ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಹೈಕೋರ್ಟ್
ಬೆಂಗಳೂರು, ಏಪ್ರಿಲ್ 04 : ಕರ್ನಾಟಕ ಹೈಕೋರ್ಟ್‌ನಲ್ಲಿ 29 ಲಾ ಕ್ಲರ್ಕ್ ಮತ್ತು ರಿಸರ್ಚ್ ಅಸ್ಟಿಸ್ಟೆಂಟ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 30, 2016.
ಪ್ರತಿಭಾವಂತ ಕಾನೂನು ಪದವೀಧರರಿಗೆ, ಕಾನೂನು ವೃತ್ತಿಗೆ ಸೇರ್ಪಡೆ, ಕಾನೂನು ತಕರಾರು ಅರ್ಜಿಗಳ ವಿವಿಧ ರೂಪಗಳು, ಕಾನೂನಿನ ವಿವಿಧ ಶಾಖೆಗಳು ಮತ್ತು ನ್ಯಾಯಾಲಯದ ಕಾರ್ಯವಿಧಾನಗಳ ಪರಿಚಯ ಮಾಡಿಕೊಡುವ ಉದ್ದೇಶದಿಂದ ಲಾ ಕ್ಲರ್ಕ್ ಮತ್ತು ರಿಸರ್ಚ್ ಅಸ್ಟಿಸ್ಟೆಂಟ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. [ಜೆಸ್ಕಾಂ ನೇಮಕಾತಿ ಅಧಿಸೂಚನೆ ವಿವರಗಳು]

ಕಾನೂನು ಪದವಿಯಲ್ಲಿ ಕನಿಷ್ಠ ಶೇ 50ರಷ್ಟು ಅಂಕಗಳನ್ನು ಹೊಂದಿರುವಂತಹ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು 1/1/2014ರಂದು ಅಥವಾ ನಂತರ ಕರ್ನಾಟಕ ಸ್ಟೇಟ್ ಬಾರ್ ಕೌನ್ಸಿಲ್‌ನಲ್ಲಿ ನೋಂದಣಿಯಾಗಿರಬೇಕು, ವಯಸ್ಸು 30 ವರ್ಷ ಮೀರಿರಬಾರದು. [555 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಅರಣ್ಯ ಇಲಾಖೆ]
ಅರ್ಜಿಗಳನ್ನು ಸಲ್ಲಿಸಲು ಏ.30 ಕೊನೆಯ ದಿನವಾಗಿದೆ. www.karnatakajudiciary.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಿ, ಹೆಚ್ಚಿನ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ನ್ಯಾಯಾಲಯದ ಮಹಾ ವಿಲೇಖನಾಧಿಕಾರಿಗಳಾದ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹ ತಿಳಿಸಿದ್ದಾರೆ.
ಕೆಪಿಎಸ್‌ಸಿ ನೇಮಕಾತಿ, ಏ.14 ಕೊನೆ ದಿನ : ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ನಿಯಂತ್ರಕರು ಮತ್ತು ಲೆಕ್ಕಪರಿಶೋಧನಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 15, 2016 ಕೊನೆ ದಿನ.
ಸಹಾಯಕ ನಿಯಂತ್ರಕರು ಸಮೂಹ 'ಎ' ವೃಂದದ 54 ಹುದ್ದೆಗಳು ಮತ್ತು ಲೆಕ್ಕಪರಿಶೋಧನಾಧಿಕಾರಿ ಸಮೂಹ 'ಬಿ' ವೃಂದದ 108 ಹುದ್ದೆಗಳು ಸೇರಿದಂತೆ ಒಟ್ಟು 162 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. [ವಿವರಗಳು ಇಲ್ಲಿವೆ]












Click it and Unblock the Notifications