ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಹೈಕೋರ್ಟ್ ಡಿ ಗ್ರೂಪ್ ನೇಮಕಾತಿ : 95 ಹುದ್ದೆಗಳು

|
Google Oneindia Kannada News

ಬೆಂಗಳೂರು, ಮೇ 21 : ಕರ್ನಾಟಕ ಹೈಕೋರ್ಟ್‌ನಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಜೂನ್ 3, 2019 ಕೊನೆಯ ದಿನವಾಗಿದೆ.

ಒಟ್ಟು 95 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜವಾನರು, ಕಾವಲುಗಾರರು, ಸ್ವೀಪರ್‌ಗಳು ಮತ್ತು ಹೌಸ್ ಕೀಪಿಂಗ್ ಜವಾನರು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ನಮ್ಮ ಮೆಟ್ರೋಗೆ ಭದ್ರತೆ : ಶೀಘ್ರದಲ್ಲೇ 1350 ಹುದ್ದೆಗಳಿಗೆ ನೇಮಕಾತಿನಮ್ಮ ಮೆಟ್ರೋಗೆ ಭದ್ರತೆ : ಶೀಘ್ರದಲ್ಲೇ 1350 ಹುದ್ದೆಗಳಿಗೆ ನೇಮಕಾತಿ

ಆಯ್ಕೆಯಾದ ಅಭ್ಯರ್ಥಿಗಳನ್ನು ಕರ್ನಾಟಕ ಹೈಕೋರ್ಟ್‌ನ ಬೆಂಗಳೂರು, ಕಲಬುರಗಿ, ಧಾರವಾಡ ಪೀಠಗಳಲ್ಲಿಯೂ ನಿಯೋಜನೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಜೂನ್ 6 ಕೊನೆಯ ದಿನವಾಗಿದೆ.

ಧಾರವಾಡ ಕೋರ್ಟ್ ನೇಮಕಾತಿ : ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿ ಹಾಕಿಧಾರವಾಡ ಕೋರ್ಟ್ ನೇಮಕಾತಿ : ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿ ಹಾಕಿ

ಆಸಕ್ತ ಅಭ್ಯರ್ಥಿಗಳು ವೆಬ್‌ ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಕೆ ಮಾಡುವ ಮೊದಲು ನೇಮಕಾತಿ ಆದೇಶವನ್ನು ವಿವರವಾಗಿ ಓದಿಕೊಳ್ಳುವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ....

ವಿದ್ಯಾರ್ಹತೆ ವಿವರ

ವಿದ್ಯಾರ್ಹತೆ ವಿವರ

ಗ್ರೂಪ್ ಡಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಿಂದ ಕನಿಷ್ಠ ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ವಿದ್ಯಾಭ್ಯಾಸವನ್ನು ಪೂರೈಸಿರಬೇಕು.

ವಯೋಮಿತಿ ಎಷ್ಟು?

ವಯೋಮಿತಿ ಎಷ್ಟು?

ಅರ್ಜಿಗಳನ್ನು ಸಲ್ಲಿಸಲು ಕನಿಷ್ಠ 18 ವರ್ಷದ ವಯೋಮಿತಿ ಗೆನಿಗದಿ ಮಾಡಲಾಗಿದೆ, ಗರಿಷ್ಠ ವಯೋಮಿತಿ 35 ವರ್ಷ. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ/ಬುಡಕಟ್ಟು/ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷ. ಅಂಗವಿಕಲ ಅಭ್ಯರ್ಥಿಗಳಿಗೆ 45 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕಗಳು

ಅರ್ಜಿ ಶುಲ್ಕಗಳು

ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 200 ರೂ., ಹಿಂದುಳಿದ ವರ್ಗ/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಅರ್ಜಿಗಳನ್ನು ಸಲ್ಲಿಸಿದ ಬಳಿಕ ಅರ್ಜಿಯಲ್ಲಿ ತಿಳಿಸಿದ ಸ್ಟೇಟ್ ಬ್ಯಾಂಕ್ ಇಂಡಿಯಾ ಆನ್‌ಲೈನ್ ಪೇಮೆಂಟ್ ಗೇಟ್‌ ವೇ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬೇಕು. ಚಲನ್ ಮೂಲಕ ಸಲ್ಲಿಸುವವರು ಸ್ಟೇಟ್ ಬ್ಯಾಂಕ್ ಇಂಡಿಯಾ ಗೇಟ್‌ ವೇನಲ್ಲಿ ಪಿಡಿಎಫ್ ನಮೂನೆಯ ಚಲನ್ ಡೌನ್ ಲೋಡ್ ಮಾಡಿಕೊಂಡು ಎಸ್‌ಬಿಐ ಯಾವುದೇ ಶಾಖೆಯಲ್ಲಿ ಶುಲ್ಕ ಪಾವತಿಸಬಹುದು.

ವೇತನ ಶ್ರೇಣಿ

ವೇತನ ಶ್ರೇಣಿ

ಕರ್ನಾಟಕ ಉಚ್ಚ ನ್ಯಾಯಾಲಯ ಪರಿಷ್ಕೃತ ವೇತನ ಶ್ರೇಣಿ ನಿಯಮ 2018 ಅನುಸಾರ ಮಾಸಿಕ 19,900 - 63,200 ವೇತನ ನಿಗದಿ ಮಾಡಲಾಗಿದೆ.

ಸಲ್ಲಿಕೆಯಾದ ಅರ್ಜಿಗಳ ಪರಿಶೀಲನೆ ನಡೆಸಿ, ಮೌಖಿಕ ಸಂದರ್ಶನಕ್ಕೆ ಹಾಜರಾಗುವಂತೆ ಅಭ್ಯರ್ಥಿಗಳಿಗೆ ತಿಳಿಸಲಾಗುತ್ತದೆ. ಸಂದರ್ಶನದ ಸಮಯದಲ್ಲಿ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

English summary
Karnataka high court issued notification for recruitment of 95 d group post. Candidates can apply online before June 3, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X