ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಹೈಕೋರ್ಟ್ ನೇಮಕಾತಿ; ಸ್ನಾತಕೋತ್ತರ ಪದವೀಧರರು ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 20; ಕರ್ನಾಟಕದ ಹೈಕೋರ್ಟ್ ಮೂರು ಭಾಷಾಂತರಕಾರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು 16 ಅಕ್ಟೋಬರ್ 2021 ಕೊನೆಯ ದಿನವಾಗಿದೆ.

ಒಟ್ಟು ಮೂರು ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಕರೆಯಲಾಗಿದೆ. ಅಂಚೆ ಅಥವ ಖುದ್ದಾಗಿ ಅರ್ಜಿಗಳನ್ನು ಸಲ್ಲಿಕೆ ಮಾಡಲು ಅವಕಾಶವಿಲ್ಲ ಆಯ್ಕೆಯಾದ ಅಭ್ಯರ್ಥಿಗಳಿಗೆ 44,900 ರಿಂದ 1,42,400 ರೂ. ವೇತನ ನಿಗದಿ ಮಾಡಲಾಗಿದೆ.

ಕರ್ನಾಟಕ; ಶಿಕ್ಷಕ, ಉಪನ್ಯಾಸಕರ ನೇಮಕಾತಿ ಬಗ್ಗೆ ಸಚಿವರ ಮಾಹಿತಿ ಕರ್ನಾಟಕ; ಶಿಕ್ಷಕ, ಉಪನ್ಯಾಸಕರ ನೇಮಕಾತಿ ಬಗ್ಗೆ ಸಚಿವರ ಮಾಹಿತಿ

ಕರ್ನಾಟಕ ಹೈಕೋರ್ಟ್ ನೇಮಕಾತಿ ನಿಯಮಗಳ ಪ್ರಕಾರ ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಇಂಗ್ಲಿಶ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು (ಕನ್ನಡವನ್ನು ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು). ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

ಬೀದರ್; ವಿವಿಧ ಹುದ್ದೆಗಳ ನೇಮಕಾತಿ, ಅ.9ರ ತನಕ ಅರ್ಜಿ ಹಾಕಿ ಬೀದರ್; ವಿವಿಧ ಹುದ್ದೆಗಳ ನೇಮಕಾತಿ, ಅ.9ರ ತನಕ ಅರ್ಜಿ ಹಾಕಿ

Karnataka High Court Recruitment Apply For Translator Posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ ನೇಮಕಾತಿ ನಿಯಮಗಳ ಅನ್ವಯ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ 35 ವರ್ಷಗಳು. 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ ಎಸ್‌ ಟಿ ಅಭ್ಯರ್ಥಿಗಳಿಗೆ 5 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ತುಮಕೂರು ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ ತುಮಕೂರು ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು 500 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಎಸ್‌ಸಿ/ ಎಸ್‌ಟಿ/ ಅಂಗವಿಕಲ ಅಭ್ಯರ್ಥಿಗಳಿಗೆ 250 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.

ಲಿಖಿತ ಪರೀಕ್ಷೆ ಮತ್ತು ವೈವಾ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯ ಪತ್ರಿಕೆ 1 ಭಾಷಾ ಪರೀಕ್ಷೆಯದ್ದು ಆಗಿರುತ್ತದೆ (ಕನ್ನಡ, ಇಂಗ್ಲಿಶ್) 100 ಅಂಕಗಳನ್ನು ಪತ್ರಿಕೆ ಹೊಂದಿರುತ್ತದೆ. ಸಾಮಾನ್ಯ, ಪ್ರವರ್ಗ-1, 2ಎ, 2 ಬಿ, 3ಎ, 3ಬಿ ಅಭ್ಯರ್ಥಿಗಳು ಉತ್ತೀರ್ಣಗೊಳ್ಳಲು 60 ಅಂಕ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 50 ಅಂಕಗಳಿಸಬೇಕು.

2ನೇ ಪರೀಕ್ಷೆ ಭಾಷಾಂತರ ಪರೀಕ್ಷೆಯಾಗಿರುತ್ತದೆ (ಕನ್ನಡದಿಂದ ಇಂಗ್ಲಿಶ್, ಇಂಗ್ಲಿಶ್‌ನಿಂದ ಕನ್ನಡ) 100 ಅಂಕಗಳನ್ನು ಪತ್ರಿಕೆ ಒಳಗೊಂಡಿರುತ್ತದೆ. ಲಿಖಿತ ಪರೀಕ್ಷೆಯಲ್ಲಿ ಪಾಸಾಗಲು ಸಾಮಾನ್ಯ, ಪ್ರವರ್ಗ-1, 2ಎ, 2 ಬಿ, 3ಎ, 3ಬಿ ಅಭ್ಯರ್ಥಿಗಳು ಉತ್ತೀರ್ಣಗೊಳ್ಳಲು 60 ಅಂಕ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 50 ಅಂಕಗಳಿಸಬೇಕು.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು 16 ಅಕ್ಟೋಬರ್ 2021 ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಪಾವತಿ ಮಾಡಲು 21 ಅಕ್ಟೋಬರ್ 2021 ಕೊನೆಯ ದಿನ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ karnatakajudiciary.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ; ಶಿವಮೊಗ್ಗ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮ ಯೋಜನೆಗೆ ತಾಲೂಕು ಪಂಚಾಯಿತಿಯಲ್ಲಿ ಒಬ್ಬರು ಯಾವುದೇ ಪದವಿ ಹೊಂದಿರುವ ವಿಕಲಚೇತನರನ್ನು ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನಾಗಿ ಹಾಗೂ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 10ನೇ ತರಗತಿ ಉತ್ತೀರ್ಣ/ ಅನುತ್ತೀರ್ಣ ಹೊಂದಿರುವ ವಿಕಲಚೇತನರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು ಗೌರವಧನ ಆಧಾರದ ಮೇರೆಗೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳುತ್ತಿದೆ.

ಹೊಸನಗರ ತಾಲೂಕಿನ ಹರಿದ್ರಾವತಿ, ಯಡೂರು, ರಾಮಚಂದ್ರಪುರ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಹುದ್ದೆಗಳು ಖಾಲಿಯಿದ್ದು, ಸ್ಥಳೀಯ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅರ್ಜಿಗಳನ್ನು ಸಲ್ಲಿಕೆ ಮಾಡಲು ವಯೋಮಿತಿ 18 ರಿಂದ 45 ವರ್ಷ.

ಅರ್ಹ ವಿಕಲಚೇತನರು ನಿಗದಿತ ನಮೂನೆಯ ಅರ್ಜಿಗಳನ್ನು ತಾಲೂಕು ಪಂಚಾಯಿತಿಯ ಕಚೇರಿಯಿಂದ ಪಡೆದು ಭರ್ತಿ ಮಾಡಿ, ಸೂಕ್ತ ದಾಖಲೆಗಳನ್ನು ಲಗತ್ತಿಸಿ 24/09/2021ರೊಳಗಾಗಿ ಸಲ್ಲಿಸಬೇಕು. ಅರ್ಜಿ ಮತ್ತು ಮಾಹಿತಿಗಾಗಿ ರವಿಕುಮಾರ್ 9731922693 ಸಂಖ್ಯೆಗೆ ಕರೆ ಮಾಡಬಹುದಾಗಿದೆ.

English summary
Karnataka high court invited applications for the translator posts. Candidates can apply till October 16, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X