ಕರ್ನಾಟಕ ಹೈಕೋರ್ಟ್ ನೇಮಕಾತಿ : 18 ಹುದ್ದೆಗೆ ಅರ್ಜಿ ಹಾಕಿ

ಬೆಂಗಳೂರು, ಏಪ್ರಿಲ್ 11 : ಕರ್ನಾಟಕ ಹೈಕೋರ್ಟ್‌ನಲ್ಲಿ 18 ಬೆರಳಚ್ಚುಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಮೇ 8, 2019 ಕೊನೆಯ ದಿನವಾಗಿದೆ.

ಕರ್ನಾಟಕ ಹೈಕೋರ್ಟ್ ವೆಬ್‌ಸೈಟ್‌ನಲ್ಲಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪದವಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ವಿಜ್ಞಾನ/ಕಲೆ/ವಾಣಿಜ್ಯ/ವ್ಯವಹಾರ ನಿರ್ವಹಣೆ/ಕಂಪ್ಯೂಟರ್ ಅಪ್ಲಿಕೇಶನ್ ವಿಷಯಗಳಲ್ಲಿ ಪದವಿ ಪಡೆದವರು ಅರ್ಜಿ ಹಾಕಬಹುದು.

Karnataka High Court recruitment : Apply for 18 typists post

ಸಾಮಾನ್ಯ ಮತ್ತು ಇತರ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಕನಿಷ್ಟ ಶೇ 55ರಷ್ಟು ಅಂಕ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಶೇ 50ರಷ್ಟು ಅಂಕಗಳೊಂದಿಗೆ ಪದವಿ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಂಗ್ಲ ಮತ್ತು ಕನ್ನಡ ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ.

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷ. ಪ.ಜಾ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 40, ಪ್ರವರ್ಗ 2ಎ,/2ಬಿ/3ಎ/3ಬಿ/ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ವೇತನ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ 25,000 ದಿಂದ 81,100 ರೂ. ವೇತನ ಶ್ರೇಣಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 250 ರೂ. ಶುಲ್ಕವಿದೆ. ಪ.ಜಾ/ಪ.ಪಂ/ಪ್ರವರ್ಗ-1/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಶುಲ್ಕ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+