KGB Recruitment 2025: ಕರ್ನಾಟಕ ಪ್ರಗತಿ ಗ್ರಾಮೀಣ ಬ್ಯಾಂಕ್‌ನಲ್ಲಿ ಭರ್ಜರಿ ಉದ್ಯೋಗಾವಕಾಶ
Karnataka Grameena Bank Recruitment 2025: ಬ್ಯಾಂಕ್‌ನಲ್ಲಿ ಉದ್ಯೋಗ ಬಯಸುವವರಿಗೆ ಇಲ್ಲಿದೆ ಭರ್ಜರಿ ಶುಭಸುದ್ದಿ. ಕರ್ನಾಟಕ ಪ್ರಗತಿ ಗ್ರಾಮೀಣ ಬ್ಯಾಂಕ್‌ನಲ್ಲಿ ಖಾಲಿ ಇರುವ 1,425 ಹುದ್ದೆಗಳಿಗೆ ಅರ್ಜಿ ಆಹ್ವಾನಿಲಾಗಿದೆ. ಹಾಗಾದ್ರೆ, ಅರ್ಜಿ ಸಲ್ಲಿಸುವವರು ಯಾವೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕರ್ನಾಟಕ ಪ್ರಗತಿ ಗ್ರಾಮೀಣ ಬ್ಯಾಂಕ್ ಪ್ರಧಾನ ಕಚೇರಿ ಬಳ್ಳಾರಿಯಲ್ಲಿದೆ. ಇದೀಗ ಈ ಬ್ಯಾಂಕ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಕ್ಲರ್ಕ್, ಅಸಿಸ್ಟಂಟ್ ಮ್ಯಾನೇಜರ್ ಸೇರಿ ಒಟ್ಟು 1,425 ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ.

ಯಾರೆಲ್ಲಾ ಅರ್ಜಿ ಸಲ್ಲಿಕೆ ಮಾಡಬಹುದು?: ಪದವಿ ವಿದ್ಯಾರ್ಹತೆ ಪಡೆದಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಕೆ ಸೆಪ್ಟೆಂಬರ್ 1ರಿಂದ ಪ್ರಾರಂಭವಾಗಿದೆ. ಕೊನೇ ದಿನಾಂಕ ಸೆಪ್ಟೆಂಬರ್ 21, 2025 ಆಗಿದೆ. ಆಸಕ್ತರು ಈ ದಿನಾಂಕದೊಳಗೆ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ.
ಹುದ್ದೆವಾರು ವಿದ್ಯರ್ಹತೆ ವಿವರ
* 800 ಕ್ಲರ್ಕ್ ಹುದ್ದೆಗಳು ಖಾಲಿಯಿದ್ದು, ಅರ್ಜಿ ಸಲ್ಲಿಸುವವರು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆ ಹೊಂದಿರಬೇಕಾಗುತ್ತದೆ.
* 500 ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸುವವರು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆ ಹೊಂದಿರಬೇಕಾಗುತ್ತದೆ.
* 150 ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಸಿಎ, ಪದವಿ, ಎಲ್‌ಎಲ್‌ಬಿ, ಎಂಬಿಎ ವಿದ್ಯಾರ್ಹತೆ ಹೊಂದಿರಬೇಕಾಗುತ್ತದೆ.
ವಯೋಮಿತಿ ವಿಚಾರಕ್ಕೆ ಬಂದರೆ, ಆಯಾ ಹುದ್ದೆಗೆ ತಕ್ಕಂತೆ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 32 ವರ್ಷ. ಮೀಸಲಾತಿಗೆ ತಕ್ಕಂತೆ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇರಲಿದ.
ಅರ್ಜಿ ಶುಲ್ಕ ಯಾರಿಗೆ ಎಷ್ಟು?
* ಪ.ಜಾ, ಪ.ಪಂ, ವಿಕಲಚೇತನ ಅಭ್ಯರ್ಥಿಗಳಿಗೆ 175 ರೂಪಾಯಿ
* ಇತರೆ ಅಭ್ಯರ್ಥಿಗಳಿಗೆ 850 ರೂಪಾಯಿ
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ಆಯ್ಕೆ ವಿಧಾನದ ವಿಚಾರಕ್ಕೆ ಬಂದ್ರೆ, ಪ್ರಿಲಿಮಿನರಿ ಪರೀಕ್ಷೆ, ಮೇನ್ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಪ್ರಿಲಿಮಿನರಿ ಪರೀಕ್ಷೆ ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ನಡೆಯುವ ಸಾಧ್ಯತೆಯಿದೆ. ಮೇನ್ ಪರೀಕ್ಷೆ ಡಿಸೆಂಬರ್ ಅಥವಾ ಫೆಬ್ರವರಿಯಲ್ಲಿ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅರ್ಜಿ ಸಲ್ಲಿಸುವ ವಿಧಾನಗಳು
* ಕ್ಲರ್ಕ್ ಹಾಗೂ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಧಿಕೃತ ವಬ್‌ಸೈಟ್‌ಗೆ ಭೇಟಿ ನೀಡಿ
* ಬಳಿಕ ಹೆಸರು ನೋಂದಾಯಿಸಿ, ಲಾಗಿನ್ ಆಗಿ
* ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ
* ಅಗತ್ಯ ದಾಖಲೆಗಳು, ಫೋಟೊ ಅಪ್ಲೋಡ್ ಮಾಡಿ
* ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬೇಕಾಗುತ್ತದೆ
* ಇವೆಲ್ಲಾ ಪ್ರಕ್ರಿಕೆ ಪೂರ್ಣಗೊಂಡ ಬಳಿಕ ವಿವರಗಳನ್ನು ಮತ್ತೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ ಸಬ್ಮಿಟ್ ಅಥವಾ ಸಲ್ಲಿಸು ಬಟನ್ ಮೇಲೆ ಕ್ಲಿಕ್ ಮಾಡಿ
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ karnatakagrameenabank.comಗೆ ಭೇಟಿ ನೀಡಬಹುದು. ಹೀಗೆ ಬ್ಯಾಂಕ್‌ಗಳು ಆಗಾಗ ಉದ್ಯೋಗವಕಾಶಗಳನ್ನು ಕಲ್ಪಿಸುತ್ತಲಿರುತ್ತವೆ. ಹಾಗೆಯೇ ಇದೀಗ ಕರ್ನಾಟಕ ಪ್ರಗತಿ ಗ್ರಾಮೀಣ ಬ್ಯಾಂಕ್ ಸಹ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾಮಿಸಿದ್ದು, ಬ್ಯಾಂಕ್‌ನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಉತ್ತಮ ಅವಕಾಶ ಆಗಿದೆ.












Click it and Unblock the Notifications