ಕರ್ನಾಟಕ ಹೈಕೋರ್ಟ್ ನೇಮಕಾತಿ; 851 ಹುದ್ದೆಗಳು
ಬೆಂಗಳೂರು, ಜನವರಿ 14 : ಕರ್ನಾಟಕ ಹೈಕೋರ್ಟ್ 851 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 7/2/2020.
ಹೈಕೋರ್ಟ್ Oath Commissioners ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ಮಾಡಬೇಕಿದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ವಕೀಲರಾಗಿರಬೇಕು. 2 ವರ್ಷಕ್ಕಿಂತ ಅಧಿಕ 4 ವರ್ಷಕ್ಕಿಂತ ಕಡಿಮೆ ಪ್ರಾಕ್ಟೀಸ್ ಮಾಡಿರಬೇಕು. 7/2/2020ಕ್ಕೆ ಅನ್ವಯವಾಗುವಂತೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗಿ.
ಆಸಕ್ತ ಅಭ್ಯರ್ಥಿಗಳು 13/1/2020 ರಿಂದ 7/2/2020ರ ತನಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.
ಪ್ರಮುಖ ಮಾಹಿತಿ
* ಕರ್ನಾಟಕ ಹೈಕೋರ್ಟ್ ನೇಮಕಾತಿ
* Oath Commissioners ಹುದ್ದೆ
* 851 ಹುದ್ದೆಗಳು
* ಕರ್ನಾಟಕದಲ್ಲಿ ಕೆಲಸ
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲ್ಲಿ ಕ್ಲಿಕ್ ಮಾಡಬಹುದಾಗಿದೆ











Click it and Unblock the Notifications