ಕರ್ನಾಟಕ ಹೈಕೋರ್ಟ್ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 19 : ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ 30 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಮೇ 15 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

ಹುದ್ದೆ: ದ್ವಿತೀಯ ದರ್ಜೆ ಸಹಾಯಕ (30)
ವಯೋಮಿತಿ: 18ರಿಂದ 40 (ಮೇ 15ಕ್ಕೆ ಅನ್ವಯವಾಗುವಂತೆ)
ವೇತನ ಶ್ರೇಣಿ : 11600 ರಿಂದ 21000 (ತಿಂಗಳಿಗೆ)

Karnataka High Court Recruitment 2017 Apply For 30 Second Division Assistant Posts

ವಿದ್ಯಾರ್ಹತೆ: ದ್ವಿತೀಯ ದರ್ಜೆ ಸಹಾಯಕ ಹುದ್ದೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಪದವಿ ಪಡೆದಿರಬೇಕು.[ಬಿಎಂಆರ್‌ಸಿಎಲ್ 60 ಹುದ್ದೆಗಳಿಗೆ ಅರ್ಜಿ ಆಹ್ವಾನ, ಮೇ 2 ಕೊನೆ ದಿನ]

ಎಸ್ ಸಿ, ಸ್ ಟಿ ಮತ್ತು ಹಿಂದೂಳಿದ ಅಭ್ಯರ್ಥಿಗಳು ಶೇ 50 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಹಾಗೂ ಇತರೆ ಅಭ್ಯರ್ಥಿಗಳು ಶೇ 55 ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಇರಲಿದೆ. ಇದಾದ ಬಳಿಕ ವೈಯಕ್ತಿಕ ಸಂದರ್ಶ ಮತ್ತು ಮೂಲ ದಾಖಲಾತಿಗಳ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.

ಇನ್ನು ಇತರೆ ಹೆಚ್ಚಿನ ಮಾಹಿತಿಯನ್ನು ತಿಳಿಯಬೇಕಾಗಿದ್ದಲ್ಲಿ ಇಲ್ಲಿ ಕ್ಲಿಕ್ಕಿಸಿ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
High Court of Karnataka released new notification on their official website for the recruitment of total 30 Second division assistant. Job seekers should register before 15th May 2017.
Please Wait while comments are loading...