವ ತನಕ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ಮಾಡುವುದನ್ನು ತಡೆ ಹಿಡಿಯುವಂತೆ ಗಮನಕ್ಕೆ ತಂದಿರುತ್ತಾರೆ.

Karnataka Govt Stayed Various Posts Direct Recruitment Of Gram Panchayat

ಆದುದರಿಂದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ಮಾಡುವ ಬಗ್ಗೆ ಏಕರೂಪವಾಗಿ ಮಾರ್ಗಸೂಚಿಗಳನ್ನು ಹೊರಡಿಸಲು ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿರುವುದರಿಂದ ಈಗಾಗಲೇ ನೇಮಕಾತಿ ಮಾಡಿರುವ ಜಿಲ್ಲೆಗಳನ್ನು ಹೊರತುಪಡಿಸಿ ಇನ್ನುಳಿದ ಜಿಲ್ಲೆಗಳಲ್ಲಿ ಸೇವೆಯೊಳಗೆ ನೇರ ನೇಮಕಾತಿಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ತಮಗೆ ತಿಳಿಸಲು ನಾನು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ನವೀನ್ ಕುಮಾರ್ ಬಿ. ಆದೇಶದಲ್ಲಿ ತಿಳಿಸಿದ್ದಾರೆ.

ಅರೆಕಾಲಿಕ ಉಪನ್ಯಾಸಕರ ಹುದ್ದೆಗೆ ಸಂದರ್ಶನ; ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಸ್ತರಣಾ ಶಿಕ್ಷಣ ವಿಭಾಗದಲ್ಲಿ 2022-23ನೇ ಸಾಲಿನ ಪ್ರಥಮ ವರ್ಷದ ಬಿ.ಎಸ್ಸಿ ಅಗ್ರಿ, ಎಬಿಎಂ, ಸಿಎಸ್ಪಿ ಮತ್ತು ಬಿಟಿಕ್ ಸ್ನಾತಕ ವಿದ್ಯಾರ್ಥಿಗಳಿಗೆ ಬೋಧಿಸಲು ಐದು ಅರೆಕಾಲಿಕ ಉಪನ್ಯಾಸಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಆಗಸ್ಟ್ 22 ರಂದು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.

ಸ್ಪೋಕನ್ ಇಂಗ್ಲೀಶ್, ಕನ್ನಡ ಕೃಷಿ ಭಾಗ-1, ಕನ್ನಡ ಭಾಷೆ, ಕಾನ್ಸ್ಯಿಟೂಷನ್ ಆಫ್ ಇಂಡಿಯಾ ಆ್ಯಂಡ್ ರೂರಲ್ ಆ್ಯಂಡ್ ಎಜುಕೇಷನ್ ಸೈಕಾಲಜಿ, ಹೂಮನ್ ವ್ಯಾಲೂಸ್ ಆ್ಯಂಡ್ ಎಥಿಕ್ಸ್ ವಿಷಯಗಳನ್ನು ಬೋಧಿಸಲು ಇಂಗ್ಲೀಷ್, ಕನ್ನಡ, ಸೈಕಾಲಜಿಯಲ್ಲಿ ಎಂ.ಎ ಪದವಿ ಜೊತೆಗೆ ಸೆಟ್, ಸ್ಲೇಟ್ ಉತ್ತೀರ್ಣರಾಗಿವವರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡೀನ್ (ಕೃಷಿ) ಕಛೇರಿ ಕೃಷಿ ಮಹಾವಿದ್ಯಾಲಯ, ಧಾರವಾಡ ಇಲ್ಲಿ ಆಗಸ್ಟ್ 22 ರಂದು ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ www.uasd.edu ವೆಬ್‍ಸೈಟ್‍ಗೆ ಭೇಟಿ ನೀಡಬಹುದು.

English summary
Karnataka government temporary stay for the direct recruitment of gram panchayat assistant rural development (Grade-2) and second division clerk posts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X