ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ಅಕ್ಟೋಬರ್ 20 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಅರೆ-ವೈದ್ಯಕೀಯ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 26, 2015.

ಅಕ್ಟೋಬರ್ 16ರಂದು ನೇಮಕಾರಿ ಅಧಿಸೂಚನೆ ಹೊರಡಿಸಲಾಗಿದ್ದು, ಅ.28ರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 26, ಅಂಚೆ ಕಚೇರಿಯಲ್ಲಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ ನವೆಬರ್ 28. [ಅರ್ಜಿ ಸಲ್ಲಿಸಲು ವಿಳಾಸ]

jobs

ಖಾಲಿ ಇರುವ ಹುದ್ದೆಗಳು : ಶುಶ್ರೂಷಕರು (ಬಿಎಸ್ಸಿ ನರ್ಸಿಂಗ್) 179, ಶುಶ್ರೂಷಕರು (ಡಿಪ್ಲೋಮಾ ನರ್ಸಿಂಗ್) 536, ಫಾರ್ಮಾಸಿಸ್ಟ್ 202, ಕಿರಿಯ ವೈದ್ಯಕೀಯ ಪ್ರಯೋಗಶಾಲಾ ತಂತ್ರಜ್ಞ 83, ಫಿಜಿಯೋಥೆರಪಿಸ್ಟ್ 17, ನೇತ್ರ ಸಹಾಯಕರು 61, ಕಿರಿಯ ಆರೋಗ್ಯ ಸಹಾಯಕರು 525, ಕಿರಿಯ ಆರೋಗ್ಯ ಸಹಾಯಕರು (ಮಹಿಳೆ) 501, ವೈದ್ಯಕೀಯ ದಾಖಲಾತಿ ತಂತ್ರಜ್ಞ 2, ಹಿರಿಯ ಪ್ರಯೋಗಶಾಲಾ ತಂತ್ರಜ್ಞ 26, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ 12 ಹುದ್ದೆಗಳು.[ನೇಮಕಾತಿ ಆದೇಶ ಓದಿ]

ವಯೋಮಿತಿ : ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಈ ಕೆಳಕಂಡ ವಯೋಮಿತಿಯನ್ನು ಹೊಂದಿರಬೇಕು. ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗಕ್ಕೆ 35 ವರ್ಷ, 2ಎ/2ಬಿ/3ಎ/3ಬಿ ವರ್ಗದವರಿಗೆ 38 ವರ್ಷಗಳು. ಪ.ಜಾ/ಪ.ಪಂ/ಪ್ರವರ್ಗ -1ರ ಅಭ್ಯರ್ಥಿಗಳಿಗೆ 40 ವರ್ಷಗಳು. [ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ]

ಅರ್ಜಿ ಶುಲ್ಕಗಳು : ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ ಲಭ್ಯವಾಗುವ ಚಲನ್ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು ಯಾವುದೇ ಎಲೆಕ್ಟ್ರಾನಿಕ್ ಅಂಚೆ ಕಚೇರಿಗಳಲ್ಲಿ ಶುಲ್ಕವನ್ನು ಪಾವತಿ ಮಾಡಬಹುದಾಗಿದೆ. ಅರ್ಜಿ ಶುಲ್ಕಗಳು ಪ.ಜಾ/ಪ.ಪಂ/ಪ್ರವರ್ಗ -1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ., ಸಾಮಾನ್ಯ ಅರ್ಹತೆ, ಪ್ರವರ್ಗ 2ಎ/2ಬಿ/3ಎ/3ಬಿ/ ಅಭ್ಯರ್ಥಿಗಳಿಗೆ 300 ರೂ..

ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆ, ಮೀಸಲಾತಿ, ವರ್ಗೀಕರಣ, ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಪಾವತಿಸುವ ವಿಧಾನ ಮುಂತಾದ ವಿವರಗಳಿಗಾಗಿ http://karhfw.gov.in/drc.aspx ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ. [PSI ಹುದ್ದೆಗೆ ಅರ್ಜಿ ಆಹ್ವಾನ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+